ಜೈಪುರ: ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಟಿದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿದಿದ್ದು, ಆರ್‌ಆರ್ ತಂಡವು ಫಜಲ್‌ಹಕ್ ಫಾರೂಕಿ ಬದಲಿಗೆ ಶ್ರೀಲಂಕಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ವನಿಂದು ಹಸರಂಗ ಅವರನ್ನು ತಮ್ಮ ಪ್ಲೇಯಿಂಗ್ XI ಅವಕಾಶ ನೀಡಿದೆ.
ಗ್ರೀನ್ ಜೆರ್ಸಿ ತೊಟ್ಟು ಕಣಕ್ಕಿಳಿದ ಆರ್‌ಸಿಬಿ
ಇಂದಿನ ಪಂದ್ಯವು ಪಿಂಕ್ ಸಿಟಿ ಎಂದು ಕರೆಯಲ್ಪಡುವ ಜೈಪುರದಲ್ಲಿ ನಡೆಯುತ್ತಿದ್ದರೂ, RCB ತಮ್ಮ ಗೋ ಗ್ರೀನ್ ಉಪಕ್ರಮದ ಭಾಗವಾಗಿ ಹಸಿರು ಜೆರ್ಸಿಯನ್ನು ತೊಟ್ಟು ಕಣಕ್ಕಿಳಿದಿದೆ. 2011ರಲ್ಲಿ ಈ ಅಭಿಯಾನವನ್ನು ಪ್ರಾರಂಭಿಸಲಾಯಿತು ಮತ್ತು RCB ತಮ್ಮ ಸಾಂಪ್ರದಾಯಿಕ ಕೆಂಪು ಬಣ್ಣಕ್ಕೆ ಬದಲಾಗಿ ಪ್ರತಿ ಆವೃತ್ತಿಯಲ್ಲಿ ಒಂದು ಪಂದ್ಯದಲ್ಲಿ ಹಸಿರು ಬಣ್ಣದ ಜೆರ್ಸಿ ತೊಟ್ಟು ಆಡುತ್ತದೆ. ಹಸಿರು ಜೆರ್ಸಿಯನ್ನು ಸಂಪೂರ್ಣವಾಗಿ ಮರುಬಳಕೆಯ ವಸ್ತುಗಳಿಂದ ತಯಾರಿಸಲಾಗಿದೆ.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ಸುಯಾಶ್ ಶರ್ಮಾ.
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ನಿತೀಶ್ ರಾಣಾ, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ.