ಡೆಲ್ಲಿ ಕ್ಯಾಪಿಟಲ್ಸ್  
ಕ್ರಿಕೆಟ್

IPL 2025: ಪಾಯಿಂಟ್ಸ್ ಟೇಬಲ್‌ನಲ್ಲಿ ಮತ್ತೆ DC ಅಗ್ರಸ್ಥಾನಕ್ಕೆ; ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ?

ಸೂಪರ್‌ ಓವರ್‌ನಲ್ಲಿ ಬ್ಯಾಟ್ ಮಾಡಿದ ಆರ್‌ಆರ್ 11 ರನ್‌ ಗಳಿಸಿತು. ಬಳಿಕ ಡಿಸಿ ತಂಡದ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ಈ ಮೊತ್ತವನ್ನು ಗಳಿಸುವ ಮೂಲಕ ತಂಡಕ್ಕೆ ಗೆಲುವು ಸಿಕ್ಕಿತು.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡವು ರಾಜಸ್ಥಾನ ರಾಯಲ್ಸ್ (ಆರ್‌ಆರ್) ವಿರುದ್ಧ ಸೂಪರ್ ಓವರ್‌ನಲ್ಲಿ ಗೆಲುವು ಸಾಧಿಸಿದೆ. 189 ರನ್‌ಗಳ ಗುರಿ ಬೆನ್ನಟ್ಟುತ್ತಿದ್ದ ಆರ್‌ಆರ್‌ಗೆ ಗೆಲ್ಲಲು ಅಂತಿಮ ಓವರ್‌ನಲ್ಲಿ ಒಂಬತ್ತು ರನ್‌ಗಳು ಬೇಕಾಗಿದ್ದಾಗ, ಸ್ಟಾರ್ಕ್ ಕೇವಲ 8 ರನ್ ನೀಡಿದರು. ಹೀಗಾಗಿ, ಸೂಪರ್ ಓವರ್ ಆಡಬೇಕಾಯಿತು.

ಸೂಪರ್‌ ಓವರ್‌ನಲ್ಲಿ ಬ್ಯಾಟ್ ಮಾಡಿದ ಆರ್‌ಆರ್ 11 ರನ್‌ ಗಳಿಸಿತು. ಬಳಿಕ ಡಿಸಿ ತಂಡದ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ಈ ಮೊತ್ತವನ್ನು ಗಳಿಸುವ ಮೂಲಕ ತಂಡಕ್ಕೆ ಗೆಲುವು ಸಿಕ್ಕಿತು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ ಆರು ಪಂದ್ಯಗಳಲ್ಲಿ ಐದು ಗೆಲುವುಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನವನ್ನು ಮರಳಿ ಪಡೆದರೆ, ಆರ್‌ಆರ್ ಆಡಿರುವ ಏಳು ಪಂದ್ಯಗಳಲ್ಲಿ ಕೇವಲ 2ರಲ್ಲಿ ಜಯ ಸಾಧಿಸುವ ಮೂಲಕ ನಾಲ್ಕು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಆಡಿರುವ 6 ಪಂದ್ಯಗಳಲ್ಲಿ ತಲಾ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕ್ರಮವಾಗಿ 2, 3 ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಲಕ್ನೋ ಸೂಪರ್ ಜೈಂಟ್ಸ್ ತಂಡ 7 ಪಂದ್ಯಗಳನ್ನು ಆಡಿದ್ದು, ನಾಲ್ಕರಲ್ಲಿ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದರೆ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಿರುವ 7 ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸುವ ಮೂಲಕ 6ನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ ತಂಡಗಳು ಕ್ರಮವಾಗಿ 7, 8, 9 ಮತ್ತು 10ನೇ ಸ್ಥಾನದಲ್ಲಿವೆ.

ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಲೀಡರ್‌ಬೋರ್ಡ್‌ಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಉಪ ನಾಯಕ ನಿಕೋಲಸ್ ಪೂರನ್ ಆರೆಂಜ್ ಕ್ಯಾಪ್ ಮಾಲೀಕರಾಗಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) ಸ್ಪಿನ್ನರ್ ನೂರ್ ಅಹ್ಮದ್ ಪರ್ಪಲ್ ಕ್ಯಾಪ್ ಪಡೆದಿದ್ದಾರೆ. ಕೆಕೆಆರ್ ಬೌಲರ್‌ಗಳಾದ ಹರ್ಷಿತ್ ರಾಣಾ ಮತ್ತು ವರುಣ್ ಚಕ್ರವರ್ತಿ ತಲಾ 10 ವಿಕೆಟ್‌ಗಳನ್ನು ಪಡೆದು ನಂತರದ ಸ್ಥಾನಗಳಲ್ಲಿದ್ದಾರೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿತು.

ಡೆಲ್ಲಿ ನೀಡಿದ 189 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಆರ್ ತಂಡ ಯಶಸ್ವಿ ಜೈಸ್ವಾಲ್ (37 ಎಸೆತಗಳಲ್ಲಿ 51) ಮತ್ತು ನಿತೀಶ್ ರಾಣಾ (28 ಎಸೆತಗಳಲ್ಲಿ 51) ಅವರ ಆಕರ್ಷಕ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಉತ್ತಮ ಆರಂಭ ಪಡೆಯಿತು. ಕೊನೆಯ ಓವರ್‌ನಲ್ಲಿ ಗೆಲ್ಲಲು 9 ರನ್‌ಗಳ ಅಗತ್ಯವಿದ್ದಾಗ ಮಿಚೆಲ್ ಸ್ಟಾರ್ಕ್ ಕೇವಲ 8 ರನ್ ನೀಡಿದರು. ಆಗ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್ ಕಳೆದುಕೊಂಡು 188 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಸೂಪರ್ ಓವರ್ ಆಡಬೇಕಾಯಿತು. ಸೂಪರ್ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT