ಕೆಎಲ್ ರಾಹುಲ್ 
ಕ್ರಿಕೆಟ್

IPL 2025: ಚಿನ್ನಸ್ವಾಮಿಯಲ್ಲಿ ಕಾಂತಾರ ಸ್ಟೈಲ್ ಸಂಭ್ರಮಾಚರಣೆ; ಏಕನಾದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡ ಕೆಎಲ್ ರಾಹುಲ್!

ಐಪಿಎಲ್ 2024ನೇ ಆವೃತ್ತಿಯ ಆರಂಭದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಲ್‌ಎಸ್‌ಜಿ ಪಂದ್ಯವೊಂದರಲ್ಲಿ ಹೀನಾಯ ಸೋಲು ಕಂಡ ನಂತರ ಫ್ರಾಂಚೈಸಿಯ ಮಾಲೀಕ ಸಂಜೀವ್ ಗೋಯೆಂಕಾ ಮೈದಾನದಲ್ಲಿಯೇ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಂಗಳವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಡಿಸಿ ತಂಡ ಎಂಟು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅಜೇಯ ಅರ್ಧಶತಕ ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್‌ ಗೆಲುವಿಗೆ ನೆರವಾದರು. ಈ ವೇಳೆ ಕೆಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಅತ್ಯಂತ ವೇಗವಾಗಿ 5,000 ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ರಾಹುಲ್ 130 ಇನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದರೆ, ಡೇವಿಡ್ ವಾರ್ನರ್ (135), ವಿರಾಟ್ ಕೊಹ್ಲಿ (157), ಎಬಿ ಡಿವಿಲಿಯರ್ಸ್ (161) ಮತ್ತು ಶಿಖರ್ ಧವನ್ (168) ಅವರಂತಹ ಆಟಗಾರರನ್ನು ಹಿಂದಿಕ್ಕಿದ್ದಾರೆ. ಐಪಿಎಲ್ 2024ನೇ ಆವೃತ್ತಿಯ ಆರಂಭದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಲ್‌ಎಸ್‌ಜಿ ಪಂದ್ಯವೊಂದರಲ್ಲಿ ಹೀನಾಯ ಸೋಲು ಕಂಡ ನಂತರ ಫ್ರಾಂಚೈಸಿಯ ಮಾಲೀಕ ಸಂಜೀವ್ ಗೋಯೆಂಕಾ ಮೈದಾನದಲ್ಲಿಯೇ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಬಳಿಕ ಎಲ್ಎಸ್‌ಜಿಯಿಂದ ಹೊರಬಂದಿದ್ದ ರಾಹುಲ್, IPL 2025ರ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಕರಿಯಾಗಿದ್ದರು. ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ಸಂಭ್ರಮಾಚರಣೆ ಪರೋಕ್ಷವಾಗಿ LSG ಮಾಲೀಕ ಸಂಜೀವ್ ಗೋಯೆಂಕಾ ಅವರಿಗೆ ನೀಡಿದ ಸಂದೇಶವಾಗಿತ್ತು ಎನ್ನಲಾಗಿದೆ. ಗೆಲುವಿನ ಸಂಭ್ರಮಾಚರಣೆ ಮಾಡಿದ್ದ ರಾಹುಲ್, ತಮ್ಮ ಬೆನ್ನಿನ ಹಿಂಭಾಗಕ್ಕೆ ಬ್ಯಾಟ್ ತಂದು, ತಮ್ಮ ಹೆಸರು ಮತ್ತು ಸಂಖ್ಯೆಯ ಕಡೆಗೆ ತೋರಿಸುತ್ತಿರುವುದು ಕಂಡುಬಂದಿತು.

ಈ ಆವೃತ್ತಿಯಲ್ಲಿ ರಾಹುಲ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಇತ್ತೀಚೆಗೆ ಅವರು ಐಪಿಎಲ್‌ನಲ್ಲಿ ಅತ್ಯಂತ ವೇಗವಾಗಿ 200 ಸಿಕ್ಸರ್‌ಗಳ ಮೈಲಿಗಲ್ಲು ತಲುಪಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಮತ್ತು ಆಂಡ್ರೆ ರಸೆಲ್ ಕ್ರಮವಾಗಿ 69 ಮತ್ತು 97 ಇನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ ನಂತರ ಮೂರನೇ ಅತ್ಯಂತ ವೇಗದ ಮೈಲಿಗಲ್ಲು ತಲುಪಿದ್ದಾರೆ.

ಈ ಆವೃತ್ತಿಯಲ್ಲಿ ಡೆಲ್ಲಿ ಪರ ರಾಹುಲ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. 155.67 ಸ್ಟ್ರೈಕ್ ರೇಟ್‌ನಲ್ಲಿ ಎಂಟು ಇನಿಂಗ್ಸ್‌ಗಳಲ್ಲಿ 359 ರನ್ ಗಳಿಸಿದ್ದಾರೆ ಮತ್ತು ತಂಡಕ್ಕೆ ಆಧಾರಸ್ತಂಭವಾಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅಜೇಯ 93 ರನ್‌ ಗಳಿಸಿದ್ದು, ತಂಡವು ಆರು ವಿಕೆಟ್‌ಗಳ ಜಯ ಸಾಧಿಸಲು ಕಾರಣವಾಯಿತು. ಈ ವೇಳೆ ಸಂಭ್ರಮಾಚರಣೆ ಮಾಡಿದ್ದ ರಾಹುಲ್, ನೆಲದಲ್ಲಿ ಬ್ಯಾಟ್‌ನಿಂದ ವೃತ್ತ ಬರೆದು ಮಧ್ಯೆ ಬ್ಯಾಟ್ ಗುದ್ದಿ ಈ ಗ್ರೌಂಡ್ ನಂದು ಎಂದಿದ್ದರು. ಕಾಂತಾರ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡಿದ್ದಾಗಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT