ರಜತ್ ಪಾಟಿದಾರ್ 
ಕ್ರಿಕೆಟ್

IPL 2025: 4,4,6,6,4,4,4,6,6 RCB ನಾಯಕನ ಆರ್ಭಟಕ್ಕೆ ಬೆಚ್ಚಿಬಿದ್ದ ಹಾರ್ದಿಕ್ ಪಾಂಡ್ಯ ಪಡೆ, Video!

ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 32 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ಐದು ಬೌಂಡರಿ ಸೇರಿದಂತೆ 64 ರನ್ ಪೇರಿಸಿದರು.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವೆ ಪಂದ್ಯ ನಡೆದಿದೆ. ಟಾಸ್ ಸೋಲು ಆರ್ ಸಿಬಿ ಮೊದಲು ಬ್ಯಾಟಿಂಗ್ ಮಾಡಿದ್ದು ತಂಡದ ಪರ ಬ್ಯಾಟರ್ ಗಳು ಸ್ಫೋಟಕ ಬ್ಯಾಟಿಂಗ್ ಮಾಡಿದರು.

ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 32 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ಐದು ಬೌಂಡರಿ ಸೇರಿದಂತೆ 64 ರನ್ ಪೇರಿಸಿದರು. ಇನ್ನು ವಿರಾಟ್ ಕೊಹ್ಲಿ ಸಹ ಈ ಪಂದ್ಯದಲ್ಲಿ ಆರ್ಭಟಿಸಿದ್ದು 42 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಎಂಟು ಬೌಂಡರಿ ಸೇರಿದಂತೆ 67 ರನ್ ಬಾರಿಸಿದರು. ಇನ್ನು ದೇವದತ್ ಪಡಿಕ್ಕಲ್ ಸಹ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 22 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 2 ಬೌಂಡರಿ ಸೇರಿದಂತೆ 37 ರನ್ ಬಾರಿಸಿ ಔಟಾದರು.

ಜಿತೇಶ್ ಶರ್ಮಾ ಸಹ ಇಂದು ಮುಂಬೈ ಬೌಲರ್ ಗಳನ್ನು ದಂಡಿಸಿದರು. 19 ಎಸೆತಗಳಲ್ಲಿ 4 ಸಿಕ್ಸರ್ ಮತ್ತು ಎರಡು ಬೌಂಡರಿ ಸೇರಿದಂತೆ ಅಜೇಯ 40 ರನ್ ಬಾರಿಸಿದರು. ಮುಂಬೈ ಪರ ಹಾರ್ದಿಕ್ ಪಾಂಡ್ಯ ಮತ್ತು ಟ್ರೆಂಟ್ ಬೌಲ್ಟ್ ತಲಾ 2 ವಿಕೆಟ್ ಪಡೆದರೆ ವಿಘ್ನೇಶ್ ಪುತುರ್ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel