ಸಂಜು ಸ್ಯಾಮ್ಸನ್ ಮತ್ತು ರಾಹುಲ್ ದ್ರಾವಿಡ್ 
ಕ್ರಿಕೆಟ್

'ದ್ರಾವಿಡ್, ಧೋನಿ, Kohli, ರೋಹಿತ್ ನನ್ನ ಮಗನ 10 ವರ್ಷ ಕ್ರಿಕೆಟ್ ಜೀವನ ಹಾಳು ಮಾಡಿದರು': Sanju Samson ತಂದೆ ಆಕ್ರೋಶ!

ಧೋನಿ, ವಿರಾಟ್, ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ನನ್ನ ಮಗನ 10 ವರ್ಷಗಳನ್ನು ಹಾಳು ಮಾಡಿದರು. ಅವರು ನನ್ನ ಮಗನನ್ನು ನೋಯಿಸಿದ್ದಾರೆ. ಆದರೀಗ ನನ್ನ ಮಗ ಈ ಬಿಕ್ಕಟ್ಟಿನಿಂದ ಚೇತರಿಸಿಕೊಂಡಿದ್ದಾನೆ..

ನವದೆಹಲಿ: ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್, ಮಾಜಿ ನಾಯಕರಾದ ವಿರಾಟ್ ಕೊಹ್ಲಿ, ಎಂಎಸ್ ಧೋನಿ ಮತ್ತು ರೋಹಿತ್ ಶರ್ಮಾ ತಮ್ಮ ಮಗನ 10 ವರ್ಷಗಳ ಕ್ರಿಕೆಟ್ ಜೀವನವನ್ನು ಹಾಳು ಮಾಡಿದರು ಎಂದು ಸಂಜು ಸ್ಯಾಮ್ಸನ್ ತಂದೆ ಗಂಭೀರ ಆರೋಪ ಮಾಡಿದ್ದಾರೆ.

ಟಿ20 ಕ್ರಿಕೆಟ್ ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿರುವ ಭಾರತದ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಇದೀಗ ಬೇಡದ ವಿಚಾರವಾಗಿ ಸುದ್ದಿಗೆ ಗ್ರಾಸವಾಗಿದ್ದು, ಸಂಜು ಅವರ ತಂದೆ ನೀಡುರುವ ವಿವಾದಾತ್ಮಕ ಹೇಳಿಕೆ ವ್ಯಾಪಕ ವೈರಲ್ ಆಗುತ್ತಿದೆ.

ಕೋಚ್ ರಾಹುಲ್ ದ್ರಾವಿಡ್, ಮಾಜಿ ನಾಯಕರಾದ ಎಂಎಸ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಮ್ಮ ಮಗನ 10 ವರ್ಷವನ್ನು ಹಾಳು ಮಾಡಿದ್ದಾರೆ ಎಂದು ಸಂಜು ಸ್ಯಾಮ್ಸನ್ ತಂದೆ ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ದೊಡ್ಡ ಆರೋಪ ಮಾಡಿದ್ದು, 'ನನ್ನ ಮಗನ 10 ವರ್ಷಗಳ ವೃತ್ತಿಜೀವನವನ್ನು 3-4 ಮಂದಿ ಹಾಳು ಮಾಡಿದ್ದಾರೆ. ಧೋನಿ, ವಿರಾಟ್, ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ನನ್ನ ಮಗನ 10 ವರ್ಷಗಳನ್ನು ಹಾಳು ಮಾಡಿದರು. ಅವರು ನನ್ನ ಮಗನನ್ನು ನೋಯಿಸಿದ್ದಾರೆ. ಆದರೀಗ ನನ್ನ ಮಗ ಈ ಬಿಕ್ಕಟ್ಟಿನಿಂದ ಚೇತರಿಸಿಕೊಂಡಿದ್ದಾನೆ ಎಂದಿದ್ದಾರೆ.

ಕ್ರೀಸ್ ಶ್ರೀಕಾಂತ್ ರಿಂದಲೂ ನೋವಾಗಿದೆ

ಇದೇ ವೇಳೆ ಮಾಜಿ ಕ್ರಿಕೆಟಿಗ ಕೆ ಶ್ರೀಕಾಂತ್ ಅವರ ಮೇಲೂ ವಿಶ್ವನಾಥ್ ವಾಗ್ದಾಳಿ ನಡೆಸಿದ್ದು, 'ಕೆ. ಶ್ರೀಕಾಂತ್ ಅವರ ಕಾಮೆಂಟ್ ನನಗೆ ತುಂಬಾ ನೋವುಂಟು ಮಾಡಿದೆ. ಬಾಂಗ್ಲಾದೇಶದಂತಹ ತಂಡದ ವಿರುದ್ಧ ಸಂಜು ಸ್ಯಾಮ್ಸನ್ ಶತಕ ಸಿಡಿಸಿದ್ದಾರೆ. ಆದರೆ ಯಾವುದೇ ತಂಡದ ವಿರುದ್ಧ ಬಾರಿಸಿದರೂ, ಶತಕ ಶತಕವೇ. ಸಂಜು ಒಬ್ಬ ಕ್ಲಾಸಿಕ್ ಆಟಗಾರ. ಅವರ ಬ್ಯಾಟಿಂಗ್ ಸಚಿನ್ ಮತ್ತು ರಾಹುಲ್ ದ್ರಾವಿಡ್ ಅವರಂತೆ ಶ್ರೇಷ್ಠವಾಗಿದೆ ಎಂದಿದ್ದಾರೆ.

ಈ ಹಿಂದೆಯೂ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವನಾಥ್

ವಾಸ್ತವವಾಗಿ ಸಂಜು ಸ್ಯಾಮ್ಸನ್ ತಮ್ಮ ತಂದೆಯವರ ಈ ರೀತಿಯ ಹೇಳಿಕೆಗಳಿಂದ ಸಂಕಷ್ಟಕ್ಕೆ ಸಿಲುಕಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಅವರು 2016ರಲ್ಲಿ ಕೇರಳ ಕ್ರಿಕೆಟ್ ಸಂಸ್ಥೆಯ ಅಧಿಕಾರಿಗಳೊಂದಿಗೆ ಜಗಳವಾಡಿದ್ದರು. ಇದರಿಂದ ಸಂಜು ಅವರಿಗೆ ತಮ್ಮ ತಂದೆಯನ್ನು ಮೈದಾನಕ್ಕೆ ಕರೆತರದಂತೆ ಎಚ್ಚರಿಕೆ ನೀಡಲಾಗಿತ್ತು.

ಟಿ20ಯಲ್ಲಿ ಅದ್ಭುತ ಪ್ರದರ್ಶನ

ಸತತ ವೈಫಲ್ಯಗಳಿಂದ ಭಾರತ ತಂಡದಲ್ಲಿ ಖಾಯಂ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್, ಪ್ರಸ್ತುತ ಭಾರತ ಟಿ20 ತಂಡದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಪಂದ್ಯವನ್ನಾಡುತ್ತಿರುವ ಭಾರತ ಟಿ20 ತಂಡದಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಸಂಜು, ಮೊದಲ ಟಿ20ಯಲ್ಲಿ ಅದ್ಭುತ ಶತಕ ಬಾರಿಸಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾಗಿದ್ದರು. ಇದಕ್ಕೂ ಮುನ್ನ ಬಾಂಗ್ಲಾದೇಶ ವಿರುದ್ಧವೂ ಸಂಜು ಶತಕ ಬಾರಿಸಿದ್ದರು. ಈ ಮೂಲಕ ಸತತ ಎರಡು ಟಿ20 ಪಂದ್ಯಗಳಲ್ಲಿ ಶತಕ ಬಾರಿಸುವ ಮೂಲಕ ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT