ಇಂಗ್ಲೆಂಡ್ ಆಟಗಾರ ಮೊಯಿನ್ ಅಲಿ 
ಕ್ರಿಕೆಟ್

Moeen Ali: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್‌ ನ ಆಲ್ ರೌಂಡರ್ ನಿವೃತ್ತಿ ಘೋಷಣೆ

ಮೊಯಿನ್ ಅಲಿ ಅವರು ಇದೇ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು. ಮೊಯಿನ್ ಅಲಿ ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್ ರೌಂಡರ್ ಮೊಯಿನ್ ಅಲಿ ಇಂದು (ಭಾನುವಾರ) ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ನಿವೃತ್ತಿ ಕುರಿತು ಪೋಸ್ಟ್ ಮಾಡಿರುವ ಮೊಯಿನ್ ಅಲಿ, ‘ನನಗೆ 37 ವರ್ಷ ವಯಸ್ಸಾಗಿದೆ. ಈ ತಿಂಗಳ ಆಸ್ಟ್ರೇಲಿಯಾ ಸರಣಿಗೂ ಆಯ್ಕೆಯಾಗಿಲ್ಲ. ನಾನು ಇಂಗ್ಲೆಂಡ್‌ ಪರವಾಗಿ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ. ಇದು ಮುಂದಿನ ಪೀಳಿಗೆಗೆ ಅವಕಾಶ ನೀಡುವ ಸಮಯವಾಗಿದ್ದು, ನಿವೃತ್ತಿ ಘೋಷಿಸುವುದು ಸೂಕ್ತ’ ಎಂದು ಮೊಯಿನ್ ಅಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಅಂತೆಯೇ 'ನನಗೆ ತುಂಬಾ ಹೆಮ್ಮೆ ಇದೆ. ನಾನು ಮೊದಲು ಇಂಗ್ಲೆಂಡ್‌ಗಾಗಿ ಆಡಿದಾಗ ಎಷ್ಟು ಪಂದ್ಯಗಳನ್ನು ಆಡುತ್ತೇನೆ ಎಂದು ನನಗೆ ತಿಳಿದಿರಲಿಲ್ಲ. ಅಂದಿನಿಂದ ಇಂದಿನವರೆಗೆ ಸುಮಾರು 300 ಪಂದ್ಯಗಳನ್ನು ಆಡಲು ಅವಕಾಶ ದೊರೆತಿದೆ ಎಂದು ಭಾವುಕರಾಗಿ ಹೇಳಿದ್ದಾರೆ.

ಮೊಯಿನ್ ಅಲಿ ಅವರು ಇದೇ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು. ಮೊಯಿನ್ ಅಲಿ ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

ಅವರು ಒಟ್ಟು 298 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಎಲ್ಲಾ ಮಾದರಿಗಳಲ್ಲೂ 6,678 ರನ್‌ ಗಳಿಸಿದ್ದಾರೆ. ಜತೆಗೆ, 366 ವಿಕೆಟ್‌ಗಳನ್ನು ಪಡೆದಿದ್ದಾರೆ. 2019ರ ವಿಶ್ವಕಪ್ ಮತ್ತು 2022ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಅಂತೆಯೇ ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್‌) ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಮೊಯಿನ್ ಅಲಿ ಕಣಕ್ಕಿಳಿದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT