ಆರ್ ಸಿಬಿಗೆ ಭರ್ಜರಿ ಜಯ BCCI
ಕ್ರಿಕೆಟ್

IPL 2025: PBKS ವಿರುದ್ಧ RCBಗೆ ದಾಖಲೆಯ ಜಯ, ಹೊರಗೆ ಸತತ 5ನೇ ಗೆಲುವು!

ಆರ್ ಸಿಬಿ ತನ್ನ ತವರು ಕ್ರೀಡಾಂಗಣ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಾನಾಡಿದ ಎಲ್ಲ ಮೂರು ಪಂದ್ಯಗಳಲ್ಲಿ ಮುಗ್ಗರಿಸಿದ್ದು, ಇಂದು ಚಂಡೀಗಢದಲ್ಲಿ ಗೆದ್ದ ಇದೇ ಪಂಜಾಬ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೀನಾಯ ಸೋಲು ಕಂಡಿತ್ತು.

ಚಂಡೀಗಢ: ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದ್ದು, ಈ ಪಂದ್ಯದ ಗೆಲುವಿನ ಮೂಲಕ ಆರ್ ಸಿಬಿ ಅಪರೂಪದ ದಾಖಲೆಗೆ ಪಾತ್ರವಾಗಿದೆ.

ಚಂಡೀಗಢದ ಮುಲ್ಲನ್ಪುರ್ ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಕೇವಲ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿ ಜಯಭೇರಿ ಭಾರಿಸಿತು. ಆರ್ ಸಿಬಿ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು.

ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ ಅಜೇಯ 73 ರನ್ ಗಳಿಸಿದರು. ಕೊಹ್ಲಿ ಉತ್ತಮ ಸಾಥ್ ನೀಡಿದ ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 61 ರನ್ ಕಲೆಹಾಕಿದರು. ಬಳಿಕ ಕ್ರೀಸ್ ಗೆ ಬಂದ ನಾಯಕ ರಜತ್ ಪಟಿದಾರ್ 12 ರನ್ ಗಳಿಸಿದ್ದ ವೇಳೆ ಚಹಲ್ ಬೌಲಿಂಗ್ ನಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಕೈಚೆಲ್ಲಿದರು. ನಂತರ ಜಿತೇಶ್ ಶರ್ಮಾ ವಿರಾಟ್ ಕೊಹ್ಲಿ ಜೊತೆಗೂಡಿ ಅಜೇಯ 11 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಮುಗಿಸಿದರು.

ತವರಿನಲ್ಲಿ ಸತತ ಮುಖಭಂಗ

ಇನ್ನು ಆರ್ ಸಿಬಿ ತನ್ನ ತವರು ಕ್ರೀಡಾಂಗಣ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಾನಾಡಿದ ಎಲ್ಲ ಮೂರು ಪಂದ್ಯಗಳಲ್ಲಿ ಮುಗ್ಗರಿಸಿದ್ದು, ಇಂದು ಚಂಡೀಗಢದಲ್ಲಿ ಗೆದ್ದ ಇದೇ ಪಂಜಾಬ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೀನಾಯ ಸೋಲು ಕಂಡಿತ್ತು. ಇದಕ್ಕೂ ಮೊದಲು ಚಿನ್ನಸ್ವಾಮಿಯಲ್ಲಿ ನಡೆದಿದ್ದ ಗುಜರಾತ್ ಟೈಟನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಆರ್ ಸಿಬಿ ಸೋತಿತ್ತು.

ಹೊರಗೆ ಸತತ 5ನೇ ಗೆಲುವು

ಇನ್ನು ಹಾಲಿ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣ ಹೊರತು ಪಡಿಸಿ ಹೊರಗಿನ ಕ್ರೀಡಾಂಗಣದಲ್ಲಿ ಆಡಿದ ಎಲ್ಲ ಪಂದ್ಯಗಳನ್ನೂ ಜಯಿಸಿದೆ.

ಮಾರ್ಚ್ 28ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಚೆಪಾಕ್ ಕ್ರೀಡಾಂಗಣದಲ್ಲಿ ಆರಂಭವಾದ ಆರ್ ಸಿಬಿ ಜೈತ್ರ ಯಾೃತ್ರೆ ಇಂದು ಚಂಡೀಗಢದ ಮುಲ್ಲನ್ಪುರ್ ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲೂ ಮುಂದುವರೆದಿದೆ. ಆರ್ ಸಿಬಿ ಇದಕ್ಕೂ ಮೊದಲು ಕೋಲ್ಕತಾದಲ್ಲಿ ಕೆಕೆಆರ್ ವಿರುದ್ಧ, ವಾಂಖೆಡೆಯಲ್ಲಿ ಮುಂಬೈ ವಿರುದ್ಧ, ಜೈಪುರದಲ್ಲಿ ಆರ್ ಆರ್ ವಿರುದ್ಧ ಜಯ ಗಳಿಸಿತ್ತು. ಆ ಮೂಲಕ ಹೊರಗಿನ ಕ್ರೀಡಾಂಗಣದಲ್ಲಿ ಅಜೇಯವಾಗಿ ಉಳಿದಿದೆ.

Five away wins for RCB in the league phase in a season

  • 2012 (8 games)

  • 2015 (7 games)

  • 2025 (5* games)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT