ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ 
ಕ್ರಿಕೆಟ್

IPL Auction 2025: 10.75 ಕೋಟಿಗೆ ಭುವನೇಶ್ವರ್ ಕುಮಾರ್, 5.75 ಕೋಟಿಗೆ ಕೃನಾಲ್ ಪಾಂಡ್ಯ RCB ಗೆ ಸೇರ್ಪಡೆ

2021 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದಿದ್ದ ಕೃನಾಲ್​ರನ್ನು ಲಕ್ನೋ ಫ್ರಾಂಚೈಸ್ 8.25 ಕೋಟಿ ರೂಪಾಯಿ ನೀಡಿ ತಂಡಕ್ಕೆ ಸೇರಿಸಿಕೊಂಡಿತ್ತು.

ಜಿದ್ದಾ: ಸೌದಿ ಅರಬೀಯಾದ ಜಿದ್ದಾದಲ್ಲಿ ನಡೆಯುತ್ತಿರುವ IPL 2025 ಮೆಗಾ ಹರಾಜಿನಲ್ಲಿ ಟೀಂ ಇಂಡಿಯಾದ ವೇಗಿ ಭುವನೇಶ್ವರ್ ಕುಮಾರ್ ಹಾಗೂ ಸ್ಪಿನ್ ಬೌಲರ್ ಕೃನಾಲ್ ಪಾಂಡ್ಯ ಅವರು RCB ಪಾಲಾಗಿದ್ದಾರೆ.

ಎರಡನೇ ದಿನದ ಹರಾಜು ಪ್ರಕ್ರಿಯೆಯಲ್ಲಿ RCB ವೇಗಿ ಭುವನೇಶ್ವರ್ ಕುಮಾರ್ ಗೆ 10.75 ಕೋಟಿ ರೂ. ನೀಡಿ ಖರೀದಿಸಿತು. ಅದೇ ರೀತಿ ಹಾರ್ದಿಕ್ ಪಾಂಡ್ಯ ಅವರ ಸಹೋದರ,ಸ್ಪಿನ್ ಆಲ್‌ರೌಂಡರ್ ಕೃನಾಲ್ ಪಾಂಡ್ಯಗೆ ಕೃನಾಲ್ ಪಾಂಡ್ಯಗೆ 5.75 ಕೋಟಿ ಬಿಡ್ ಸಲ್ಲಿಸಿತು.

2 ಕೋಟಿ ಮೂಲ ಬೆಲೆ ಹೊಂದಿದ್ದ ಭುವನೇಶ್ವರ್ ಕುಮಾರ್ ಅವರನ್ನು ಖರೀದಿಸಲು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಭಾರೀ ಪೈಪೋಟಿ ನಡೆಸಿದವು. ಲಕ್ನೋ ಸೂಪರ್ ಜೈಂಟ್ಸ್ 10 ಕೋಟಿ ಬಿಡ್ ಸಲ್ಲಿಸಿತು. ಅಂತಿಮವಾಗಿ RCB 10. 75 ಕೋಟಿ ಬಿಡ್ ಸಲ್ಲಿಸುವ ಮೂಲಕ ಭುವಿ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿತು.

ಕೃನಾಲ್ ಪಾಂಡ್ಯ ಖರೀದಿಗಾಗಿ ಬೆಂಗಳೂರು ಮತ್ತು ರಾಜಸ್ಥಾನ ನಡುವೆ ಹಣಾಹಣಿ ಏರ್ಪಟ್ಟಿತ್ತು. ಅಂತಿಮವಾಗಿ ಅವರನ್ನು ಆರ್ ಸಿಬಿ ಖರೀದಿಸಿತು.ಈ ಹಿಂದೆ ಕೃನಾಲ್ ಪಾಂಡ್ಯ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡದ ಪರ ಆಡಿದ್ದರು.

2021 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದಿದ್ದ ಕೃನಾಲ್​ರನ್ನು ಲಕ್ನೋ ಫ್ರಾಂಚೈಸ್ 8.25 ಕೋಟಿ ರೂಪಾಯಿ ನೀಡಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ, ನಿರೀಕ್ಷೆಗೆ ತಕ್ಕಂತ ಪ್ರದರ್ಶನ ನೀಡದ ಕಾರಣ ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್‌ನಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ವಿಫಲರಾದರು.

ಇನ್ನು ಐಪಿಎಲ್‌ನಲ್ಲಿ 127 ಪಂದ್ಯಗಳನ್ನು ಆಡಿರುವ ಕೃನಾಲ್ 132.82 ರ ಸ್ಟ್ರೈಕ್ ರೇಟ್ ಹಾಗೂ 22.56ರ ಸರಾಸರಿಯೊಂದಿಗೆ 1,647 ರನ್‌ ಕಲೆಹಾಕಿದ್ದಾರೆ. ಹಾಗೆಯೇ ಸ್ಪಿನ್ ಬೌಲರ್ ಆಗಿರುವ ಕೃನಾಲ್, ಇದುವರೆಗೆ ಆಡಿರುವ 127 ಪಂದ್ಯಗಳಲ್ಲಿ 34.28 ರ ಸರಾಸರಿ ಮತ್ತು 7.36 ರ ಎಕಾನಮಿ ದರದಲ್ಲಿ 76 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇನ್ನು ತುಷಾರ್ ದೇಶ್ ಪಾಂಡೆ ರೂ. 6.50 ಕೋಟಿಗೆ ರಾಜಸ್ಥಾನ ರಾಯಲ್ಸ್ ಪಾಲಾದರು. ನಿತೀಶ್ ರಾಣಾ ಕೂಡಾ ರೂ. 4. 20 ಕೋಟಿಗೆ ರಾಜಸ್ಥಾನ ರಾಯಲ್ಸ್ ಪ್ರಾಂಚೈಸಿ ಸೇರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT