ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗೆ ವಿಚ್ಛೇದನ ವದಂತಿ; ಹಾರ್ದಿಕ್ ಪಾಂಡ್ಯ ಮಾಡಿದ ಪೋಸ್ಟ್ ವೈರಲ್

ಭಾರತೀಯ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗಿನ ವಿಚ್ಛೇದನದ ಕುರಿತು ಹಲವು ವದಂತಿಗಳ ಕಾರಣಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ವಿಚ್ಛೇದನದ ವದಂತಿಗಳ ಬಗ್ಗೆ ಹಾರ್ದಿಕ್ ಮತ್ತು ನತಾಶಾ ಏನನ್ನೂ ಹೇಳದಿದ್ದರೂ, ಆಲ್ ರೌಂಡರ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಅಪ್ಡೇಟ್ಸ್ ನೀಡಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗಿನ ವಿಚ್ಛೇದನದ ಕುರಿತು ಹಲವು ವದಂತಿಗಳ ಕಾರಣಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. 2024ರ ಟಿ20 ವಿಶ್ವಕಪ್‌ ಅಂಗವಾಗಿ ನ್ಯೂಯಾರ್ಕ್‌ಗೆ ಹಾರಿದ ಭಾರತೀಯ ಕ್ರಿಕೆಟ್ ತಂಡದ ಮೊದಲ ಬ್ಯಾಚ್‌ನಲ್ಲಿ ಕಾಣಿಸಿಕೊಳ್ಳದ ಹಾರ್ದಿಕ್ ಪಾಂಡ್ಯ ಸುತ್ತ ಇನ್ನಷ್ಟು ಊಹಾಪೋಹಗಳು ಕೇಳಿಬಂದಿದ್ದವು. ಅವರು ಸಾಗರೋತ್ತರ ಸ್ಥಳದಲ್ಲಿ ವಿರಾಮದಲ್ಲಿದ್ದಾರೆ ಎಂದು ಕೆಲವು ವರದಿಗಳು ಹೇಳಿದ್ದವು. ವಿಚ್ಛೇದನದ ವದಂತಿಗಳ ಬಗ್ಗೆ ಹಾರ್ದಿಕ್ ಮತ್ತು ನತಾಶಾ ಏನನ್ನೂ ಹೇಳದಿದ್ದರೂ, ಆಲ್ ರೌಂಡರ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಅಪ್ಡೇಟ್ಸ್ ನೀಡಿದ್ದಾರೆ.

ಹಾರ್ದಿಕ್ ಅವರು 'ರಾಷ್ಟ್ರದ ಕರ್ತವ್ಯದಲ್ಲಿ' ಎಂಬ ಶೀರ್ಷಿಕೆಯೊಂದಿಗೆ ಪಂದ್ಯಾವಳಿಗೆ ಮುಂಚಿತವಾಗಿ ತಂಡವನ್ನು ಸೇರಿಕೊಂಡಿರುವುದನ್ನು ತೋರಿಸಲು ಭಾರತೀಯ ಕ್ರಿಕೆಟ್ ತಂಡದ ಅಭ್ಯಾಸದ ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಐಪಿಎಲ್ 2024ನೇ ಆವೃತ್ತಿಯಲ್ಲಿ ರೋಹಿತ್ ಶರ್ಮಾರನ್ನು ಕೆಳಗಿಳಿಸಿ ತಾವೇ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿದ್ದು, ಅಭಿಮಾನಿಗಳ ಒಂದು ವರ್ಗಕ್ಕೆ ಇಷ್ಟವಾಗಿರಲಿಲ್ಲ. ಇದೇ ಕಾರಣಕ್ಕಾಗಿ ಹಾರ್ದಿಕ್ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಇದಲ್ಲದೆ, ಐಪಿಎಲ್‌ನಲ್ಲಿನ ತಮ್ಮ ಕಳಪೆ ಪ್ರದರ್ಶನದಿಂದಾಗಿಯೂ ಮತ್ತಷ್ಟು ಟೀಕೆಗಳನ್ನು ಎದುರಿಸುವಂತಾಯಿತು.

ಈ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕೇವಲ 4 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಉಳಿಸಿದ್ದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಹಾರ್ದಿಕ್ ಪಾಂಡ್ಯ ಅವರು ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರಿಂದ ಸಾಕಷ್ಟು ಟೀಕೆಗಳನ್ನು ಎದುರಿಸಿದರು.

'ಹಾರ್ದಿಕ್ ಅನುಭವಿಸುತ್ತಿರುವ ಬಹಳಷ್ಟು ಸಂಗತಿಗಳು, ವೈಯಕ್ತಿಕವಾಗಿ, ಬಹುಶಃ ಸ್ವಲ್ಪವೂ ಊಹೆಗೆ ಮೀರಿದ್ದಾಗಿರಬಹುದು. ಹಾರ್ದಿಕ್ ಅವರ ನಾಯಕತ್ವದ ಬೆಳವಣಿಗೆ ದೃಷ್ಟಿಯಿಂದ ಇದು ಖಂಡಿತವಾಗಿಯೂ ಕಲಿಕೆಯ ಕಾಲವಾಗಿದೆ. ಈಗ ಸಮಯ ಕಠಿಣವಾಗಿದ್ದರೂ, ಅದು 'ಅವರನ್ನು ಕಠಿಣ ನಾಯಕನನ್ನಾಗಿ ಮಾಡುತ್ತದೆ ಮತ್ತು ಅದು ಖಂಡಿತವಾಗಿಯೂ ಅವರನ್ನು ಉತ್ತಮವಾಗಿ ಬೆಳೆಸುತ್ತದೆ' ಎಂದು ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಾರ್ಕ್ ಬೌಚರ್ ಅವರು ಮೇ 17 ರಂದು ಎಂಐ ತಮ್ಮ ಕೊನೆಯ ಪಂದ್ಯವನ್ನು ಆಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

T20 ವಿಶ್ವಕಪ್‌ಗೆ ಅವರ ಆಯ್ಕೆಯ ಬಗ್ಗೆಯೂ ಕೆಲವು ಪ್ರಶ್ನೆಗಳು ಎದ್ದಿದ್ದವು. ಆದರೆ, ಆಯ್ಕೆ ಮಂಡಳಿಯು ಹಾರ್ದಿಕ್ ಅವರನ್ನು ಉಪನಾಯಕನನ್ನಾಗಿ ನೇಮಿಸುವ ಮೂಲಕ ಅವರ ಮೇಲೆ ನಂಬಿಕೆ ಇಟ್ಟಿರುವುದನ್ನು ತೋರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT