ವಿರಾಟ್ ಕೊಹ್ಲಿ ಮತ್ತು ಹರ್‌ಪ್ರೀತ್ ಬ್ರಾರ್‌ 
ಕ್ರಿಕೆಟ್

Video: '20 ವರ್ಷದಿಂದ ಕ್ರಿಕೆಟ್ ಆಡ್ತಾ ಇದೀನಿ.. ಚಿಲ್ರೆ ಬಾಲ್ ಗೆಲ್ಲಾ ಔಟ್ ಆಗಲ್ಲ': PBKS ಬೌಲರ್ ಬೆವರಿಳಿಸಿದ Virat Kohli

ಪಂಜಾಬ್ ಸ್ಪಿನ್ನರ್ ಹರ್‌ಪ್ರೀತ್ ಬ್ರಾರ್‌ ಆರ್ ಸಿಬಿಯ ವಿರಾಟ್ ಕೊಹ್ಲಿಯನ್ನು ಔಟ್ ಮಾಡಲು ಹರಸಾಹಸ ಪಟ್ಟರು. ಆದರೆ ಕೊಹ್ಲಿ ಅದಾವುದಕ್ಕೂ ತಲೆಕೆಡಿಸಿಕೊಳ್ಳದೇ ತಮ್ಮ ಬ್ಯಾಟಿಂಗ್ ಮುಂದುವರೆಸಿದ್ದರು.

ಚಂಡೀಗಢ: ಐಪಿಎಲ್ ಟೂರ್ನಿಯಲ್ಲಿ ನಿನ್ನೆ ನಡೆದ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯ ಹಲವು ನಾಟಕೀಯ ಘಟನೆಗಳಿಗೆ ವೇದಿಕೆಯಾಗಿತ್ತು.

ಹೌದು.. ಚಂಡೀಗಢದ ಮುಲ್ಲನ್ಪುರ್ ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಕೇವಲ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿ ಜಯಭೇರಿ ಭಾರಿಸಿತು. ಆರ್ ಸಿಬಿ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು. ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ ಅಜೇಯ 73 ರನ್ ಗಳಿಸಿದರು.

ಕೊಹ್ಲಿ ಉತ್ತಮ ಸಾಥ್ ನೀಡಿದ ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 61 ರನ್ ಕಲೆಹಾಕಿದರು. ಬಳಿಕ ಕ್ರೀಸ್ ಗೆ ಬಂದ ನಾಯಕ ರಜತ್ ಪಟಿದಾರ್ 12 ರನ್ ಗಳಿಸಿದ್ದ ವೇಳೆ ಚಹಲ್ ಬೌಲಿಂಗ್ ನಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಕೈಚೆಲ್ಲಿದರು. ನಂತರ ಜಿತೇಶ್ ಶರ್ಮಾ ವಿರಾಟ್ ಕೊಹ್ಲಿ ಜೊತೆಗೂಡಿ ಅಜೇಯ 11 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಮುಗಿಸಿದರು.

'ಚಿಲ್ರೆ ಬಾಲ್ ಗೆಲ್ಲಾ ಔಟ್ ಆಗಲ್ಲ'

ಪಂಜಾಬ್ ಸ್ಪಿನ್ನರ್ ಹರ್‌ಪ್ರೀತ್ ಬ್ರಾರ್‌ ಆರ್ ಸಿಬಿಯ ವಿರಾಟ್ ಕೊಹ್ಲಿಯನ್ನು ಔಟ್ ಮಾಡಲು ಹರಸಾಹಸ ಪಟ್ಟರು. ಆದರೆ ಕೊಹ್ಲಿ ಅದಾವುದಕ್ಕೂ ತಲೆಕೆಡಿಸಿಕೊಳ್ಳದೇ ತಮ್ಮ ಬ್ಯಾಟಿಂಗ್ ಮುಂದುವರೆಸಿದ್ದರು. ಈ ವೇಳೆ ನಾನ್ ಸ್ಟ್ರೈಕರ್ ನಲ್ಲಿದ್ದ ವಿರಾಟ್ ಕೊಹ್ಲಿಯನ್ನು ಬ್ರಾರ್ ಸ್ಲೆಡ್ಜ್ ಮಾಡಲು ಪ್ರಯತ್ನಿಸಿದ್ದಾರೆ. ಬ್ರಾರ್ ಗೆ ಈ ವೇಳೆ ತೀಕ್ಷ್ಣವಾಗಿಯೇ ತಿರುಗೇಟು ಕೊಟ್ಟ ಕೊಹ್ಲಿ, 20 ವರ್ಷದಿಂದ ಕ್ರಿಕೆಟ್ ಆಡುತ್ತಿದ್ದೇನೆ. ಚಿಲ್ರೆ ಎಸೆತಗಳಿಗೆಲ್ಲಾ ಔಟಾಗಲ್ಲ ಎಂದು ಹೇಳಿದ್ದಾರೆ. ಈ ವೇಳೆ ಬ್ರಾರ್ ಕೊಹ್ಲಿಯನ್ನು ಸಂತೈಸುವ ಕಾರ್ಯ ಮಾಡಿದರು. ಕೊಹ್ಲಿ ಮತ್ತು ಬ್ರಾರ್ ನಡುವಿನ ಮಾತುಕತೆ ಸ್ಟಂಪ್ ಮೈಕ್ ನಲ್ಲಿ ದಾಖಲಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಪಂದ್ಯಶ್ರೇಷ್ಠ ಪ್ರಶಸ್ತಿ

ಇನ್ನು ಕೊಹ್ಲಿ ಈ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ ಕೊನೆಯ ಎಸೆತದವರೆಗೂ ಕ್ರೀಸ್ ನಲ್ಲಿದ್ದು ಆರ್ ಸಿಬಿಗೆ ಗೆಲುವು ತಂದುಕೊಟ್ಟರು. ಹೀಗಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT