ಸಂಜು ಸ್ಯಾಮ್ಸನ್ 
ಕ್ರಿಕೆಟ್

IPL 2025: ಡೆಲ್ಲಿ ವಿರುದ್ಧದ ಪಂದ್ಯ, ಬ್ಯಾಟಿಂಗ್ ಮಾಡುವಾಗ ಅರ್ಧದಲ್ಲೇ ಮೈದಾನದಿಂದ ಹೊರ ನಡೆದ ಸಂಜು ಸ್ಯಾಮ್ಸನ್! ಇದೇ ಕಾರಣ

ರಾಜಸ್ಥಾನ ನೀಡಿದ 189 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ರಾಜಸ್ಥಾನ್ ಪರ ಓಪನರ್ ಆಗಿ ಕ್ರೀಸ್​ಗೆ ಆಗಮಿಸಿದ ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಪಡೆದಿದ್ದರು.

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಬ್ಯಾಟಿಂಗ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅರ್ಧದಲ್ಲೇ ಮೈದಾನದಿಂದ ಹೊರಗೆ ಹೋದರು.

ರಾಜಸ್ಥಾನ ನೀಡಿದ 189 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ರಾಜಸ್ಥಾನ್ ಪರ ಓಪನರ್ ಆಗಿ ಕ್ರೀಸ್​ಗೆ ಆಗಮಿಸಿದ ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಪಡೆದಿದ್ದರು. ಕೇವಲ 19 ಎಸೆತಗಳನ್ನು ಎದುರಿಸಿದ ಸಂಜು ಸ್ಯಾಮ್ಸನ್​, 2 ಬೌಂಡರಿ ಹಾಗೂ 3 ಅಮೋಘವಾದ ಸಿಕ್ಸರ್​ಗಳಿಂದ 31 ರನ್​ಗಳನ್ನು ಗಳಿಸಿದ್ದರು.

ಆದರೆ ಸಂಜು ಬ್ಯಾಟಿಂಗ್ ಮಾಡುವಾಗ ಗಾಯಕ್ಕೆ ತುತ್ತಾಗಿದ್ದಾರೆ. ಪಕ್ಕೆಲುಬಿನ ಗಾಯದಿಂದ ಬ್ಯಾಟಿಂಗ್ ಮಾಡಲು ಆಗಿಲ್ಲ. ಹೀಗಾಗಿ ಬ್ಯಾಟಿಂಗ್ ಅನ್ನು ಅರ್ಧಕ್ಕೆ ಬಿಟ್ಟು, ಅಂಪೈರ್​​ನಿಂದ ಮನವಿ ಪಡೆದು ಮೈದಾನದಿಂದ ಹೊರ ನಡೆದಿದ್ದಾರೆ.

ಮೊದಲ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಅವರೊಂದಿಗೆ 5.3 ಓವರ್‌ಗಳಲ್ಲಿ 61 ರನ್ ಗಳಿಸಿದಾಗ ಸ್ಯಾಮ್ಸನ್ ಗಾಯಗೊಂಡರು. ನಂತರ ಅವರ ಬದಲಿಗೆ ರಿಯಾನ್ ಪರಾಗ್ ಬಂದು ಬ್ಯಾಟಿಂಗ್ ಮುಂದುವರೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!