ಸಂಜು ಸ್ಯಾಮ್ಸನ್  
ಕ್ರಿಕೆಟ್

IPL 2025: ಚಿನ್ನಸ್ವಾಮಿಯಲ್ಲಿ 'ರಾಯಲ್ಸ್' ಕಾಳಗ; ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಅಲಭ್ಯ

ಸ್ಯಾಮ್ಸನ್ ಅನುಪಸ್ಥಿತಿಯಲ್ಲಿ, ತಂಡದಲ್ಲಿ ಅವಕಾಶ ಪಡೆದಿದ್ದ 14 ವರ್ಷದ ವೈಭವ್ ಸೂರ್ಯವಂಶಿ, ಬೆಂಗಳೂರಿನಲ್ಲಿ ಮತ್ತೊಮ್ಮೆ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಆರಂಭಿಕನಾಗಿ ಆಡುವ ಸಾಧ್ಯತೆಯಿದೆ.

ಗುರುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ನಾಯಕ ಸಂಜು ಸ್ಯಾಮ್ಸನ್ ಅಲಭ್ಯರಾಗಲಿದ್ದಾರೆ. ಗಾಯದಿಂದ ಬಳಲುತ್ತಿರುವ ಸಂಜು ಸ್ಯಾಮ್ಸನ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡು retiring hurt ಆಗಿದ್ದರು.

'ಸ್ಯಾಮ್ಸನ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಆಯ್ದ ಆರ್‌ಆರ್ ವೈದ್ಯಕೀಯ ಸಿಬ್ಬಂದಿಯೊಂದಿಗೆ ತಂಡದ ತವರಿನಲ್ಲಿ (ಜೈಪುರ) ಉಳಿಯುತ್ತಾರೆ. ಹೀಗಾಗಿ, ಅವರು ಆರ್‌ಸಿಬಿ ವಿರುದ್ಧದ ಮುಂಬರುವ ಪಂದ್ಯಕ್ಕಾಗಿ ಬೆಂಗಳೂರಿಗೆ ಪ್ರಯಾಣಿಸುವುದಿಲ್ಲ. ತಂಡದ ಆಡಳಿತವು ಅವರ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ತಂಡಕ್ಕೆ ಮರಳಲಿದ್ದಾರೆ' ಎಂದು ಫ್ರಾಂಚೈಸಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ಯಾಮ್ಸನ್ ಅನುಪಸ್ಥಿತಿಯಲ್ಲಿ, ರಿಯಾನ್ ಪರಾಗ್ ಆರ್‌ಆರ್‌ನ ನಾಯಕತ್ವವನ್ನು ಮುಂದುವರಿಸಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಯ ಸಮಯದಲ್ಲಿ ಸ್ಯಾಮ್ಸನ್ ಗಾಯಗೊಂಡಿದ್ದರು. ಸ್ಯಾಮ್ಸನ್ ಅಲಭ್ಯತೆಯ ವೇಳೆ ರಿಯಾನ್ ಪರಾಗ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ನಾಯಕನಾಗಿ, ಪರಾಗ್ ನಾಲ್ಕು ಪಂದ್ಯಗಳಲ್ಲಿ 147.88 ಸ್ಟ್ರೈಕ್ ರೇಟ್‌ನಲ್ಲಿ 105 ರನ್ ಗಳಿಸಿದ್ದಾರೆ.

ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 37 ಎಸೆತಗಳಲ್ಲಿ 66 ರನ್ ಗಳಿಸುವ ಮೂಲಕ ಸ್ಯಾಮ್ಸನ್ ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದಿದ್ದರು. ಆದರೆ, ಡಿಸಿ ವಿರುದ್ಧದ ತಮ್ಮ ಕೊನೆಯ ಪಂದ್ಯದಲ್ಲಿ, 19 ಎಸೆತಗಳಲ್ಲಿ 31 ರನ್ ಗಳಿಸಿ ಗಾಯಗೊಂಡು ರಿಟೈರ್ಡ್ ಹರ್ಟ್ ಆಗಿದ್ದರು. ಸೂಪರ್ ಓವರ್‌ನಲ್ಲಿ ಅವರು ಬ್ಯಾಟಿಂಗ್‌ಗೆ ಮರಳಿರಲಿಲ್ಲ.

ಸ್ಯಾಮ್ಸನ್ ಅನುಪಸ್ಥಿತಿಯಲ್ಲಿ, ತಂಡದಲ್ಲಿ ಅವಕಾಶ ಪಡೆದಿದ್ದ 14 ವರ್ಷದ ವೈಭವ್ ಸೂರ್ಯವಂಶಿ, ಬೆಂಗಳೂರಿನಲ್ಲಿ ಮತ್ತೊಮ್ಮೆ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಆರಂಭಿಕನಾಗಿ ಆಡುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT