ಗೆಲುವಿನ ಸಂಭ್ರಮದಲ್ಲಿ ಭಾರತ ತಂಡ 
ಕ್ರಿಕೆಟ್

1st test Match: ಬಾಂಗ್ಲಾ ವಿರುದ್ಧ ಭಾರತಕ್ಕೆ 280 ರನ್ ಗೆಲುವು!

ಎರಡನೇ ಇನ್ನಿಂಗ್ಸ್‌ನಲ್ಲಿ 515 ರನ್‌ ಗುರಿ ಹೊಂದಿದ್ದ ಬಾಂಗ್ಲಾದೇಶ 234 ರನ್‌ಗಳಿಗೆ ಆಲೌಟ್ ಆಯಿತು.

ಚೆನ್ನೈ: ಹಿರಿಯ ಆಫ್ ಸ್ಪೀನ್ನರ್ ಆರ್. ಅಶ್ವಿನ್ ಅವರ ಆರು ವಿಕೆಟ್ ಹಾಗೂ ಅನುಪಮ ಆಲ್ ರೌಂಡರ್ ಆಟದೊಂದಿಗೆ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಭಾನುವಾರ 280 ರನ್ ಗಳಿಂದ ಗೆಲುವು ಸಾಧಿಸಿದ್ದು, ಈ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ 515 ರನ್‌ಗಳ ಅಸಂಭವ ಗುರಿ ಹೊಂದಿದ್ದ ಬಾಂಗ್ಲಾದೇಶ 234 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಗಳಿಸಿದ್ದ ಅಶ್ವಿನ್ 6 ವಿಕೆಟ್ ಕಬಳಿಸುವ ಮೂಲಕ ಚೆಪಾಕ್‌ನಲ್ಲಿರುವ ತವರು ಮೈದಾನದಲ್ಲಿ ಎದುರಾಳಿ ಬಾಂಗ್ಲಾದೇಶಕ್ಕೆ ತುಂಬಾ ಹಾನಿಯನ್ನುಂಟು ಮಾಡಿದರು.

ಉಳಿದಂತೆ ರವೀಂದ್ರ ಜಡೇಜಾ ಮೂರು ವಿಕೆಟ್ ಕಬಳಿಸಿದರು. ಬಾಂಗ್ಲಾದೇಶದ ಪರ ನಾಯಕ ನಜ್ಮುಲ್ ಹೊಸೈನ್ ಶಾಂಟೊ 127 ಎಸೆತಗಳಲ್ಲಿ 82 ರನ್ ಗಳಿಸಿದದ್ದು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ.

ಮೂರನೇ ದಿನದಂದು ಮಂದಗತಿಯ ಬೆಳಕಿನಿಂದ ಆಟ ಸ್ಥಗಿತಗೊಂಡಾಗ ಬಾಂಗ್ಲಾದೇಶದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 158 ಆಗಿತ್ತು. ರಿಷಭ್ ಪಂತ್ (109) ಮತ್ತು ಶುಭಮನ್ ಗಿಲ್ (119) ಅವರ ಅವಳಿ ಶತಕಗಳ ನೆರವಿನಿಂದ ಭಾರತ 4 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಒಟ್ಟಾರೆ 514 ರನ್‌ಗಳ ಮುನ್ನಡೆ ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?