ವಿರಾಟ್ ಕೊಹ್ಲಿ ಬ್ಯಾಟಿಂಗ್ 
ಕ್ರಿಕೆಟ್

IPL 2025: PBKS ವಿರುದ್ಧ Virat Kohli ಭರ್ಜರಿ ಬ್ಯಾಟಿಂಗ್, David Warner ದಾಖಲೆ ಮುರಿದ 'ಚೇಸ್ ಮಾಸ್ಟರ್'

ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಕೇವಲ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿ ಜಯಭೇರಿ ಭಾರಿಸಿತು.

ಚಂಡೀಗಢ: ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದ್ದು, ಆರ್ ಸಿಬಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಅಪರೂಪದ ದಾಖಲೆಯೊಂದನ್ನು ಮುರಿದಿದ್ದಾರೆ.

ಚಂಡೀಗಢದ ಮುಲ್ಲನ್ಪುರ್ ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಕೇವಲ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿ ಜಯಭೇರಿ ಭಾರಿಸಿತು.

ಆರ್ ಸಿಬಿ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು. ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ ಅಜೇಯ 73 ರನ್ ಗಳಿಸಿದರು.

67ನೇ ಅರ್ಧಶತಕ

ಇನ್ನು ಇಂದಿನ ಪಂದ್ಯದ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇನ್ನು ಪಂಜಾಬ್ ವಿರುದ್ಧ ಕೊಹ್ಲಿ ಅರ್ಧಶತಕ ಸಿಡಿಸಿದರು. ಇದು ಐಪಿಎಲ್ ನಲ್ಲಿ ಅವರ 67ನೇ ಅರ್ಧಶತಕವಾಗಿದೆ. ಆ ಮೂಲಕ ಕೊಹ್ಲಿ ಐಪಿಎಲ್ ನಲ್ಲಿ ಅತೀ ಹೆಚ್ಚು ಅರ್ಧಶತಕ ಸಿಡಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಡೇವಿಡ್ ವಾರ್ನರ್ ದಾಖಲೆ ಪತನ

ಇನ್ನು ಐಪಿಎಲ್ ನಲ್ಲಿ ಈ ವರೆಗೂ ಗರಿಷ್ಠ ಅರ್ಧಶತಕ ಸಿಡಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನವಾಗಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಇದೀಗ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ದಾಖಲೆಯಲ್ಲಿ ವಿರಾಟ್ ಕೊಹ್ಲಿ ಪತನ ಮಾಡಿದ್ದಾರೆ. ವಾರ್ನರ್ ಐಪಿಎಲ್ ನಲ್ಲಿ ಒಟ್ಟು 66 ಅರ್ಧಶತಕ ಸಿಡಿಸಿದ್ದು, ಇಂದು ಕೊಹ್ಲಿ 67ನೇ ಅರ್ಧಶತಕ ಸಿಡಿಸಿ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ 53 ಅರ್ಧಶತಕಗಳೊಂದಿಗೆ ಶಿಖರ್ ಧವನ್ 3ನೇ ಸ್ಥಾನದಲ್ಲಿದ್ದು, 45 ಅರ್ಧಶತಗಳನ್ನು ಸಿಡಿಸಿರುವ ರೋಹಿತ್ ಶರ್ಮಾ 4 ಮತ್ತು 43 ಅರ್ಧಶತಕಗಳನ್ನು ಸಿಡಿಸಿರುವ ಕೆಎಲ್ ರಾಹುಲ್ 5ನೇ ಸ್ಥಾನದಲ್ಲಿದ್ದಾರೆ.

Most 50+ scores in IPL

  • 67 Virat Kohli (8 X 100s)

  • 66 David Warner (4 X 100s)

  • 53 Shikhar Dhawan (2 X 100s)

  • 45 Rohit Sharma (2 X 100s)

  • 43 KL Rahul (4 X 100s)

  • 43 AB de Villiers (3 X 100s)

ಮತ್ತೆ ಚೇಸಿಂಗ್ ನಲ್ಲಿ ಚೇಸಿಂಗ್ ಮಾಸ್ಟರ್ ಕೊಹ್ಲಿ ಮಿಂಚಿಂಗ್

ಇನ್ನು ಇಂದಿನ ಪಂದ್ಯದ ಭರ್ಜರಿ ಬ್ಯಾಟಿಂಗ್ ಮೂಲಕ ವಿರಾಟ್ ಕೊಹ್ಲಿ ತಾವು ಚೇಸಿಂಗ್ ಮಾಸ್ಟರ್ ಎಂದು ಮತ್ತೆ ಸಾಬೀತು ಮಾಡಿದ್ದಾರೆ. ಹಾಲಿ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ಚೇಸ್ ಮಾಡುವ ವೇಳೆ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದು, ಇಂದು ಪಂಜಾಬ್ ವಿರುದ್ಧ ಅಜೇಯ 73 ರನ್ ಗಳಿಸಿದರು. ಅಂತೆಯೇ ಕೆಕೆಆರ್ ವಿರುದ್ಧ ಅಜೇಯ 59 ಮತ್ತು ರಾಜಸ್ತಾನ ರಾಯಲ್ಸ್ ವಿರುದ್ಧ ಅಜೇಯ 62 ರನ್, ಪಂಜಾಬ್ ವಿರುದ್ಧ ಅಜೇಯ 50 ರನ್ ಗಳಿಸಿದ್ದರು.

Virat Kohli in run chases in IPL 2025

  • 59*(36) vs KKR

  • 62*(45) vs RR

  • 50*(43) vs PBKS

  • Last five scores vs PBKS: 59, 77, 92, 1, & 50*.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT