ಆರ್‌ಸಿಬಿ vs ಡಿಸಿ 
ಕ್ರಿಕೆಟ್

IPL 2025: ಚಿನ್ನಸ್ವಾಮಿಯಲ್ಲಿ DC ವಿರುದ್ಧ RCB ಹಣಾಹಣಿ, ಗೆಲುವು ಯಾರಿಗೆ? ಸಂಭಾವ್ಯ ಪ್ಲೇಯಿಂಗ್ XI

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲೂ ಗೆಲುವು ಕಂಡಿದ್ದು ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025ನೇ ಆವೃತ್ತಿಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಸೆಣಸಲಿವೆ. ಆರ್‌ಸಿಬಿ ಈವರೆಗೆ ಆಡಿರುವ 4 ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಕಂಡಿತ್ತು. ಕೆಕೆಆರ್, ಸಿಎಸ್‌ಕೆ ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಅವರ ತವರಿನಲ್ಲಿ ಸೋಲಿಸಿದ್ದ ಆರ್‌ಸಿಬಿ ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ. ತಮ್ಮ ತವರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲುವು ಕಾಣುವ ಉತ್ಸಾಹದಲ್ಲಿದೆ.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲೂ ಗೆಲುವು ಕಂಡಿದ್ದು ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಐಪಿಎಲ್ ಪಾಯಿಂಟ್ಸ್‌ ಟೇಬಲ್‌ನಲ್ಲಿ ಬಲಿಷ್ಠವಾಗಿ ಕಾಣುತ್ತಿರುವ ಎರಡು ತಂಡಗಳು ಇಂದು ಮುಖಾಮುಖಿಯಾಗಲಿದ್ದು, ಪ್ರೇಕ್ಷಕರಿಗೆ ಭರ್ಜರಿ ರಸದೌತಣ ಸಿಗುವ ಎಲ್ಲಾ ಸಾಧ್ಯತೆಯಿದೆ. ಉಭಯ ತಂಡಗಳು ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿವೆ.

2008ರ ನಂತರ ಫ್ರಾಂಚೈಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಡೆಲ್ಲಿ ತಂಡವು ಸತತ ಮೂರು ಪಂದ್ಯಗಳನ್ನು ಗೆದ್ದಿದೆ. ನಾಯಕ ಅಕ್ಷರ್ ಪಟೇಲ್ ಮತ್ತು ವಿಪ್ರಜ್ ನಿಗಮ್ ಪ್ರಮುಖ ಸ್ಪಿನ್-ಬೌಲಿಂಗ್ ಆಲ್‌ರೌಂಡರ್‌ಗಳಾಗಿದ್ದಾರೆ. ಇದರೊಂದಿಗೆ ಕುಲ್ದೀಪ್ ಯಾದವ್, ಮಿಚೆಲ್ ಸ್ಟಾರ್ಕ್, ಮೋಹಿತ್ ಶರ್ಮಾ ಮತ್ತು ಮುಖೇಶ್ ಕುಮಾರ್ ಇದ್ದು, ಅತ್ಯುತ್ತಮ ಬೌಲಿಂಗ್ ತಂಡವನ್ನು ಹೊಂದಿದೆ.

ಕಳೆದ ಆವೃತ್ತಿವರೆಗೂ ಆರ್‌ಸಿಬಿ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿದ್ದು, ಕನ್ನಡಿಗ ಕೆಎಲ್ ರಾಹುಲ್ ಕೂಡ ಇದ್ದಾರೆ. ಉಭಯ ಆಟಗಾರರು ಚಿನ್ನಸ್ವಾಮಿ ಕ್ರೀಡಾಂಗಣವನ್ನು ಚೆನ್ನಾಗಿ ತಿಳಿದಿದ್ದು, ಉತ್ತಮ ಸ್ಪರ್ಧೆ ಏರ್ಪಡುವ ಸಂಭವವಿದೆ.

ಇತ್ತ, ಆರ್‌ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಅದ್ಭುತ ಗೆಲುವಿನೊಂದಿಗೆ ಮರಳಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮಬಲ ಹೊಂದಿದೆ. ಎಲ್ಲ ಆಟಗಾರರು ತಂಡಕ್ಕೆ ಕೊಡುಗೆ ನೀಡುತ್ತಿದ್ದಾರೆ. ಉಭಯ ತಂಡಗಳು ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ. ಆರ್‌ಸಿಬಿ ಈ ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೊದಲ ಸೋಲಿನ ರುಚಿ ಕಾಣಿಸುತ್ತದೆಯೇ ಅಥವಾ ಡಿಸಿ ತಮ್ಮ ಗೆಲುವಿನ ಓಟವನ್ನು ಮುಂದುವರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

RCB: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್.

DC: ಫಾಫ್ ಡು ಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್, ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಕುಲದೀಪ್ ಯಾದವ್, ಮಿಚೆಲ್ ಸ್ಟಾರ್ಕ್, ಮುಖೇಶ್ ಕುಮಾರ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT