ಸಂಜು ಸ್ಯಾಮ್ಸನ್ 
ಕ್ರಿಕೆಟ್

Video: ಒಂದೇ ಓವರ್ ನಲ್ಲಿ 6,6,6,6,6 ಸಿಡಿಸಿದ Sanju Samson; ವೇಗದ ಶತಕ ಬಾರಿಸಿ ದಾಖಲೆ!

ಹೈದರಾಬಾದ್ ನಲ್ಲಿ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಭಾರತ ಬ್ಯಾಟಿಂಗ್ ಮಾಡಿತು. ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಅಬ್ಬರ ಬ್ಯಾಟಿಂಗ್ ನಡೆಸಿದರು.

ಬಾಂಗ್ಲಾದೇಶ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಭಾರತೀಯ ಬ್ಯಾಟರ್ ಗಳ ಅಬ್ಬರಕ್ಕೆ ಬಾಂಗ್ಲಾ ಬೌಲರ್ ಗಳು ಅಕ್ಷರಶಃ ತತ್ತರಿಸಿದರು.

ಹೈದರಾಬಾದ್ ನಲ್ಲಿ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಭಾರತ ಬ್ಯಾಟಿಂಗ್ ಮಾಡಿತು. ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಅಬ್ಬರ ಬ್ಯಾಟಿಂಗ್ ನಡೆಸಿದರು. ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಸ್ಯಾಮ್ಸನ್ 22 ಎಸೆತಗಳಲ್ಲಿ 50 ರನ್ ಪೇರಿಸಿ ವೇಗದ ಅರ್ಧಶತಕ ಸಿಡಿಸಿದರು. ಇದರ ಬೆನ್ನಲ್ಲೇ ಸೂರ್ಯಕುಮಾರ್ ಸಹ 23 ಎಸೆತಗಳಲ್ಲಿ 50 ರನ್ ಪೇರಿಸಿದರು.

ಇನ್ನು ರಶೀದ್ ಹುಸೇನ್ ಅವರ 2ನೇ ಓವರ್ ನಲ್ಲಿ ಆರ್ಭಟಿಸಿದ ಸ್ಯಾಮನ್ಸ್ ಮೊದಲ ಎಸೆತದಲ್ಲಿ ಶೂನ್ಯ ಸುತ್ತಿದರು. ಆದರೆ ನಂತರ ಐದು ಎಸೆತಗಳನ್ನು ಸಿಕ್ಸರ್ ಬಾರಿಸುವ ಮೂಲಕ ಒಂದೇ ಓವರ್ ನಲ್ಲಿ 30 ರನ್ ಪೇರಿಸಿದರು. ನಂತರ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮನ್ಸ್ 40ನೇ ಎಸೆತವನ್ನು ಬೌಂಡರಿ ಸಿಡಿಸುವ ಮೂಲಕ ದಾಖಲೆಯ ಶತಕ ಸಿಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ