ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ 
ಕ್ರಿಕೆಟ್

BCCI ಸೆಂಟ್ರಲ್ ಕಾಂಟ್ರಾಕ್ಟ್: ನಿರೀಕ್ಷೆಯಂತೆಯೇ Shreyas Iyer, Ishan Kishanಗೆ ಸ್ಥಾನ!

ಕಳೆದ ವರ್ಷ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ರನ್ನು ಸೆಂಟ್ರಲ್ ಕಾಂಟ್ರಾಕ್ಟ್ ನಿಂದ ಹೊರಗಿಡಲಾಗಿತ್ತು.

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೆಂಟ್ರಲ್ ಕಾಂಟ್ರಾಕ್ಟ್ ಪರಿಷ್ಕರಣೆ ಕೊನೆಗೂ ಮುಕ್ತಾಯವಾಗಿದ್ದು, ಚಾಂಪಿಯನ್ಸ್ ಟ್ರೋಫಿ ಮತ್ತು ಹಾಲಿ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಗೆ ಈ ಬಾರಿ ಬಂಪರ್ ಸಿಕ್ಕಿದೆ.

ಹೌದು.. BCCI ಸೆಂಟ್ರಲ್ ಕಾಂಟ್ರಾಕ್ಟ್ ಘೋಷಣೆಯಾಗಿದ್ದು, ಸೆಂಟ್ರಲ್ ಕಾಂಟ್ರಾಕ್ಟ್ ನಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಕೊನೆಗೂ ಸ್ಥಾನ ಗಿಟ್ಟಿಸಿದ್ದಾರೆ. ಕಳೆದ ವರ್ಷ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ರನ್ನು ಸೆಂಟ್ರಲ್ ಕಾಂಟ್ರಾಕ್ಟ್ ನಿಂದ ಹೊರಗಿಡಲಾಗಿತ್ತು. ಎಚ್ಚರಿಕೆ ಹೊರತಾಗಿಯೂ ಈ ಇಬ್ಬರು ಆಟಗಾರರು ದೇಶೀಯ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳದ ಹಿನ್ನಲೆಯಲ್ಲಿ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿತ್ತು.

ಇದೀಗ ಈ ಇಬ್ಬರೂ ಆಟಗಾರರು ದೇಶೀಯ ಕ್ರಿಕೆಟ್ ಸೇರಿದಂತೆ ರಾಷ್ಟ್ರೀಯ ಮಟ್ಟದಲ್ಲೂ ಉತ್ತಮ ಪ್ರದರ್ಶನ ತೋರುತ್ತಿರುವದರಿಂದ ಬಿಸಿಸಿಐ ಈ ಇಬ್ಬರು ಆಟಗಾರರನ್ನು ಮತ್ತೆ ಸೆಂಟ್ರಲ್ ಕಾಂಟ್ರಾಕ್ಟ್ ಗೆ ಸೇರ್ಪಡೆಗೊಳಿಸಿದೆ.

ಎ+ ನಲ್ಲಿ ಕೊಹ್ಲಿ, ರೋಹಿತ್, ಬುಮ್ರಾ, ರವೀಂದ್ರ ಜಡೇಜಾ

ಇನ್ನು ಬಿಸಿಸಿಐ ಘೋಷಣೆ ಮಾಡಿರುವ ಸೆಂಟ್ರಲ್ ಕಾಂಟ್ರಾಕ್ಟ್ ನಲ್ಲಿ ಭಾರತದ ಬ್ಯಾಟಿಂಗ್ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಎ+ ದರ್ಜೆಯಲ್ಲಿ ಮುಂದುವರೆದಿದ್ದಾರೆ. ಇತ್ತ ಬೌಲಿಂಗ್ ವಿಭಾಗದಲ್ಲಿ ಜಸ್ ಪ್ರೀತ್ ಬುಮ್ರಾ ಕೂಡ ಎ+ನಲ್ಲಿ ಮುಂದುವರೆದರೆ ಈ ಬಾರಿ ರವೀಂದ್ರ ಜಡೇಜಾ ಎ+ಗೆ ಹೊಸ ಸೇರ್ಪಡೆಯಾಗಿದ್ದಾರೆ. ಎ+ನಲ್ಲಿರುವ ಆಟಗಾರರು ಬಿಸಿಸಿಐನಿಂದ ವಾರ್ಷಿಕ 7 ಕೋಟಿ ರೂ ವೇತನ ಪಡೆಯಲಿದ್ದಾರೆ. ಟಿ20 ಸ್ವರೂಪದಿಂದ ನಿವೃತ್ತರಾದ ನಂತರವೂ, ರೋಹಿತ್ ಮತ್ತು ಕೊಹ್ಲಿ ಎ+ ವಿಭಾಗದಲ್ಲಿ ಮುಂದುವರೆದಿದ್ದಾರೆ.

'ಎ' ನಲ್ಲಿ 6 ಆಟಗಾರರು

ಇನ್ನು ಎ ಗ್ರೇಡ್ ನಲ್ಲಿ ಟೀಂ ಇಂಡಿಯಾದ 6 ಆಟಗಾರರಿದ್ದು, ವೇಗಿಗಳಾದ ಮಹಮದ್ ಶಮಿ, ಮಹಮದ್ ಸಿರಾಜ್, ಕನ್ನಡಿಗ ಕೆಎಲ್ ರಾಹುಲ್, ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್, ಹಾರ್ದಿಕ್ ಪಾಂಡ್ಯಾ ಮತ್ತು ಶುಭ್ ಮನ್ ಗಿಲ್ ಇದ್ದಾರೆ.

ಅಂತೆಯೇ ಬಿ ಗ್ರೇಡ್ ನಲ್ಲಿ 5 ಆಟಗಾರರಿದ್ದು, ಸೂರ್ಯ ಕುಮಾರ್ ಯಾದವ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.

ಉಳಿದಂತೆ ಸಿ ಗ್ರೇಡ್ ನಲ್ಲಿ 19 ಆಟಗಾರರಿದ್ದು, ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಶ್ ದೀಪ್ ಸಿಂಗ್, ಕನ್ನಡಿಗ ಪ್ರಸಿದ್ಧ್ ಕೃಷ್ಣ, ಆರ್ ಸಿಬಿ ನಾಯಕ ರಜತ್ ಪಟಿದಾರ್, ಧ್ರುವ್ ಜುರೆಲ್, ಸರ್ಫರಾಜ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಆಕಾಶ್ ದೀಪ್, ವರುಣ್ ಚಕ್ರವರ್ತಿ ಮತ್ತು ಹರ್ಷಿತ್ ರಾಣಾ ಈ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಿ 20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಅಜೇಯ ರನ್‌ಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಆಲ್ ರೌಂಡರ್ ಅಕ್ಷರ್ ಪಟೇಲ್, ಅಲ್ಲದೆ ಕಳೆದ 12 ತಿಂಗಳುಗಳಲ್ಲಿ ವಿವಿಧ ಸ್ವರೂಪಗಳಲ್ಲಿ ಭಾರತಕ್ಕಾಗಿ ಅದ್ಭುತ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ, ನಿತೀಶ್ ಕುಮಾರ್ ರೆಡ್ಡಿ ಮತ್ತು ಅಭಿಷೇಕ್ ಶರ್ಮಾ ತಮ್ಮ ವೃತ್ತಿ ಜೀವನದ ಮೊದಲ ಕೇಂದ್ರ ಒಪ್ಪಂದವನ್ನು ಗಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT