IPL 2025: PBKS allrounder Maxwell reprimanded for code of conduct breach 
ಕ್ರಿಕೆಟ್

IPL 2025: ಪಂಜಾಬ್ ಕಿಂಗ್ಸ್ ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ದಂಡ ವಿಧಿಸಿದ ಬಿಸಿಸಿಐ!

ಸಿಎಸ್‌ಕೆ ವಿರುದ್ಧದ ಗೆಲುವಿನೊಂದಿಗೆ, ರಾಜಸ್ಥಾನ ರಾಯಲ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಸೋತಿದ್ದ ಪಿಬಿಕೆಎಸ್ ಗೆಲುವಿನ ಹಾದಿಗೆ ಮರಳಿದೆ. ಈಮಧ್ಯೆ, ಐದು ಬಾರಿಯ ಚಾಂಪಿಯನ್‌ ಆಗಿರುವ ಸಿಎಸ್‌ಕೆ ಈ ಆವೃತ್ತಿಯಲ್ಲಿ ಸತತ ನಾಲ್ಕನೇ ಸೋಲು ಕಂಡಿದೆ.

ಚಂಡೀಗಢದ ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2025ನೇ ಆವೃತ್ತಿಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 18 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದಂಡ ವಿಧಿಸಿದೆ.

ಪಿಬಿಕೆಎಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಮ್ಯಾಕ್ಸ್‌ವೆಲ್ ಅವರಿಗೆ ದಂಡ ವಿಧಿಸಲಾಗಿದೆ.

'ಪಿಬಿಕೆಎಸ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಮಾಡಿದ್ದಾರೆ ಮತ್ತು ಮ್ಯಾಚ್ ರೆಫರಿಯ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಅವರ ಪಂದ್ಯ ಶುಲ್ಕದ ಶೇ 25ರಷ್ಟು ದಂಡ ವಿಧಿಸಲಾಗಿದೆ' ಎಂದು ಎಂದು ಐಪಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಐಪಿಎಲ್ ನೀತಿ ಸಂಹಿತೆಯ ಪ್ರಕಾರ, ಆರ್ಟಿಕಲ್ 2.2ರ ಅಡಿಯಲ್ಲಿ ಪಂದ್ಯದ ಸಮಯದಲ್ಲಿ ಕ್ರಿಕೆಟ್ ಉಪಕರಣಗಳು ಅಥವಾ ಬಟ್ಟೆ, ಗ್ರೌಂಡ್ ಉಪಕರಣಗಳು ಅಥವಾ ಫಿಕ್ಚರ್ಸ್‌ ಮತ್ತು ಫಿಟ್ಟಿಂಗ್‌ಗಳ ದುರುಪಯೋಗ ಪಡಿಸಿಕೊಂಡರೆ ದಂಡ ವಿಧಿಸಲಾಗುತ್ತದೆ.

ಉದಾಹರಣೆಗೆ ವಿಕೆಟ್‌ಗಳನ್ನು ಹೊಡೆಯುವುದು ಅಥವಾ ಒದೆಯುವುದು ಮತ್ತು ಉದ್ದೇಶಪೂರ್ವಕವಾಗಿ, ಅಜಾಗರೂಕತೆಯಿಂದ ಅಥವಾ ನಿರ್ಲಕ್ಷ್ಯದಿಂದ (ಎರಡೂ ಸಂದರ್ಭಗಳಲ್ಲಿ ಆಕಸ್ಮಿಕವಾಗಿದ್ದರೂ ಸಹ) ಜಾಹೀರಾತು ಫಲಕಗಳು, ಬೌಂಡರಿ ಬೇಲಿಗಳು, ಡ್ರೆಸ್ಸಿಂಗ್ ಕೋಣೆಯ ಬಾಗಿಲುಗಳು, ಕನ್ನಡಿ, ಕಿಟಕಿ ಮತ್ತು ಇತರ ಫಿಕ್ಚರ್ಸ್ ಮತ್ತು ಫಿಟ್ಟಿಂಗ್‌ಗಳಿಗೆ ಹಾನಿಯನ್ನುಂಟುಮಾಡುವ ಯಾವುದೇ ಕ್ರಮಗಳಿಗೆ ದಂಡ ವಿಧಿಸಲಾಗುತ್ತದೆ.

ಯುವ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ 42 ಎಸೆತಗಳಲ್ಲಿ 103 ರನ್ ಗಳಿಸುವ ಮೂಲಕ ಪಿಬಿಕೆಎಸ್ 20 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು. ನಂತರ ಸಿಎಸ್‌ಕೆ ಕಠಿಣ ಹೋರಾಟ ನೀಡಿತಾದರೂ ಸೋಲಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಐದು ವಿಕೆಟ್ ನಷ್ಟಕ್ಕೆ 201 ರನ್ ಗಳಿಸಲಷ್ಟೇ ಸಿಎಸ್‌ಕೆ ಶಕ್ತವಾಯಿತು. ಈ ಮೂಲಕ ಪಂಜಾಬ್ 18 ರನ್‌ಗಳ ಗೆಲುವು ಸಾಧಿಸಿತು.

ಸಿಎಸ್‌ಕೆ ವಿರುದ್ಧದ ಗೆಲುವಿನೊಂದಿಗೆ, ರಾಜಸ್ಥಾನ ರಾಯಲ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಸೋತಿದ್ದ ಪಿಬಿಕೆಎಸ್ ಗೆಲುವಿನ ಹಾದಿಗೆ ಮರಳಿದೆ. ಈಮಧ್ಯೆ, ಐದು ಬಾರಿಯ ಚಾಂಪಿಯನ್‌ ಆಗಿರುವ ಸಿಎಸ್‌ಕೆ ಈ ಆವೃತ್ತಿಯಲ್ಲಿ ಸತತ ನಾಲ್ಕನೇ ಸೋಲು ಕಂಡಿದೆ. ಐದು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT