ವೈಭವ್ ಸೂರ್ಯವಂಶಿ 
ಕ್ರಿಕೆಟ್

IPL 2025: ದಾಖಲೆ ಹೊರತಾಗಿಯೂ ಮೈದಾನದಿಂದ ಕಣ್ಣೀರಾಕುತ್ತಲೇ ಹೊರನಡೆದ ವೈಭವ್ ಸೂರ್ಯವಂಶಿ!

14 ವರ್ಷ 23 ದಿನಗಳ ವಯಸ್ಸಿನ ಈ ಯುವ ಪ್ರತಿಭೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಮೊದಲ ಎಸೆತದಲ್ಲೇ ಅವರು ಅನುಭವಿ ಶಾರ್ದೂಲ್ ಠಾಕೂರ್ ಅವರ ಎಸೆತದಲ್ಲಿ ಸಿಕ್ಸರ್‌ ಬಾರಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಶನಿವಾರ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದು, ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

14 ವರ್ಷ 23 ದಿನಗಳ ವಯಸ್ಸಿನ ಈ ಯುವ ಪ್ರತಿಭೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಮೊದಲ ಎಸೆತದಲ್ಲೇ ಅವರು ಅನುಭವಿ ಶಾರ್ದೂಲ್ ಠಾಕೂರ್ ಅವರ ಎಸೆತದಲ್ಲಿ ಸಿಕ್ಸರ್‌ ಬಾರಿಸಿದ್ದಾರೆ. ಕೇವಲ 20 ಎಸೆತಗಳಲ್ಲಿ 34 ರನ್ ಗಳಿಸುವ ಮೂಲಕ ಭರವಸೆ ಮೂಡಿಸಿದ್ದಾರೆ. ಅವರ ಇನಿಂಗ್ಸ್‌ನಲ್ಲಿ ಮೂರು ಸಿಕ್ಸರ್‌ ಮತ್ತು ಎರಡು ಬೌಂಡರಿ ಸೇರಿದ್ದವು. ಈಡನ್ ಮಾರ್ಕ್ರಮ್ ಅವರ ಎಸೆತದಲ್ಲಿ ಔಟ್ ಆದಾಗ ವೈಭವ್ ಭಾವುಕರಾಗಿದ್ದರು ಮತ್ತು ಕಣ್ಣೀರು ಹೊರೆಸಿಕೊಳ್ಳುತ್ತಲೇ ಮೈದಾನದಿಂದ ಹೊರಬಂದರು.

ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 2 ರನ್‌ಗಳ ರೋಚಕ ಗೆಲುವು ಸಾಧಿಸಿತು. ಕೊನೆಯ ಓವರ್‌ವರೆಗೂ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್‌ಆರ್ ತಂಡ ಸೋಲು ಸತತ ಸೋಲು ಕಂಡಿತು.

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತು. ಏಡೆನ್ ಮಾರ್ಕ್ರಮ್ 66, ಆಯುಷ್ ಬದೋನಿ 50 ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಮೊತ್ತ ಕಲೆಹಾಕಲು ನೆರವಾದರು.

ಲಕ್ನೋ ನೀಡಿದ ಈ ಸವಾಲಿನ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 14 ವರ್ಷದ ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ ಪತನದ ವೇಳೆಗೆ 85 ರನ್ ಕಲೆಹಾಕಿತು. ವೈಭವ್ ಸೂರ್ಯವಂಶಿ 34 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 74 ರನ್ ಗಳಿಸಿದರು. ಕೊನೆಯ ಓವರ್‌ನಲ್ಲಿ ಗೆಲುವಿಗೆ 9 ರನ್ ಬೇಕಿದ್ದಾಗ ಡೆಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆವೇಶ್ ಖಾನ್ ಅವರ ಉತ್ತಮ ಬೌಲಿಂಗ್‌ನಿಂದಾಗಿ 2 ರನ್‌ಗಳ ರೋಚಕ ಗೆಲುವು ಸಿಕ್ಕಿತು.

RR ತಂಡ ಆಡಿರುವ 8 ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದರೆ, LSG ಆಡಿರುವ 8 ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸುವ ಮೂಲಕ ನಾಲ್ಕನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT