ರೊಮಾರಿಯೋ ಶೆಫರ್ಡ್ 
ಕ್ರಿಕೆಟ್

IPL 2025: PBKS ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ RCB?; ಟಾಸ್ ಗೆದ್ದ Rajat Patidar ಬೌಲಿಂಗ್ ಆಯ್ಕೆ, ಕೊನೆಗೂ ತಂಡ ಸೇರಿದ ಸ್ಫೋಟಕ ಬ್ಯಾಟರ್!

ದಕ್ಷಿಣ ಆಫ್ರಿಕಾ ಮೂಲದ ಸ್ಫೋಟಕ ಆಲ್ರೌಂಡರ್ ರೊಮಾರಿಯೋ ಶೆಫರ್ಡ್ ರನ್ನು ಆರ್ ಸಿಬಿ ಕಳೆದ ಆಟಗಾರರ ಹರಾಜಿನಲ್ಲಿ ಮೂಲಬೆಲೆ 1.5 ಕೋಟಿ ರೂಗೆ ಖರೀದಿ ಮಾಡಿತ್ತು.

ಚಂಡೀಗಢ: ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಮತ್ತೆ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಚಂಡೀಗಢದ ಮುಲ್ಲನ್ಪುರ್ ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದ, ಟಾಸ್ ಗೆದ್ದ ಆರ್ ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಟಾಸ್ ಗೆಲ್ಲುತ್ತಿದ್ದಂತೆಯೇ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡರು. ಅಂತೆಯೇ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಲಿವಿಂಗ್ ಸ್ಟೋನ್ ಬದಲಿಗೆ ದಕ್ಷಿಣ ಆಫ್ರಿಕಾದ ಸ್ಫೋಟಕ ಆಲ್ರೌಂಡರ್ ರೊಮಾರಿಯೋ ಶೆಫರ್ಡ್ ಗೆ ಅವಕಾಶ ಕಲ್ಪಿಸಿದ್ದಾರೆ.

ಕೊನೆಗೂ ತಂಡ ಸೇರಿದ ಸ್ಫೋಟಕ ಬ್ಯಾಟರ್!

ಇನ್ನು ದಕ್ಷಿಣ ಆಫ್ರಿಕಾ ಮೂಲದ ಸ್ಫೋಟಕ ಆಲ್ರೌಂಡರ್ ರೊಮಾರಿಯೋ ಶೆಫರ್ಡ್ ರನ್ನು ಆರ್ ಸಿಬಿ ಕಳೆದ ಆಟಗಾರರ ಹರಾಜಿನಲ್ಲಿ ಮೂಲಬೆಲೆ 1.5 ಕೋಟಿ ರೂಗೆ ಖರೀದಿ ಮಾಡಿತ್ತು.

ಯಾರು ಈ ಸ್ಫೋಟಕ ಬ್ಯಾಟರ್!

ಗಯಾನದ ಈ ಬಲಗೈ ವೇಗದ-ಮಧ್ಯಮ ಬೌಲಿಂಗ್ ಆಲ್‌ರೌಂಡರ್, ಸ್ಫೋಟಕ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ಮಾಡಬಲ್ಲರು. 2022ರಲ್ಲಿ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡಿದ್ದ ರೊಮಾರಿಯೋ ಕಳೆದ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಟಾಟಾ ಐಪಿಎಲ್ 2024 ಸೀಸನ್ ನಲ್ಲಿ ರೊಮಾರಿಯೋ ಮುಂಬೈ ಇಂಡಿಯನ್ಸ್ ಪರ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಆಡುವಾಗ ವಾಂಖೆಡೆ ಕ್ರೀಡಾಂಗಣದಲ್ಲಿ ಮಿಂಚಿದ್ದರು.

ಅಂದು ಹೆನ್ರಿಚ್ ನಾರ್ಟ್ಜೆ ಎಸೆದ ಒಂದೇ ಓವರ್‌ನಲ್ಲಿ ನಾಲ್ಕು ಸಿಕ್ಸರ್‌ಗಳು ಮತ್ತು ಎರಡು ಬೌಂಡರಿಗಳು ಸೇರಿದಂತೆ 32 ರನ್‌ಗಳನ್ನು ಚಚ್ಚಿದ್ದರು. ಅಂತೆಯೇ ವೆಸ್ಟ್ ಇಂಡೀಸ್ ಪರ 40 ಕ್ಕೂ ಹೆಚ್ಚು ಟಿ20ಐಗಳನ್ನು ಆಡಿರುವ ರೊಮಾರಿಯೋ ಬೌಲಿಂಗ್ ಸರಾಸರಿ 28 ಕ್ಕಿಂತ ಕಡಿಮೆ ಮತ್ತು ಸುಮಾರು 140 ಬ್ಯಾಟಿಂಗ್ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಒಬ್ಬಂಟಿಯಾಗಿ ಪಂದ್ಯಗಳನ್ನು ಗೆಲ್ಲಿಸಬಲ್ಲ ಅತ್ಯಂತ ಪರಿಣಾಮಕಾರಿ ಆಟಗಾರ ಇದೀಗ ಮೊದಲ ಬಾರಿಗೆ ಆರ್ ಸಿಬಿ ಇಂದು ಕಣಕ್ಕಿಳಿಯುತ್ತಿದ್ದಾರೆ.

ಆರ್ ಸಿಬಿ ಸೇಡಿನ ಪಂದ್ಯ

ಇದೇ ಪಂಜಾಬ್ ವಿರುದ್ದ ಆರ್ ಸಿಬಿ ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಹೀನಾಯವಾಗಿ ಸೋತಿತ್ತು. ಇದರೆ ಬೆನ್ನಲ್ಲೇ ಆರ್ ಸಿಬಿ ಕೇವಲ 2 ದಿನಗಳ ಅಂತರದಲ್ಲಿ ಅದೇ ತಂಡದ ವಿರುದ್ಧ ಪಂದ್ಯವನ್ನಾಡುತ್ತಿದ್ದು, ಈ ಪಂದ್ಯದಲ್ಲಿ ಆರ್ ಸಿಬಿ ತಿರುಗೇಟು ನೀಡಲಿದೆ ಎಂದು ಅಭಿಮಾನಿಗಳು ಭರವಸೆ ವ್ಯಕ್ತಪಡಿಸಿದ್ದಾರೆ.

ತಂಡಗಳು ಇಂತಿವೆ

ಪಂಜಾಬ್ ಕಿಂಗ್ಸ್:

ಪ್ರಭಾಸಿಮ್ರಾನ್ ಸಿಂಗ್, ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು:

ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT