ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು 
ಕ್ರಿಕೆಟ್

IPL 2025: RCB vs GT: ಆರ್‌ಸಿಬಿಗೆ ಗುಜರಾತ್ ಟೈಟಾನ್ಸ್‌ ಸವಾಲು; ಪಿಚ್‌ ರಿಪೋರ್ಟ್, ಸಂಭಾವ್ಯ ಪ್ಲೇಯಿಂಗ್ ಇಲೆವೆನ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಮೈದಾನದಲ್ಲಿ ಎರಡೂ ತಂಡಗಳು ಇಲ್ಲಿಯವರೆಗೆ ಎರಡು ಬಾರಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದಿವೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಮೈದಾನದಲ್ಲಿ ಎರಡೂ ತಂಡಗಳು ಇಲ್ಲಿಯವರೆಗೆ ಎರಡು ಬಾರಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದಿವೆ.

ಅಭಿಮಾನಿಗಳ ಪಾಲಿಗೆ ನೆಚ್ಚಿನ ತಂಡವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2025ನೇ ಆವೃತ್ತಿಯಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು ನಾಳೆ (ಏ.2) ನಡೆಯಲಿರುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಲಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಮೈದಾನದಲ್ಲಿ ಎರಡೂ ತಂಡಗಳು ಇಲ್ಲಿಯವರೆಗೆ ಎರಡು ಬಾರಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದಿವೆ.

ಆರ್‌ಸಿಬಿ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಚೇಸಿಂಗ್ ಮತ್ತು ಡಿಫೆಂಡ್‌ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆರ್‌ಸಿಬಿಗೆ ಇದು ತವರಿನಲ್ಲಿ ನಡೆಯುತ್ತಿರುವ ಮೊದಲ ಪಂದ್ಯವಾಗಿದ್ದು, ತಮ್ಮ ಅಭಿಮಾನಿಗಳ ಮುಂದೆ ಆಡಲು ಉತ್ಸುಕವಾಗಿದೆ. ರಜತ್ ಪಾಟಿದಾರ್ ನಾಯಕತ್ವದ ತಂಡವು ಈ ಬಾರಿ ಉತ್ತಮ ಸಮಬಲದ ತಂಡವಾಗಿದ್ದು, ಗುಜರಾತ್ ಟೈಟಾನ್ಸ್ ಎದುರಿಗೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಎರಡು ಪಂದ್ಯಗಳನ್ನು ಆಡಿದ್ದು, ಒಂದರಲ್ಲಿ ಗೆಲುವು ಸಾಧಿಸಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ಎದುರಿನ ಮೊದಲ ಪಂದ್ಯದಲ್ಲೇ ಸೋತಿದ್ದ ಜಿಟಿ, ಮುಂಬೈ ಇಂಡಿಯನ್ಸ್ ವಿರುದ್ಧದ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ವರದಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಬ್ಯಾಟಿಂಗ್ ಸ್ನೇಹಿ ಪಿಚ್‌ಗೆ ಹೆಸರುವಾಸಿಯಾಗಿದೆ. ವೇಗದ ಔಟ್‌ಫೀಲ್ಡ್ ಮತ್ತು ಸಣ್ಣ ಬೌಂಡರಿ ಹೆಚ್ಚಿನ ರನ್‌ ಗಳಿಸಲು ಅವಕಾಶ ನೀಡುತ್ತದೆ. ಬೌಲರ್‌ಗಳನ್ನು ಒತ್ತಡಕ್ಕೆ ಒಳಪಡಿಸುತ್ತದೆ. ಈ ಪರಿಸ್ಥಿತಿಗಳಲ್ಲಿ, ಟಾಸ್ ಗೆದ್ದ ತಂಡಗಳು ಹೆಚ್ಚಾಗಿ ಮೊದಲು ಬೌಲಿಂಗ್ ಮಾಡಲು ಬಯಸುತ್ತವೆ. ಏಕೆಂದರೆ, ಇಲ್ಲಿ ಚೇಸ್ ಮಾಡುವ ತಂಡಗಳು ಯಶಸ್ವಿಯಾಗಿವೆ. ಆರ್‌ಸಿಬಿ ತಂಡಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಕಂಡಿಲ್ಲ. ಆದರೆ, ಈ ಬಾರಿ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಉತ್ತಮವಾಗಿರುವ ಆರ್‌ಸಿಬಿ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿದೆ.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್.

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿ ಶ್ರೀನಿವಾಸನ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT