ಮ್ಯಾಕ್ಸ್‌ವೆಲ್ - ಮಾರ್ಕಸ್ ಸ್ಟೊಯಿನಿಸ್- ಟ್ರಾವಿಸ್ ಹೆಡ್ ಕಿತ್ತಾಟ 
ಕ್ರಿಕೆಟ್

IPL 2025, SRH vs PBKS: ಪಂಜಾಬ್ ತಂಡದ ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್ ಜೊತೆ ಟ್ರಾವಿಸ್ ಹೆಡ್ ಕಿತ್ತಾಟ!

ಶನಿವಾರ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಎಂಟು ವಿಕೆಟ್‌ ಅಂತರದ ಭರ್ಜರಿ ಗೆಲುವು ಸಾಧಿಸಿದೆ.

ಐಪಿಎಲ್ 2025ರ 18ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತೆ ಗೆಲುವಿನ ಹಾದಿಗೆ ಮರಳಿದೆ. ಮೊದಲ ಪಂದ್ಯದಲ್ಲಿ 286 ರನ್ ಗಳಿಸಿ ಅಬ್ಬರಿಸಿದ್ದ ಎಸ್ಆರ್‌ಎತ್ ನಂತರ ಸತತವಾಗಿ 4 ಪಂದ್ಯಗಳಲ್ಲಿ ಸೋಲು ಕಂಡಿತ್ತು. ಆದರೆ, ಶನಿವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಮಧ್ಯೆ, SRH ಆಟಗಾರ ಟ್ರಾವಿಸ್ ಹೆಡ್ ಮತ್ತು PBKS ಆಲ್‌ರೌಂಡರ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮಾರ್ಕಸ್ ಸ್ಟೊಯಿನಿಸ್ ನಡುವೆ ಮೈದಾನದಲ್ಲಿಯೇ ಮಾತಿನ ಚಕಮಕಿ ನಡೆದಿದೆ. ಒಂಬತ್ತನೇ ಓವರ್‌ನ ಕೊನೆಯಲ್ಲಿ ಹೆಡ್ ಮತ್ತು ಮ್ಯಾಕ್ಸ್‌ವೆಲ್ ನಡುವೆ ಮಾತಿನ ಚಕಮಕಿ ನಡೆದಿದೆ. ಅಂಪೈರ್ ಮಧ್ಯೆ ಪ್ರವೇಶಿಸಿ ಸುಮ್ಮನಿರಿಸಿದ್ದು, ನಂತರ ಹೆಡ್ ಅವರೊಂದಿಗೆ ಸ್ಟೊಯಿನಿಸ್ ಮಾತಿಗಿಳಿದಿದ್ದಾರೆ.

ಪಂದ್ಯದ ನಂತರದ ಮ್ಯಾಕ್ಸ್‌ವೆಲ್ ಮತ್ತು ಸ್ಟೊಯಿನಿಸ್ ಅವರೊಂದಿಗಿನ ಮಾತಿನ ಚಕಮಕಿ ಬಗ್ಗೆ ಮಾತನಾಡಿರುವ ಹೆಡ್, 'ಒಬ್ಬರಿಗೊಬ್ಬರು ಚೆನ್ನಾಗಿ ತಿಳಿದಿರುವಾಗ, ಅವರಲ್ಲಿರುವ ಉತ್ತಮ ಮತ್ತು ಕೆಟ್ಟದ್ದನ್ನು ಹೊರತರುತ್ತೀರಿ. ತುಂಬಾ ಗಂಭೀರವಾಗಿ ಏನೂ ಇರುವುದಿಲ್ಲ. ಬದಲಿಗೆ ಸ್ವಲ್ಪ ತಮಾಷೆ ಅಲ್ಲಿರುತ್ತದೆ' ಎಂದು ಹೇಳಿದರು.

ಶನಿವಾರ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಎಂಟು ವಿಕೆಟ್‌ ಅಂತರದ ಭರ್ಜರಿ ಗೆಲುವು ಸಾಧಿಸಿದೆ. 246 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವ ಮೂಲಕ ಲೀಗ್ ಇತಿಹಾಸದಲ್ಲಿ ಎರಡನೇ ಅತ್ಯಧಿಕ ಯಶಸ್ವಿ ರನ್ ಚೇಸ್ ದಾಖಲೆ ಮಾಡಿದೆ.

ಎಸ್ಆರ್‌ಎಚ್ ಬ್ಯಾಟರ್ ಅಭಿಷೇಕ್ ಶರ್ಮಾ 55 ಎಸೆತಗಳಲ್ಲಿ 141 ರನ್ ಗಳಿಸಿದರು. ಇದು ಅವರ ವೃತ್ತಿಜೀವನದ ಅತ್ಯುತ್ತಮ ರನ್ ಆಗಿದೆ. ಮತ್ತೊಂದು ಕಡೆಯಲ್ಲಿದ್ದ ಟ್ರಾವಿಸ್ ಹೆಡ್ ಕೂಡ ಆಕ್ರಮಣಕಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇಬ್ಬರು ಬ್ಯಾಟರ್‌ಗಳು ಎದುರಾಳಿ ತಂಡದ ಬೌಲರ್‌ಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅಯ್ಯರ್ ಅವರ 82 ರನ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಅವರ ಅದ್ಭುತ ಪ್ರದರ್ಶನದ ಪಂಜಾಬ್ ಆರು ವಿಕೆಟ್ ಕಳೆದುಕೊಂಡು 245 ರನ್ ಗಳಿಸಿತು. ಸ್ಟೊಯಿನಿಸ್ ಅಂತಿಮ ಓವರ್‌ನಲ್ಲಿ ಸತತ ನಾಲ್ಕು ಸಿಕ್ಸರ್‌ ಸಿಡಿಸುವ ಮೂಲಕ ಕೇವಲ 11 ಎಸೆತಗಳಲ್ಲಿ ಅಜೇಯ 34 ರನ್ ಗಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT