ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲಿರುವ ಎಂಐ ಮತ್ತು ಎಸ್ಆರ್‌ಎಚ್ ಆಟಗಾರರು 
ಕ್ರಿಕೆಟ್

IPL 2025: ಪಹಲ್ಗಾಮ್ ಉಗ್ರ ದಾಳಿ ಸಂತ್ರಸ್ತರಿಗೆ ಗೌರವ; SRH-MI ಆಟಗಾರರು, ಅಂಪೈರ್‌ಗಳು ಕಪ್ಪು ಪಟ್ಟಿ ಧರಿಸಿ ಕಣಕ್ಕೆ

ಬುಧವಾರ ಸಂಜೆ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಪ್ರಾರಂಭವಾಗುವ ಮೊದಲು ಕಪ್ಪು ಪಟ್ಟಿಗಳ ಜೊತೆಗೆ ಒಂದು ನಿಮಿಷ ಮೌನಾಚರಣೆ ಮಾಡಲಾಗುವುದು.

ನವದೆಹಲಿ: ಮಂಗಳವಾರ ಶ್ರೀನಗರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಗೌರವ ಸಲ್ಲಿಸುವ ಸಲುವಾಗಿ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಐಪಿಎಲ್ 2025ರ ಪಂದ್ಯದ ವೇಳೆ ಆಟಗಾರರು ಮತ್ತು ಅಂಪೈರ್‌ಗಳು ತೋಳಿಗೆ ಕಪ್ಪು ಪಟ್ಟಿಗಳನ್ನು ಧರಿಸಲಿದ್ದಾರೆ.

ಬುಧವಾರ ಸಂಜೆ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಪ್ರಾರಂಭವಾಗುವ ಮೊದಲು ಕಪ್ಪು ಪಟ್ಟಿಗಳ ಜೊತೆಗೆ ಒಂದು ನಿಮಿಷ ಮೌನಾಚರಣೆ ಮಾಡಲಾಗುವುದು ಎಂದು ಮೂಲಗಳು IANS ಗೆ ತಿಳಿಸಿವೆ.

ಅಲ್ಲದೆ, ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಚಿಯರ್‌ಲೀಡರ್‌ಗಳು ಇರುವುದಿಲ್ಲ ಮತ್ತು ಐಪಿಎಲ್ ಪಂದ್ಯ ಮುಗಿದ ನಂತರ ನಡೆಯುವ ಸಾಮಾನ್ಯ ಪಟಾಕಿ ಸಿಡಿಸುವಿಕೆ ಪ್ರದರ್ಶನವನ್ನು ಕೂಡ ಹೊರಗಿಡಲಾಗುತ್ತದೆ ಎಂದು ತಿಳಿದುಬಂದಿದೆ.

ಮಂಗಳವಾರ ಮಧ್ಯಾಹ್ನ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಸುಂದರವಾದ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ವಿದೇಶಿಗರು ಮತ್ತು ಇಬ್ಬರು ಸ್ಥಳೀಯರು ಸೇರಿದಂತೆ ಕನಿಷ್ಠ 26 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.

2019ರ ಪುಲ್ವಾಮಾ ದುರಂತದ ನಂತರದ ಅತ್ಯಂತ ಭೀಕರ ಹಿಂಸಾಚಾರದ ಕೃತ್ಯಕ್ಕೆ ಅಂತರರಾಷ್ಟ್ರೀಯ ನಾಯಕರು, ಕ್ರಿಕೆಟ್ ಜಗತ್ತಿನ ಗಣ್ಯ ವ್ಯಕ್ತಿಗಳು ಮತ್ತು ಇತರ ಕೈಗಾರಿಕೆಗಳ ಪ್ರಮುಖ ವ್ಯಕ್ತಿಗಳು ವ್ಯಾಪಕ ಖಂಡನೆ ಮತ್ತು ಸಂತಾಪ ಸೂಚಿಸಿದ್ದಾರೆ.

ಐಪಿಎಲ್ ಪಾಯಿಂಟ್ಸ್ ಟೇಬಲ್‌ನಲ್ಲಿ ಸದ್ಯ ಆರನೇ ಸ್ಥಾನದಲ್ಲಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡವು ಈ ಪಂದ್ಯವನ್ನು ಗೆದ್ದರೆ, ಹತ್ತು ಅಂಕಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ), ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಜೊತೆ ಸಮಬಲ ಸಾಧಿಸಲಿದೆ.

ಪ್ಯಾಟ್ ಕಮ್ಮಿನ್ಸ್ ನೇತೃತ್ವದ SRH ತಂಡವು ತವರಿನಲ್ಲಿ ಗೆದ್ದರೆ, ಅಂಕ ಪಟ್ಟಿಯಲ್ಲಿ ರಾಜಸ್ಥಾನ ರಾಯಲ್ಸ್ (RR) ಅನ್ನು ಹಿಂದಿಕ್ಕುವ ನಿರೀಕ್ಷೆಯಿದೆ. ಈ ಎರಡೂ ತಂಡಗಳು ಏಪ್ರಿಲ್ 17ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಕೊನೆಯ ಬಾರಿಗೆ ಮುಖಾಮುಖಿಯಾದಾಗ, MI ತಂಡವು SRH ಅನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತು.

RCB ಸಂತಾಪ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖಂಡನೆ ವ್ಯಕ್ತಪಡಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, 'ಆಘಾತ ಮತ್ತು ದುಃಖವಾಗಿದೆ! ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ ಮುಗ್ಧ ಜೀವಗಳಿಗೆ ನಾವು ನಮ್ಮ ಸಂತಾಪ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸುತ್ತೇವೆ' ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT