ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2025: ಮುಂಬೈ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ!

ಆರ್‌ಸಿಬಿ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಇನಿಂಗ್ಸ್‌ನಲ್ಲಿ 17 ರನ್ ಗಳಿಸುವ ಮೂಲಕ ಈ ಐತಿಹಾಸಿಕ ದಾಖಲೆ ಬರೆದರು.

ಸೋಮವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ನೇ ಆವೃತ್ತಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಜಯ ಸಾಧಿಸಿದ್ದು, ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಸಾಧನೆ ಮಾಡಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 13,000 ರನ್ ಗಳಿಸುವ ಮೂಲಕ ತಮ್ಮ ವೃತ್ತಿಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಆರ್‌ಸಿಬಿ ಅನುಭವಿ ಆಟಗಾರ ಮೊದಲ ಇನಿಂಗ್ಸ್‌ನಲ್ಲಿ 17 ರನ್ ಗಳಿಸಿದ್ದಾಗ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಟಿ20 ಕ್ರಿಕೆಟ್‌ನಲ್ಲಿ 13 ಸಾವಿರ ರನ್ ಗಳಿಸಿದ ಮೊದಲನೇ ಭಾರತೀಯ ಮತ್ತು ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಐದನೇ ಬ್ಯಾಟ್ಸ್‌ಮನ್ ಆಗಿ ವಿರಾಟ್ ಕೊಹ್ಲಿ ಮಿಂಚಿದ್ದಾರೆ.

ಕ್ರಿಸ್ ಗೇಲ್ ಕೇವಲ 381 ಇನಿಂಗ್ಸ್‌ನಲ್ಲಿ ಈ ಮೈಲಿಗಲ್ಲು ತಲುಪಿದ ನಂತರ, ಕೊಹ್ಲಿ ತಮ್ಮ 386ನೇ ಟಿ20 ಇನಿಂಗ್ಸ್‌ನಲ್ಲಿ ಈ ಮೈಲಿಗಲ್ಲು ತಲುಪಿದ ಎರಡನೇ ಅತಿ ವೇಗದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಕಳೆದ ಆವೃತ್ತಿಯಲ್ಲಿ, ವಿರಾಟ್ ಕೊಹ್ಲಿ 12,000 ರನ್‌ಗಳನ್ನು ಗಳಿಸಿದ್ದರು. ಕ್ರಿಸ್ ಗೇಲ್ ಅವರು 360 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರು ಮತ್ತು ಅವರು ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಆಗಿದ್ದರು.

ವಿರಾಟ್ ಕೊಹ್ಲಿ ಅವರ ಅದ್ಭುತ ವೃತ್ತಿಜೀವನ

ವಿರಾಟ್ ಕೊಹ್ಲಿ ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿ 2025 ವಿಜೇತ ತಂಡದ ಭಾಗವಾಗಿದ್ದರು. 2011ರ ಏಕದಿನ ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ, 2024ರ ಟಿ20 ವಿಶ್ವಕಪ್ ಅನ್ನು ಸಹ ಗೆದ್ದಿದ್ದಾರೆ. ಒಂದು ದಶಕದಲ್ಲಿ 20,000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

ಅವರ ವೃತ್ತಿಜೀವನದ ಅವಧಿಯಲ್ಲಿ, ಅವರು 10 ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದು ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಪ್ರಶಸ್ತಿ ಪಡೆದ ಆಟಗಾರನನ್ನಾಗಿ ಮಾಡಿದೆ. ಅವರು 2012, 2017, 2018 ಮತ್ತು 2023 ರಲ್ಲಿ ನಾಲ್ಕು ಬಾರಿ ವರ್ಷದ ಏಕದಿನ ಆಟಗಾರರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT