ಅರ್ಜುನ್ ತೆಂಡೂಲ್ಕರ್ 
ಕ್ರಿಕೆಟ್

Arjun Tendulkar ಮಾರಕ ಬೌಲಿಂಗ್: ಕರ್ನಾಟಕಕ್ಕೆ ಕೇವಲ 87 ರನ್ ನೀಡಿ 9 ವಿಕೆಟ್ ಕಬಳಿಸಿದ 'ಮಾಸ್ಟರ್ ಬ್ಲಾಸ್ಟರ್ ಪುತ್ರ'!

ಕೆಎಸ್‌ಸಿಎ ಆತಿಥ್ಯದಲ್ಲಿ ನಡೆಯುತ್ತಿರುವ 2024ರ ಕೆ ತಿಮ್ಮಯ್ಯ ಮೆಮೋರಿಯಲ್‌ ಕ್ರಿಕೆಟ್‌ ಟೂರ್ನಿಯಲ್ಲಿ ಕರ್ನಾಟಕ ವಿರುದ್ದದ ಪಂದ್ಯದಲ್ಲಿ ಅರ್ಜುನ್‌ ತೆಂಡೂಲ್ಕರ್‌ ಅವರು 9 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕ ಕ್ರಿಕೆಟ್ ತಂಡಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅಕ್ಷರಶಃ ಆಘಾತ ನೀಡಿದ್ದು, ಕೇವಲ 87 ರನ್ ನೀಡಿ 9 ವಿಕೆಟ್ ಕಬಳಿಸಿ ತಂಡದ ಭರ್ಜರಿ ಗೆಲುವಿಗೆ ಕಾರಣರಾಗಿದ್ದಾರೆ.

ಹೌದು.. ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಪುತ್ರ ಹಾಗೂ ಗೋವಾ ತಂಡದ ಆಲ್‌ರೌಂಡರ್‌ ಅರ್ಜುನ್‌ ತೆಂಡೂಲ್ಕರ್‌ ಅವರು ತಮ್ಮ ಅಸಾಧಾರಣ ಬೌಲಿಂಗ್‌ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದು, ಪ್ರಸ್ತುತ ಕೆಎಸ್‌ಸಿಎ ಆತಿಥ್ಯದಲ್ಲಿ ನಡೆಯುತ್ತಿರುವ 2024ರ ಕೆ ತಿಮ್ಮಯ್ಯ ಮೆಮೋರಿಯಲ್‌ ಕ್ರಿಕೆಟ್‌ ಟೂರ್ನಿಯಲ್ಲಿ ಕರ್ನಾಟಕ ವಿರುದ್ದದ ಪಂದ್ಯದಲ್ಲಿ ಅರ್ಜುನ್‌ ತೆಂಡೂಲ್ಕರ್‌ ಅವರು 9 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಆ ಮೂಲಕ ಗೋವಾ ತಂಡದ 189 ರನ್‌ಗಳ ಭರ್ಜರಿ ಗೆಲುವಿಗೆ ಅಮೂಲ್ಯ ನೆರವು ನೀಡಿದ್ದಾರೆ. 189 ರನ್‌ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿತು.

ಎರಡೂ ಇನ್ನಿಂಗ್ಸ್ ನಲ್ಲಿ ಅರ್ಜುನ್ ಮಾರಕ ಬೌಲಿಂಗ್

ಇನ್ನು ನಿಕಿನ್‌ ಜೋಸ್‌ ಹಾಗೂ ವಿಕೆಟ್‌ ಕೀಪರ್‌ ಶರತ್‌ ಶ್ರೀನಿವಾಸ್‌ ಮತ್ತು ಅಂಡರ್‌-19 ಹಾಗೂ ಅಂಡರ್‌ 23 ಆಟಗಾರರು ಒಳಗೊಂಡ ಕೆಎಸ್‌ಸಿಎ ತಂಡ ಹಾಗೂ ಗೋವಾ ತಂಡ ಸೋಮವಾರ ನಡೆದಿದ್ದ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಅರ್ಜುನ್‌ ತೆಂಡೂಲ್ಕರ್‌ ಅವರ ಮಾರಕ ಬೌಲಿಂಗ್‌ ದಾಳಿಗೆ ನಲುಗಿದ ಕರ್ನಾಟಕ ತಂಡ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಕರ್ನಾಟಕ ತಂಡ 36.5 ಓವರ್‌ಗಳಿಗೆ 103 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

ಗೋವಾ ಪರ ಪ್ರಥಮ ಇನಿಂಗ್ಸ್‌ನಲ್ಲಿ ಮಾರಕ ದಾಳಿ ನಡೆಸಿದ್ದ ಅರ್ಜುನ್‌ ತೆಂಡೂಲ್ಕರ್ ಅವರು 41 ರನ್‌ ನೀಡಿ 5 ವಿಕೆಟ್ ಪಡೆದರು.

ನಂತರ ಪ್ರಥಮ ಇನಿಂಗ್ಸ್ ಮಾಡಿದ್ದ ಗೋವಾ ತಂಡ, ಅಭಿನವ್‌ ತೆಜ್ರಾನ್‌ (109) ಅವರ ಶತಕ ಹಾಗೂ (69) ಅರ್ಧಶತಕದ ಬಲದಿಂದ 413 ರನ್‌ಗಳನ್ನು ಕಲೆ ಹಾಕಿತ್ತು. ನಂತರ ಭಾರೀ ಹಿನ್ನಡೆಯಿಂದ ದ್ವಿತೀಯ ಇನಿಂಗ್ಸ್‌ ಆರಂಭಿಸಿದ ಕೆಎಸ್‌ಸಿಎ XI ತಂಡ ಮತ್ತೆ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತು. ಆ ಮೂಲಕ 30.4 ಓವರ್‌ಗಳಿಗೆ 121 ರನ್‌ಗಳಿಗೆ ಆಲೌಟ್‌ ಆಯಿತು.

ದ್ವಿತೀಯ ಇನಿಂಗ್ಸ್‌ನಲ್ಲಿಯೂ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ಅರ್ಜುನ್‌ ತೆಂಡೂಲ್ಕರ್‌ ಅವರು 46 ರನ್‌ ನೀಡಿ 4 ವಿಕೆಟ್‌ಗಳನ್ನು ಕಬಳಿಸಿದರು. ಆ ಮೂಲಕ ಗೋವಾ ತಂಡ ಇನಿಂಗ್ಸ್‌ ಹಾಗೂ 189 ರನ್‌ಗಳ ಗೆಲುವು ಪಡೆಯಿತು.

ಈ ಪಂದ್ಯದಲ್ಲಿ ಎರಡೂ ಇನಿಂಗ್ಸ್‌ಗಳಲ್ಲಿ ಅರ್ಜುನ್‌ ತೆಂಡೂಲ್ಕರ್‌ 87 ರನ್‌ ನೀಡಿ 9 ವಿಕೆಟ್‌ಗಳನ್ನು ಪಡೆದು ಮಂಚಿದರು.

ಯೋಗರಾಜ್ ಸಿಂಗ್ ಬಳಿ ತರಬೇತಿ ಪಡೆದಿದ್ದ ಅರ್ಜುನ್ ತೆಂಡೂಲ್ಕರ್

ಇನ್ನು ಮುಂದಿನ ವಾರ ತಮ್ಮ 25ನೇ ವರ್ಷಕ್ಕೆ ಕಾಲಿಡುತ್ತಿರುವ ಅರ್ಜುನ್ ತೆಂಡೂಲ್ಕರ್ ಈ ವರೆಗೂ ಎಲ್ಲ 3 ಮಾದರಿಯ ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ 49 ಪಂದ್ಯಗಳನ್ನಾಡಿದ್ದು, 68 ವಿಕೆಟ್ ಪಡೆದಿದ್ದಾರೆ. ಅಂತೆಯೇ 13 ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 21 ವಿಕೆಟ್ ಪಡೆದಿದ್ದಾರೆ. ಅಂದಹಾಗೆ ಅರ್ಜುನ್ ತೆಂಡೂಲ್ಕರ್ ಭಾರತ ತಂಡದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಬಳಿ ತರಬೇತಿ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT