ಮಯಾಂಕ್ ಯಾದವ್ 
ಕ್ರಿಕೆಟ್

1st T20I: 127 ರನ್ ಗೆ ಬಾಂಗ್ಲಾದೇಶ ಆಲೌಟ್; ಪದಾರ್ಪಣೆ ಪಂದ್ಯದಲ್ಲೇ ಗಮನ ಸೆಳೆದ Mayank Yadav

ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬಾಂಗ್ಲಾದೇಶಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು.

ಗ್ವಾಲಿಯರ್: ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡ 127ರನ್ ಗೆ ಆಲೌಟ್ ಆಗಿದ್ದು, ಭಾರತಕ್ಕೆ ಗೆಲ್ಲಲು 128ರನ್ ಗಳ ಸಾಧಾರಣ ಗುರಿ ನೀಡಿದೆ.

ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬಾಂಗ್ಲಾದೇಶಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 19.5 ಓವರ್ ನಲ್ಲಿ 127ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ಬಾಂಗ್ಲಾದೇಶ ಪರ ನಾಯಕ ಶಾಂಟೋ (27 ರನ್) ಮತ್ತು ಮೆಹ್ದಿ ಹಸನ್ ಮಿರಾಜ್ (35 ರನ್) ಅವರನ್ನು ಬಿಟ್ಟರೆ ಉಳಿದಾವ ಬ್ಯಾಟರ್ ನಿಂದಲೂ ಪರಿಣಾಮಕಾರಿ ಬ್ಯಾಟಿಂಗ್ ಪ್ರದರ್ಶನ ಮೂಡಿ ಬರಲಿಲ್ಲ. ಆರಂಭಿಕರಾದ ಪರ್ವೇಜ್ ಹೊಸೇನ್ (8) ಮತ್ತು ಲಿಟ್ಟನ್ ದಾಸ್ (4) ಒಂದಂಕಿ ಮೊತ್ತಕ್ಕೇ ಔಟಾಗಿದ್ದು ಬಾಂಗ್ಲಾತಂಡಕ್ಕೆ ಚೇತರಿಸಿಕೊಳ್ಳಲಾಗದ ಹೊಡೆತವಾಯಿತು.

ಮಧ್ಯಮ ಕ್ರಮಾಂಕದಲ್ಲಿ ಮಹಮದುಲ್ಲಾ (1), ಜಾಕಿರ್ ಅಲಿ (8) ಕೂಡ ಒಂದಂಕಿ ಮೊತ್ತಕ್ಕೇ ಔಟಾದರು. ಅಂತಿಮವಾಗಿ ಬಾಂಗ್ಲಾದೇಶ ತಂಡ 19.5 ಓವರ್ ನಲ್ಲಿ 127ರನ್ ಗಳಿಗೆ ಆಲೌಟ್ ಆಗಿ ಭಾರತಕ್ಕೆ ಗೆಲ್ಲಲು 128 ರನ್ ಗಳ ಗುರಿ ನೀಡಿತು.

ಭಾರತದ ಪರ ಅರ್ಶ್ ದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ ಪ್ರಭಾವಿ ಬೌಲಿಂಗ್ ತಲಾ ಮೂರು ವಿಕೆಟ್ ಕಬಳಿಸಿದರು.

ಪದಾರ್ಪಣೆ ಪಂದ್ಯದಲ್ಲೇ ಗಮನ ಸೆಳೆದ Mayank Yadav

ಇನ್ನು ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಮಯಾಂಕ್ ಯಾದವ್ ಮೊದಲ ಪಂದ್ಯದಲ್ಲೇ ಗಮನ ಸೆಳೆದರು. ಒಟ್ಟು ನಾಲ್ಕು ಓವರ್ ಎಸೆದ ಮಯಾಂಕ್ ಯಾದವ್ 1 ಮೇಡನ್ ಸಹಿತ 21 ರನ್ ನೀಡಿ ಒಂದು ವಿಕೆಟ್ ಪಡೆದರು. ಉಳಿದಂತೆ ಹಾರ್ದಿಕ್ ಪಾಂಡ್ಯಾ ಮತ್ತು ವಾಷಿಂಗ್ಟನ್ ಸುಂದರ್ ಕೂಡ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT