ಭಾರತ ತಂಡಕ್ಕೆ ಭರ್ಜರಿ ಜಯ 
ಕ್ರಿಕೆಟ್

2nd T20: Bangladesh ವಿರುದ್ಧ ಭಾರತ ತಂಡಕ್ಕೆ ಭರ್ಜರಿ ಗೆಲುವು, ಸೂರ್ಯ ಕುಮಾರ್ ಯಾದವ್ ಪಡೆಗೆ ಸರಣಿ ಜಯ!

ನಿರೀಕ್ಷೆಯಂತೆಯೇ 2ನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದ್ದು, 3 ಪಂದ್ಯಗಳ ಟಿ20 ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ನವದೆಹಲಿ: ನಿರೀಕ್ಷೆಯಂತೆಯೇ 2ನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದ್ದು, 3 ಪಂದ್ಯಗಳ ಟಿ20 ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ನೀಡಿದ 222ರನ್ ಗಳ ಬೃಹತ್ ಮೊತ್ತವನ್ನು ಬೆನ್ನು ಹತ್ತುವಲ್ಲಿ ಬಾಂಗ್ಲಾದೇಶ ವಿಫಲವಾಗಿದೆ. ಬಾಂಗ್ಲಾದೇಶ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 135 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಆ ಮೂಲಕ 86 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಅಲ್ಲದೆ 3 ಪಂದ್ಯಗಳ ಟಿ20 ಸರಣಿಯನ್ನು 0-2 ಅಂತರದಲ್ಲಿ ಕೈ ಚೆಲ್ಲಿದೆ.

dew ಫ್ಯಾಕ್ಟರ್ ಹೊರತಾಗಿಯೂ ಭಾರತ ತಂಡದ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದರು. ಭಾರತ ತಂಡದ ಬೌಲರ್ ಗಳ ಶಿಸ್ತಿನ ಬೌಲಿಂಗ್ ಪ್ರದರ್ಶನದ ಎದುರು ಬಾಂಗ್ಲಾದೇಶ ಬ್ಯಾಟರ್ ಗಳು ಮಂಕಾದರು. ಬಾಂಗ್ಲಾದೇಶ ಪರ ಮಹಮದುಲ್ಲಾ ಹೊರತುಪಡಿಸಿದರೆ ಉಳಿದಾವ ಬ್ಯಾಟರ್ ಗಳಿಂದಲೂ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶನ ಮೂಡಿ ಬರಲಿಲ್ಲ.

ಭಾರತ ತಂಡದ ಪರ ವರಣ್ ಚಕ್ರವರ್ತಿ, ನಿತೀಶ್ ರೆಡ್ಡಿ ತಲಾ 2 ವಿಕೆಟ್ ಗಳಿಸಿದರೆ, ಅರ್ಶ್ ದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಯಾಂಕ್ ಯಾದವ್ ಮತ್ತು ರಿಯಾನ್ ಪರಾಗ್ ತಲಾ 1 ವಿಕೆಟ್ ಪಡೆದರು.

ಮಹಮದುಲ್ಲಾ ಏಕಾಂಗಿ ಹೋರಾಟ

ಇನ್ನು ಬಾಂಗ್ಲಾದೇಶ ಪರ ಮಹಮದುಲ್ಲಾ ಏಕಾಂಗಿ ಹೋರಾಟ ನಡೆಸಿದರು. ಒಟ್ಟು 39 ಎಸೆತಗಳನ್ನು ಎದುರಿಸಿದ ಮಹಮದುಲ್ಲಾ 3 ಸಿಕ್ಸರ್ ಸಹಿತ 41 ರನ್ ಗಳಿಸಿ ಅಂತಿಮ ಓವರ್ ನಲ್ಲಿ ನಿತೀಶ್ ರೆಡ್ಡಿಗೆ ವಿಕೆಟ್ ಒಪ್ಪಿಸಿದರು.

ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ನಿತೀಶ್ ರೆಡ್ಡಿ ಮಿಂಚಿಂಗ್

ಇನ್ನು ಭಾರತ ತಂಡದ ಬ್ಯಾಟಿಂಗ್ ವೇಳೆ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ನಿತೀಶ್ ರೆಡ್ಡಿ ಬಳಿಕ ಬೌಲಿಂಗ್ ನಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಒಟ್ಟು 4 ಓವರ್ ಎಸೆದ ನಿತೀಶ್ ರೆಡ್ಡಿ 5.80 ಸರಾಸರಿಯಲ್ಲಿ ಕೇವಲ 23 ರನ್ ನೀಡಿ 2 ವಿಕೆಟ್ ಕಬಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT