ವೆಂಕಟೇಶ್ ಅಯ್ಯರ್ 
ಕ್ರಿಕೆಟ್

IPL 2025: 'ರಿಮೋಟ್ ಖರೀದಿಸಲು TV ಮಾರಿದರು'; KKR ವಿರುದ್ಧ ಮುಗಿಬಿದ್ದ ಅಭಿಮಾನಿಗಳು

ಪಂಜಾಬ್ ಕಿಂಗ್ಸ್ ತಂಡದ ಶ್ರೇಯಸ್ ಅಯ್ಯರ್ ಈ ಆವೃತ್ತಿಯಲ್ಲಿ ಆಡಿರುವ 8 ಪಂದ್ಯಗಳಲ್ಲಿ 43.83 ಸರಾಸರಿಯಲ್ಲಿ ಮೂರು ಅರ್ಧಶತಕಗಳನ್ನು ಒಳಗೊಂಡಂತೆ 263 ರನ್ ಗಳಿಸಿದ್ದಾರೆ.

ಈ ಬಾರಿ ನಡೆದ ಮೆಗಾ ಹರಾಜಿನಲ್ಲಿ ಹಾಲಿ ಚಾಂಪಿಯನ್ ತಂಡದ ನಾಯಕರಾಗಿದ್ದ ಶ್ರೇಯಸ್ ಅಯ್ಯರ್ ಅವರನ್ನು ಕೈಬಿಟ್ಟು ವೆಂಕಟೇಶ್ ಅಯ್ಯರ್ ಅವರನ್ನು ಹೆಚ್ಚಿನ ಬೆಲೆಗೆ ಖರೀದಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಫ್ರಾಂಚೈಸಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025ರ ಹರಾಜಿನಲ್ಲಿ 23.75 ಕೋಟಿ ರೂಪಾಯಿಗಳಿಗೆ ಖರೀದಿಸಲಾದ ವೆಂಕಟೇಶ್ ಅಯ್ಯರ್ ಅವರು ಈ ಆವೃತ್ತಿಯಲ್ಲಿ ಅಷ್ಟೇನು ಉತ್ತಮ ಪ್ರದರ್ಶನ ನೀಡಿಲ್ಲ. ಸತತ ವೈಫಲ್ಯಗಳ ನಂತರ ಕೆಕೆಆರ್ ಅಭಿಮಾನಿಗಳು ತಂಡದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ.

ವೆಂಕಟೇಶ್ ಅಯ್ಯರ್ ಆಡಿರುವ ಎಂಟು ಪಂದ್ಯಗಳಲ್ಲಿ 22.50 ಸರಾಸರಿಯಲ್ಲಿ ಕೇವಲ 135 ರನ್ ಗಳಿಸಿದ್ದಾರೆ. ಕೇವಲ ಒಂದು ಅರ್ಧಶತಕ ಮತ್ತು 60 ರನ್‌ ಅವರ ಅತ್ಯಧಿಕ ಸ್ಕೋರ್ ಆಗಿದೆ.

ಈಮಧ್ಯೆ, ಶ್ರೇಯಸ್ ಅಯ್ಯರ್ ಎಂಟು ಪಂದ್ಯಗಳಲ್ಲಿ 43.83 ಸರಾಸರಿಯಲ್ಲಿ ಮೂರು ಅರ್ಧಶತಕಗಳನ್ನು ಒಳಗೊಂಡಂತೆ 263 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ