ಮಹೇಂದ್ರ ಸಿಂಗ್ ಧೋನಿ 
ಕ್ರಿಕೆಟ್

IPL 2025: ಫಾರ್ಮ್ ಗೆ ಮರಳಿದ ಧೋನಿ, ದುಬೆ; LSG ವಿರುದ್ಧ CSK 5 ವಿಕೆಟ್ ಗೆಲುವು!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು.

ಲಖನೌ: ಉತ್ತರ ಪ್ರದೇಶದ ಲಖನೌದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಲ್ 2025ರ 30ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರಿನಲ್ಲಿಯೇ ಸೋಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಲಕ್ನೋ ಪರ ಏಡನ್ ಮಾಕ್ರಮ್ ಕೇವಲ 6 ರನ್ ಗಳಿಸಿ, ತ್ರಿಪಾಠಿಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಮಿಚ್ಚೆಲ್ ಮಾರ್ಷ್ 30 ರನ್ ಗಳಿಸಿದರೆ, ಸ್ಫೋಟಕ ಬ್ಯಾಟ್ಸ್‌ಮನ್ ನಿಕೋಲಸ್ ಪೊರಾನ್ ಕೇವಲ 8 ರನ್ ಗಳಿಸಿ ಎಲ್ ಬಿಡಬ್ಲ್ಯೂಗೆ ಬಲಿಯಾದರು.

ನಾಯಕ ರಿಷಭ್ ಪಂತ್, 63, ಅಯುಷ್ ಬದೋನಿ 22, ಅಬ್ದುಲ್ ಸಮದ್ 20 ಹಾಗೂ ಶಾರ್ದೂಲ್ ಠಾಕೂರ್ 6 ರನ್ ಗಳಿಸಿದರು. ಹೀಗಾಗಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್ , ಚೆನ್ನೈಗೆ 167 ರನ್ ಗಳ ಗೆಲುವಿನ ಗುರಿ ನೀಡಿತು. ಸಿಎಸ್ ಕೆ ಪರ ರವೀಂದ್ರ ಜಡೇಜಾ ಹಾಗೂ ಮತೀಶಾ ಪತಿರಾಣಾ ತಲಾ 2 ವಿಕೆಟ್ ಪಡೆದರೆ, ಖಲೀಲ್ ಅಹ್ಮದ್, ಅಂಶುಲ್ ಕಾಂಬೋಜ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಲಕ್ನೋ ನೀಡಿದ 167 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ CSK ಪರ ಆರಂಭಿಕ ಆಟಗಾರ ಶೈಕ್ ರಶೀದ್ 27, ರಚಿನ್ ರವೀಂದ್ರ 37 ರನ್ ಗಳಿಸಿ ಔಟಾದರು. ಬಳಿಕ ಬಂದ ರಾಹುಲ್ ತ್ರಿಪಾಠಿ ಕೇವಲ 9 ರನ್ ಗಳಿಗೆ ರವಿ ಬಿಷ್ಣೋಯಿ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ರವೀಂದ್ರ ಜಡೇಜ ಕೇವಲ 7 ರನ್ ಗಳಿಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಈ ಸಂದರ್ಭದಲ್ಲಿ ಶಿವಂ ದುಬೆ ಅಜೇಯ 43, ಹಾಗೂ ಮಹೇಂದ್ರ ಸಿಂಗ್ ಅಜೇಯ 26 ರನ್ ಗಳ ನೆರವಿನಿಂದ ಚೆನ್ನೈ 19.3 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT