ಜೈಸ್ವಾಲ್ ಮತ್ತು ಕೆಎಲ್ ರಾಹುಲ್ 
ಕ್ರಿಕೆಟ್

BGT 2025: ಆಸಿಸ್ ನೆಲದಲ್ಲಿ 38 ವರ್ಷಗಳ ಬಳಿಕ ಇತಿಹಾಸ ಬರೆದ KL Rahul and Yashasvi Jaiswal!

ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಟೀಮ್ ಇಂಡಿಯಾದ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಹೌದು.. ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ನಡೆಸಿದ್ದು, ಭಾರತಕ್ಕೆ ಭದ್ರಬುನಾದಿ ಹಾಕಿಕೊಟ್ಟ ಆರಂಭಿಕರಾದ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ 201 ರನ್​ಗಳ ಜೊತೆಯಾಟವಾಡಿದ್ದು, ಆ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ದ್ವಿಶತಕದ ಜೊತೆಯಾಟವಾಡಿದ ಭಾರತದ ಮೊದಲ ಆರಂಭಿಕ ಜೋಡಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಜೋಡಿಯ ದಾಖಲೆ ಸುನಿಲ್ ಗವಾಸ್ಕರ್ ಹಾಗೂ ಕ್ರಿಸ್ ಶ್ರೀಕಾಂತ್ ಹೆಸರಿನಲ್ಲಿತ್ತು. ಈ ಜೋಡಿ 1986 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಜೋಡಿಯು ಮೊದಲ ವಿಕೆಟ್​ಗೆ 191 ರನ್ ಕಲೆಹಾಕಿ ಇತಿಹಾಸ ನಿರ್ಮಿಸಿದ್ದರು.

ಇದೀಗ 38 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಟೀಮ್ ಇಂಡಿಯಾದ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 150 ರನ್​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ 104 ರನ್​ಗಳಿಗೆ ಸರ್ವಪತನ ಕಂಡಿತ್ತು. ಇದಕ್ಕೆ ಉತ್ತರವಾಗಿ 2ನೇ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ನಡೆಸುತ್ತಿರುವ ಭಾರತ 5 ವಿಕೆಟ್ ನಷ್ಟಕ್ಕೆ 347 ರನ್ ಗಳಿಸಿದ್ದು, 393 ರನ್ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Afghanistan-Pakistan War: ತಕ್ಷಣದ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪಿಗೆ: ಕತಾರ್ ವಿದೇಶಾಂಗ ಸಚಿವಾಲಯ

ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾ.ಪಂ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಸ್ವತ್ತು ಸೌಲಭ್ಯ..!

ಬಿಲ್​ ಕ್ಲಿಯರ್'ಗೆ ಗುತ್ತಿಗೆದಾರರ ಆಗ್ರಹ: DCM ಡಿಕೆ.ಶಿವಕುಮಾರ್ ಮಧ್ಯಪ್ರವೇಶ, ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ

ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ: ಪ್ರಿಯಾಂಕ್ ಖರ್ಗೆ

BJP-RSS ವಿರುದ್ಧ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ ಕಾಂಗ್ರೆಸ್

SCROLL FOR NEXT