ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಿಗೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಿದ್ದಾರೆ. ಪ್ರಸ್ತುತ ರಣಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ ತಮಿಳುನಾಡು ಪರವಾಗಿ ಆಡುತ್ತಿರುವ ಸುಂದರ್ 152 ರನ್ ಗಳಿಸಿದ ನಂತರ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಪುಣೆಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪರ ಆಡಲಿದ್ದಾರೆ ಎಂದು ಬಿಸಿಸಿಐ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳಿಂದ ಹೀನಾಯವಾಗಿ ಸೋತ ಬೆನ್ನಲ್ಲೇ ಆಯ್ಕೆದಾರರು ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೆ ಮಣೆ ಹಾಕಿದ್ದಾರೆ.
ಆರ್.ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಸೇರಿದಂತೆ ಪ್ರಸ್ತುತ ತಂಡದಲ್ಲಿ ಮೂವರು ಸ್ಪೀನ್ನರ್ ಇದ್ದಾರೆ. ಪುಣೆಯಲ್ಲಿ ಅಕ್ಟೋಬರ್ 24 ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೂವರ ಸ್ಪಿನ್ನರ್ ಪೈಕಿ ಒಬ್ಬರ ಬದಲಿಯಾಗಿ ವಾಷಿಂಗ್ಟನ್ ಸುಂದರ್ ಆಡಲಿದ್ದಾರೆ ಎನ್ನಲಾಗಿದೆ.
ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ) ಜಸ್ಪ್ರೀತ್ ಬೂಮ್ರಾ (ವಿಕೆಟ್ ಕೀಪರ್) ಯಶಸ್ವಿ ಜೈ ಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್) ಧ್ರುವ ಜುರೆಲ್ (ವಿಕೆಟ್ ಕೀಪರ್) ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್