ಸಂಗ್ರಹ ಚಿತ್ರ 
ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್: ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದ ಭಾರತ!

ಭಾರತೀಯ ಪುರುಷರ ಅಂಧ ಕ್ರಿಕೆಟ್ ತಂಡದ ನಾಯಕ ದುರ್ಗಾ ರಾವ್ ತೋಂಪಕಿ, ನಾವು ಉತ್ಸಾಹದಿಂದ ಆಡುತ್ತೇವೆ. ನಮ್ಮ ದೇಶವನ್ನು ಬಹಳ ಹೆಮ್ಮೆಯಿಂದ ಪ್ರತಿನಿಧಿಸುತ್ತೇವೆ. ನಾವು ಯಾವಾಗಲೂ ದೊಡ್ಡ ವೇದಿಕೆಯಲ್ಲಿ ಸ್ಪರ್ಧಿಸಲು ಎದುರು ನೋಡುತ್ತೇವೆ ಎಂದರು.

ನವದೆಹಲಿ: ನವೆಂಬರ್ 22ರಿಂದ ಡಿಸೆಂಬರ್ 3ರವರೆಗೆ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಮುಂಬರುವ ನಾಲ್ಕನೇ ಟಿ20 ಅಂಧರ ವಿಶ್ವಕಪ್ ಕ್ರಿಕೆಟ್‌ನಿಂದ ಹಿಂದೆ ಸರಿಯಲು ಭಾರತೀಯ ಕ್ರಿಕೆಟ್ ಸಂಸ್ಥೆ (ಸಿಎಬಿಐ) ನಿರ್ಧರಿಸಿದೆ. ಭಾರತ ಸರ್ಕಾರದಿಂದ ಅನುಮೋದನೆ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಭಾರತೀಯ ಪುರುಷರ ಅಂಧ ಕ್ರಿಕೆಟ್ ತಂಡದ ನಾಯಕ ದುರ್ಗಾ ರಾವ್ ತೋಂಪಕಿ, ನಾವು ಉತ್ಸಾಹದಿಂದ ಆಡುತ್ತೇವೆ. ನಮ್ಮ ದೇಶವನ್ನು ಬಹಳ ಹೆಮ್ಮೆಯಿಂದ ಪ್ರತಿನಿಧಿಸುತ್ತೇವೆ. ನಾವು ಯಾವಾಗಲೂ ದೊಡ್ಡ ವೇದಿಕೆಯಲ್ಲಿ ಸ್ಪರ್ಧಿಸಲು ಎದುರು ನೋಡುತ್ತೇವೆ ಮತ್ತು ಈ ಅವಕಾಶವನ್ನು ಕಳೆದುಕೊಂಡಿರುವುದು ನಿರಾಶಾದಾಯಕವಾಗಿದೆ ಎಂದರು.

CABI ಹೊಸ ಪ್ರತಿಭೆಗಳನ್ನು ಉತ್ತೇಜಿಸಲು ಮತ್ತು ಅದರ ಆಟಗಾರರ ಕೌಶಲ್ಯಗಳನ್ನು ಹೆಚ್ಚಿಸುವತ್ತ ಗಮನಹರಿಸುವುದನ್ನು ಮುಂದುವರೆಸಿದೆ, ಇದರಿಂದಾಗಿ ತಂಡವು ಭವಿಷ್ಯದ ಸ್ಪರ್ಧೆಗಳಿಗೆ ಸಿದ್ಧವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಭಾರತದಲ್ಲಿ ನಡೆದ ಹಿಂದಿನ ಮೂರು ಆವೃತ್ತಿಗಳಲ್ಲಿ (2012, 2017 ಮತ್ತು 2022) ಅಂಧರ T20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಭಾರತ ಮೊದಲ ಎರಡು ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದ್ದರೆ 2022ರಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಚಾಂಪಿಯನ್​ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT