ಕೆಎಲ್ ರಾಹುಲ್-ಜೈಸ್ವಾಲ್ ಭರ್ಜರಿ ಬ್ಯಾಟಿಂಗ್ 
ಕ್ರಿಕೆಟ್

Border Gavaskar Trophy: ಮೊದಲ ಟೆಸ್ಟ್, 2ನೇ ದಿನದಾಟ ಅಂತ್ಯ; ಆಸಿಸ್ ಬೌಲರ್ ಗಳು ಹೈರಾಣ, ಭಾರತಕ್ಕೆ ಭರ್ಜರಿ ಮುನ್ನಡೆ!

ಆಸ್ಟ್ರೇಲಿಯಾ ಪರ ಇಂದು ನಾಯಕ ಪ್ಯಾಟ್ ಕಮಿನ್ಸ್ ಸೇರಿದಂತೆ ಒಟ್ಟು 7 ಬೌಲರ್ ಗಳು ದಾಳಿ ಮಾಡಿದರೂ ಯಾರೂ ಕೂಡ ಭಾರತದ ಒಂದೇ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾಗಲಿಲ್ಲ.

ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು, 2ನೇ ಇನ್ನಿಂಗ್ಸ್ ನಲ್ಲಿ 2ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 172 ರನ್ ಕಲೆಹಾಕಿದೆ. ಅಲ್ಲದೆ 218 ರನ್ ಗಳ ಮುನ್ನಡೆ ಸಾಧಿಸಿದೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 104 ರನ್ ಗಳಿಗೇ ಆಲೌಟ್ ಆಗಿದ್ದು, ಆ ಮೂಲಕ ಭಾರತದ ವಿರುದ್ಧ 46ರನ್ ಗಳ ಹಿನ್ನಡೆ ಅನುಭವಿಸಿತು.

46 ರನ್ ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ನೀಡಿದ್ದು, ಮುರಿಯದ ಮೊದಲ ವಿಕೆಟ್ ಗೆ ಈ ಜೋಡಿ 172 ರನ್ ಕಲೆಹಾಕಿದೆ. ಅಲ್ಲದೆ ಆ ಮೂಲಕ ಭಾರತಕ್ಕೆ 218 ರನ್ ಮುನ್ನಡೆ ತಂದಿತ್ತಿದೆ.

ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 193 ಎಸೆತಗಳಲ್ಲಿ 2 ಸಿಕ್ಸರ್ 7 ಬೌಂಡರಿ ಸಹಿತ ಅಜೇಯ 90 ರನ್ ಕಲೆಹಾಕಿದ್ದು, ಅವರಿಗೆ ಉತ್ತಮ ಸಾಥ್ ನೀಡಿದ ಕೆಎಲ್ ರಾಹುಲ್ ಕೂಡ 153 ಎಸೆತಗಳಲ್ಲಿ 4 ಬೌಂಡರಿ ಸಹಿತ 62 ಕಲೆಹಾಕಿ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಆಸ್ಟ್ರೇಲಿಯಾ ಪರ ಇಂದು ನಾಯಕ ಪ್ಯಾಟ್ ಕಮಿನ್ಸ್ ಸೇರಿದಂತೆ ಒಟ್ಟು 7 ಬೌಲರ್ ಗಳು ದಾಳಿ ಮಾಡಿದರೂ ಯಾರೂ ಕೂಡ ಭಾರತದ ಒಂದೇ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾಗಲಿಲ್ಲ. ಒಟ್ಟಾರೆ ಇಂದು ತನ್ನ ಉತ್ತಮ ಪ್ರದರ್ಶನದ ಮೂಲಕ ಭಾರತ ತಂಡ ದಿನದ ಗೌರವ ಪಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!