ಗ್ವಾಲಿಯರ್: ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟೆಸ್ಟ್ ಸರಣಿ ಜಯಿಸಿದ ವಿಶ್ವಾಸದಲ್ಲಿರುವ ಭಾರತ ತಂಡ ಟಿ20 ಸರಣಿಯನ್ನೂ ಗೆಲ್ಲುವ ವಿಶ್ವಾಸದಲ್ಲಿದೆ.
ಇನ್ನು ಟಿ20 ತಂಡದಲ್ಲಿ ಹಲವು ಉದಯೋನ್ಮುಖ ಪ್ರತಿಭೆಗಳಿಗೆ ಮಣೆ ಹಾಕಲಾಗಿದ್ದು, ಅಭಿಷೇಕ್ ಶರ್ಮಾ ತಂಡ ಸೇರಿಕೊಂಡಿದ್ದಾರೆ. ಅಂತೆಯೇ ದೇಶೀಯ ಕ್ರಿಕೆಟ್ ನಲ್ಲಿ ಸಾಮರ್ಥ್ಯ ಪ್ರದರ್ಶನ ಮಾಡಿದ್ದ ನಿತೀಶ್ ರೆಡ್ಡಿ, ಮಯಾಂಕ್ ಯಾದವ್ ಮತ್ತು ವರುಣ್ ಚಕ್ರವರ್ತಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಅತ್ತ ಬಾಂಗ್ಲಾದೇಶ ಕೂಡ ಭಾರತದ ವಿರುದ್ಧದ ಸರಣಿಗೆ ಪ್ರಬಲ ತಂಡವನ್ನೇ ಆಯ್ಕೆ ಮಾಡಿದ್ದು, ಪರ್ವೇಜ್ ಹೊಸೈನ್ ಎಮನ್, ಜೇಕರ್ ಅಲಿ ಮತ್ತು ರಿಶಾದ್ ಹೊಸೈನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಮಯಾಂಕ್ ಯಾದವ್, ನಿತೀಶ್ ರೆಡ್ಡಿ ಪದಾರ್ಪಣೆ
ಇನ್ನು ಇಂದಿನ ಪಂದ್ಯದ ಮೂಲಕ ಉದಯೋನ್ಮುಖ ಆಟಗಾರರಾದ ಮಯಾಂಕ್ ಯಾದವ್ ಮತ್ತು ನಿತೀಶ್ ರೆಡ್ಡಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದಾರೆ. ಮಾಜಿ ಕ್ರಿಕೆಟಿಗ ಮುರಳಿ ಕಾರ್ತಿಕ್ ಮಯಾಂಕ್ ಯಾದವ್ ಗೆ ಮತ್ತು ಪಾರ್ಥಿವ್ ಪಟೇಲ್ ನಿತೀಶ್ ರೆಡ್ಡಿಗೆ ಕ್ಯಾಪ್ ನೀಡುವ ಮೂಲಕ ತಂಡಕ್ಕೆ ಸೇರ್ಪಡೆ ಮಾಡಿದರು.
ತಂಡಗಳು ಇಂತಿವೆ
ಬಾಂಗ್ಲಾದೇಶ: ಲಿಟ್ಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಪರ್ವೇಜ್ ಹೊಸೈನ್ ಎಮನ್, ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ಜೇಕರ್ ಅಲಿ, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ
ಭಾರತ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ನಿತೀಶ್ ರೆಡ್ಡಿ, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್