ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

IPL 2025: 3 ಓವರ್ ನಲ್ಲಿ ವೇಗದ ಅರ್ಧಶತಕ ಸಿಡಿಸಿ RCB ಮತ್ತೊಂದು ಸಾಧನೆ!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ಸ್ಫೋಟಕ ಆರಂಭ ಸಿಕ್ಕಿದೆ. ಫಿಲ್ ಸಾಲ್ಟ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ಆರ್ ಸಿಬಿ ತಂಡ 18 ಎಸೆತಗಳಲ್ಲಿ 53 ರನ್ ಪೂರೈಸಿದೆ.

Vishwanath S
Updated On : 10 Apr 2025, 8:11 pm

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)ರ 24ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ಸ್ಫೋಟಕ ಆರಂಭ ಸಿಕ್ಕಿದೆ. ಫಿಲ್ ಸಾಲ್ಟ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ಆರ್ ಸಿಬಿ ತಂಡ 18 ಎಸೆತಗಳಲ್ಲಿ 53 ರನ್ ಪೂರೈಸಿದೆ. ಇದು ಈ ಋತುವಿನ ಸ್ಫೋಟಕ ಆರಂಭ ಇದಾಗಿದೆ. ಐಪಿಎಲ್ ಇತಿಹಾಸದಲ್ಲಿ ಅತಿ ವೇಗವಾಗಿ 50 ರನ್ ಗಳಿಸಿದ ತಂಡ ಎಂಬ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಂದಿತ್ತು. 2011ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ವಿರುದ್ಧ ಕೇವಲ 2.3 ಓವರ್‌ಗಳಲ್ಲಿ ಈ ಸಾಧನೆ ಮಾಡಿತ್ತು. ಅಂದು ಕ್ರಿಸ್ ಗೇಲ್ ಆ ಪಂದ್ಯದಲ್ಲಿ ಒಂದು ಓವರ್‌ನಲ್ಲಿ 37 ರನ್ ಗಳಿಸಿದ್ದು ಹೀಗಾಗಿ ವೇಗದ ಅರ್ಧ ಶತಕ ಪೂರೈಸಲು ಸಾಧ್ಯವಾಗಿತ್ತು.

Also Read

IPL 2025: CSK ನಾಯಕ ರುತುರಾಜ್ ಗಾಯಕ್ವಾಡ್ ಸಂಪೂರ್ಣ ಟೂರ್ನಿಯಿಂದ ಔಟ್; ಮತ್ತೆ ಧೋನಿ ಕ್ಯಾಪ್ಟನ್!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments