ಶುಭಮನ್ ಗಿಲ್ 
ಕ್ರಿಕೆಟ್

IPL 2025: ಡೆಲ್ಲಿ ವಿರುದ್ಧ ಗುಜರಾತ್‌ಗೆ ಜಯ; ನಾಯಕ ಶುಭಮನ್ ಗಿಲ್‌ಗೆ ದಂಡ

ಜೋಸ್ ಬಟ್ಲರ್ ಅವರ ಅಜೇಯ 97 ರನ್‌ಗಳ ನೆರವಿನಿಂದ, ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 204 ರನ್ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡ ಇನ್ನೂ ನಾಲ್ಕು ಎಸೆತಗಳು ಬಾಕಿ ಇರುವಾಗಲೇ ತಲುಪಿತು.

ಜೈಪುರ: ಇಲ್ಲಿ ಶನಿವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಏಳು ವಿಕೆಟ್‌ಗಳ ಜಯ ಸಾಧಿಸಿದ್ದು, ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಾಯಕ ಶುಭಮನ್ ಗಿಲ್‌ಗೆ ದಂಡ ವಿಧಿಸಲಾಗಿದೆ.

ಜೋಸ್ ಬಟ್ಲರ್ ಅವರ ಅಜೇಯ 97 ರನ್‌ಗಳ ನೆರವಿನಿಂದ, ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 204 ರನ್ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡ ಇನ್ನೂ ನಾಲ್ಕು ಎಸೆತಗಳು ಬಾಕಿ ಇರುವಾಗಲೇ ತಲುಪಿತು.

ಈ ಬಾರಿಯ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಗುಜರಾತ್ ಟೈಟಾನ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದೆ. ಐಪಿಎಲ್ ನೀತಿ ಸಂಹಿತೆಯ ನಿಯಮ 2.22 ಅನ್ನು ಉಲ್ಲಂಘಿಸಿದ್ದಕ್ಕಾಗಿ ನಾಯಕ ಶುಭಮನ್ ಗಿಲ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿತು. ವೇಗಿ ಪ್ರಸಿದ್ಧ್ ಕೃಷ್ಣ (4/41) ಅವರ ಆಕರ್ಷಕ ಬೌಲಿಂಗ್ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 203 ರನ್‌ಗಳಿಗೆ ಕಟ್ಟಿಹಾಕಿತು.

ಈ ಸವಾಲಿನ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 19.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಗಳಿಸುವ ಮೂಲಕ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್