ಶ್ರೇಯಸ್ ಅಯ್ಯರ್ ಗೆ ಠಕ್ಕರ್ ಕೊಟ್ಟ ವಿರಾಟ್ ಕೊಹ್ಲಿ 
ಕ್ರಿಕೆಟ್

Video: 'ಕೊಟ್ಟ್ ಮೇಲೆ ತಗೊಳ್ಳೋಕು ರೆಡಿಯಾಗಿರು'; ಮೈದಾನದಲ್ಲೇ Shreyas Iyer ಗೆ ಸಿನಿಮಾ ತೋರಿಸಿದ Virat Kohli

ಈ ಪಂದ್ಯದಲ್ಲಿ ಜಿತೇಶ್ ಶರ್ಮಾ ವಿನ್ನಿಂಗ್ ಶಾಟ್ ಭಾರಿಸುತ್ತಲೇ ಮೈದಾನದಲ್ಲೇ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ನೋಡುತ್ತಾ ಅಗ್ರೆಸ್ಸಿವ್ ಆಗಿ ಸಂಭ್ರಮಾಚರಣೆ ಮಾಡಿದರು.

ಚಂಡೀಗಢ: ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದ್ದು, ಈ ಪಂದ್ಯದಲ್ಲಿ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ರನ್ನು ವಿರಾಟ್ ಕೊಹ್ಲಿ ಮೈದಾನದಲ್ಲೇ ಚೇಡಿಸಿದ ಘಟನೆ ನಡೆದಿದೆ.

ಚಂಡೀಗಢದ ಮುಲ್ಲನ್ಪುರ್ ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಕೇವಲ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿ ಜಯಭೇರಿ ಭಾರಿಸಿತು. ಆರ್ ಸಿಬಿ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು.

ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ ಅಜೇಯ 73 ರನ್ ಗಳಿಸಿದರು. ಕೊಹ್ಲಿ ಉತ್ತಮ ಸಾಥ್ ನೀಡಿದ ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 61 ರನ್ ಕಲೆಹಾಕಿದರು. ಬಳಿಕ ಕ್ರೀಸ್ ಗೆ ಬಂದ ನಾಯಕ ರಜತ್ ಪಟಿದಾರ್ 12 ರನ್ ಗಳಿಸಿದ್ದ ವೇಳೆ ಚಹಲ್ ಬೌಲಿಂಗ್ ನಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಕೈಚೆಲ್ಲಿದರು. ನಂತರ ಜಿತೇಶ್ ಶರ್ಮಾ ವಿರಾಟ್ ಕೊಹ್ಲಿ ಜೊತೆಗೂಡಿ ಅಜೇಯ 11 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಮುಗಿಸಿದರು.

ಮೈದಾನದಲ್ಲೇ Shreyas Iyer ಸಿನಿಮಾ ತೋರಿಸಿದ Virat Kohli

ಇನ್ನು ಈ ಪಂದ್ಯದಲ್ಲಿ ಜಿತೇಶ್ ಶರ್ಮಾ ವಿನ್ನಿಂಗ್ ಶಾಟ್ ಭಾರಿಸುತ್ತಲೇ ಮೈದಾನದಲ್ಲೇ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ನೋಡುತ್ತಾ ಅಗ್ರೆಸ್ಸಿವ್ ಆಗಿ ಸಂಭ್ರಮಾಚರಣೆ ಮಾಡಿದರು.

ಕೊಹ್ಲಿ ಅವರ ಸಂಭ್ರಮಾಚರಣೆ ಹೇಗಿತ್ತು ಎಂದರೆ ಈ ಹಿಂದಿನ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಗೆದ್ದು ಅಭಿಮಾನಿಗಳನ್ನು ವ್ಯಂಗ್ಯ ಮಾಡಿದ್ದ ಶ್ರೇಯಸ್ ಅಯರ್ ಇದೀಗ ಸೋಲನ್ನೂ ಹಾಗೇ ಸ್ವೀಕರಿಸು ಎನ್ನುವ ಧಾಟಿಯಲ್ಲಿ ಸಂಭ್ರಮಿಸಿದರು.

ಬಳಿಕ ಕೊಹ್ಲಿ ಬಳಿ ಹೋದ ಅಯ್ಯರ್ ಅಗ್ರೆಸ್ಸಿವ್ ಸಂಭ್ರಮಾಚರಣೆ ಕುರಿತು ಮಾತನಾಡಿದ್ದು ಈ ವೇಳೆ ಕೊಹ್ಲಿ ಕೂಡ ಕಳೆದ ಪಂದ್ಯದ ಘಟನೆಯನ್ನು ನೆನಪಿಸಿದ್ದಾರೆ ಎನ್ನಲಾಗಿದೆ. ಬಳಿಕ ಉಭಯ ಆಟಗಾರರು ತಬ್ಬಿಕೊಂಡು ಪೆವಿಲಿಯನ್ ನತ್ತ ಹೆಜ್ಜೆ ಹಾಕಿದ್ದಾರೆ.

'ಸೌಂಡೇ ಬರ್ತಿಲ್ಲ': ಆರ್ ಸಿಬಿ ಅಭಿಮಾನಿಗಳ ಕೆಣಕಿದ್ದ Shreyas Iyer

ಇನ್ನು ಈ ಹಿಂದಿನ ಪಂದ್ಯದಲ್ಲಿ ಅಂದರೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್ ಸಿಬಿ ತಂಡವನ್ನು ಪಂಜಾಬ್ ಕಿಂಗ್ಸ್ ತಂಡ 5 ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿತ್ತು. ಈ ಪಂದ್ಯದ ಬಳಿಕ ಮೈದಾನಕ್ಕೆ ಬಂದಿದ್ದ ಶ್ರೇಯಸ್ ಅಯ್ಯರ್ ಆರ್ ಸಿಬಿ ಅಭಿಮಾನಿಗಳನ್ನು ಗುರಿಯಾಗಿಸಿಕೊಂಡು 'ಸೌಂಡೇ ಬರ್ತಿಲ್ಲ' ಎನ್ನುವ ಧಾಟಿಯಲ್ಲಿ ಸನ್ಹೆ ಮಾಡಿದ್ದರು. ಇದು ಆರ್ ಸಿಬಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಶ್ರೇಯಸ್ ಅಯ್ಯರ್ ವಿಡಿಯೋ ವ್ಯಾಪಕ ವೈರಲ್ ಕೂಡ ಆಗಿತ್ತು. ಇದೀಗ ಇದೇ ಸಂಭ್ರಮಕ್ಕೆ ವಿರಾಟ್ ಕೊಹ್ಲಿ ಠಕ್ಕರ್ ನೀಡಿದ್ದಾರೆ.

ಮೊದಲೇ ವಾರ್ನಿಂಗ್ ಮಾಡಿದ್ದ ಕೊಹ್ಲಿ

ಇನ್ನು ತಮ್ಮ ಅಗ್ರೆಸ್ಸಿವ್ ಸಂಭ್ರಮಾಚರಣೆ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ್ದ ವಿರಾಟ್ ಕೊಹ್ಲಿ, ನನ್ನ ಅಗ್ರೆಸಿವ್ ಸಂಭ್ರಮ ಎಲ್ಲರಿಗೂ ಚರ್ಚೆಯ ವಿಷಯವಾಗಿದೆ. ಆದರೆ ನಾನು ಹೇಳುವುದು ಒಂದೇ.. ನೀವು ಕೊಟ್ಟ ಮೇಲೆ ಅದನ್ನು ವಾಪಸ್ ಪಡೆಯಲು ಸಿದ್ದರಾಗಿರಬೇಕು. ಇಲ್ಲವಾದಲ್ಲಿ ಯಾರಿಗೊ ಕೊಡಲು ಹೋಗಬಾರದು.. ನೀವು ಆಗ್ರೆಸ್ಸಿವ್ ಆದಾಗ ಬೇರೆಯವರೂ ಅಗ್ರೆಸಿವ್ ಆಗುತ್ತಾರೆ. ಅದನ್ನು ಸ್ವೀಕರಿಸಲು ನೀವು ಸಿದ್ದರಿರಬೇಕು ಎನ್ನುವ ಅರ್ಥದಲ್ಲಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT