ಕ್ರಿಕೆಟ್

ನೀವ್ ಏನೋ ಮಾಡ್ಕೋಳಿ: ತಂಡದಿಂದ ದೂರ ನಿಂತು Sanju Samson ಕೈ ಸನ್ನೆ; ಮೌನ ಮುರಿದ RR ಕೋಚ್ Rahul Dravid, Video!

ಸಂಜು ಸ್ಯಾಮ್ಸನ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಡುವೆ ಯಾವುದು ಸರಿಯಿಲ್ಲ ಎಂಬ ಕುರಿತು ಚರ್ಚೆಗಳು ಆರಂಭವಾದವು. ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ವೇಳೆ, ದ್ರಾವಿಡ್ ತಂಡದ ಆಟಗಾರರಿಗೆ ಕೆಲ ಸಲಹೆಗಳನ್ನು ನೀಡುತ್ತಿದ್ದರು.

ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀರ್ (IPL 2025) ಫ್ರಾಂಚೈಸಿ ತಂಡ ರಾಜಸ್ಥಾನ್ ರಾಯಲ್ಸ್‌ನಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲವೇ? ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಸಮಯದಲ್ಲಿ ಅಂತಹ ಒಂದು ದೃಶ್ಯ ಕಂಡುಬಂದ ನಂತರ, ಸಂಜು ಸ್ಯಾಮ್ಸನ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಡುವೆ ಬಿರುಕು ಇದೆ ಎಂದು ಜನರು ಭಾವಿಸಿದ್ದರು. ಆದಾಗ್ಯೂ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ಮುನ್ನಾದಿನ, ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಾಯಕ ಸಂಜು ಸ್ಯಾಮ್ಸನ್ ಜೊತೆಗಿನ ಯಾವುದೇ ಭಿನ್ನಾಭಿಪ್ರಾಯಗಳ ವದಂತಿಗಳನ್ನು ತಳ್ಳಿಹಾಕಿದರು. ಹೊರಗಿನ ಈ ಎಲ್ಲಾ ಮಾತುಕತೆಗಳು ಆಧಾರರಹಿತವಾಗಿವೆ ಎಂದು ಹೇಳಿದರು.

ವಿಡಿಯೋವೊಂದು ವೈರಲ್ ಆದ ನಂತರ ಸಂಜು ಸ್ಯಾಮ್ಸನ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಡುವೆ ಯಾವುದು ಸರಿಯಿಲ್ಲ ಎಂಬ ಕುರಿತು ಚರ್ಚೆಗಳು ಆರಂಭವಾದವು. ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ವೇಳೆ, ದ್ರಾವಿಡ್ ತಂಡದ ಆಟಗಾರರಿಗೆ ಕೆಲ ಸಲಹೆಗಳನ್ನು ನೀಡುತ್ತಿದ್ದರು. ಸೂಪರ್ ಓವರ್‌ನಲ್ಲಿ ಯಾರು ಬ್ಯಾಟಿಂಗ್ ಮಾಡುತ್ತಾರೆ ಎಂಬ ಚರ್ಚೆ ನಡೆಯುತ್ತಿತ್ತು. ಆದರೆ ಸ್ಯಾಮ್ಸನ್ ಮಾತ್ರ ಗುಂಪಿನಿಂದ ಸ್ವಲ್ಪ ದೂರದಲ್ಲಿ ನಿಂತಿದ್ದರು. ಇದನ್ನು ಕಂಡ ಸಹ ಆಟಗಾರ ಗುಂಪನ್ನು ಸೇರುವಂತೆ ಕೇಳಿದ್ದಕ್ಕೆ ಸಂಜು ಸ್ಯಾಮನ್ಸ್ ಕೈ ಸನ್ನೆ ಮಾಡಿ ನಿರಾಕರಿಸಿದರು.

ಶನಿವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ದ್ರಾವಿಡ್, 'ಈ ವರದಿಗಳನ್ನು ಯಾರು ಹರಡುತ್ತಿದ್ದಾರೋ ನನಗೆ ತಿಳಿದಿಲ್ಲ. ಸಂಜು ಮತ್ತು ನಾನು ಒಂದೇ ತಂಡದಲ್ಲಿದ್ದೇವೆ. ಅವರು ನಮ್ಮ ತಂಡದ ಅತ್ಯಂತ ಅವಿಭಾಜ್ಯ ಅಂಗ. ಅವರು ಪ್ರತಿಯೊಂದು ನಿರ್ಧಾರ ಮತ್ತು ಚರ್ಚೆಯಲ್ಲಿ ಭಾಗಿಯಾಗಿದ್ದಾರೆ. ಕೆಲವೊಮ್ಮೆ ನೀವು ಪಂದ್ಯಗಳನ್ನು ಕಳೆದುಕೊಂಡಾಗ ಮತ್ತು ವಿಷಯಗಳು ಸರಿಯಾಗಿ ನಡೆಯದಿದ್ದಾಗ, ನೀವು ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಅದನ್ನು ನಾವು ನಮ್ಮ ಪ್ರದರ್ಶನದ ಮೇಲೆ ಹೊರಿಸಬಹುದು. ಆದರೆ ಈ ಆಧಾರರಹಿತ ಮಾತುಗಳ ಬಗ್ಗೆ ನಾವು ಏನೂ ಮಾಡಲು ಸಾಧ್ಯವಿಲ್ಲ. ಈ ಆಟಗಾರರ ಕಠಿಣ ಪರಿಶ್ರಮದಿಂದ ನಾನು ಪ್ರಭಾವಿತನಾಗಿದ್ದೇನೆ. ಆಟಗಾರರು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದಿದ್ದಾಗ ಅವರಿಗೆ ಎಷ್ಟು ನೋವುಂಟಾಗುತ್ತದೆ ಎಂಬುದು ಜನರಿಗೆ ಅರ್ಥವಾಗದ ಒಂದು ವಿಷಯ ಎಂದರು.

ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಈ ಋತುವಿನಲ್ಲಿ 7 ಪಂದ್ಯಗಳನ್ನು ಆಡಿದ್ದು, 5 ಪಂದ್ಯಗಳಲ್ಲಿ ಸೋಲು ಮತ್ತು 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ರಾಜಸ್ಥಾನ ತಂಡ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಏಪ್ರಿಲ್ 19ರಂದು ರಾಜಸ್ಥಾನ್ ರಾಯಲ್ಸ್ ತಂಡವು ಎಲ್‌ಎಸ್‌ಜಿ ತಂಡವನ್ನು ಎದುರಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT