ಸೂರ್ಯ ಕುಮಾರ್ ಯಾದವ್ 
ಕ್ರಿಕೆಟ್

IPL 2025: ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಸೂರ್ಯ ಕುಮಾರ್! ಕೊಹ್ಲಿ ಹಿಂದಿಕ್ಕಿದ ರಾಹುಲ್!

ನಿಕೋಲಸ್ ಪೋರನ್ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಸಾಯಿ ಸುದರ್ಶನ್ ಮೊದಲ ಸ್ಥಾನಕ್ಕೇರಿದ್ದಾರೆ. ಈಗಿನ ಪಟ್ಟಿಯಂತೆ ಗುಜರಾತ್ ಟೈಟನ್ಸ್ ತಂಡದ ಸಾಯಿ ಸುದರ್ಶನ್ 417 ರನ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಮುಂಬೈ: ಬುಧವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದ ನಂತರ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದು, ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಸೂರ್ಯ ಕುಮಾರ್ ಯಾದವ್ ಮೂರನೇ ಸ್ಥಾನಕ್ಕೇರಿದ್ದಾರೆ.

ನಿಕೋಲಸ್ ಪೋರನ್ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಸಾಯಿ ಸುದರ್ಶನ್ ಮೊದಲ ಸ್ಥಾನಕ್ಕೇರಿದ್ದಾರೆ. ಈಗಿನ ಪಟ್ಟಿಯಂತೆ ಗುಜರಾತ್ ಟೈಟನ್ಸ್ ತಂಡದ ಸಾಯಿ ಸುದರ್ಶನ್ 417 ರನ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಲಖನೌ ತಂಡದ ನಿಕೋಲಸ್ ಪೋರನ್ 377 ರನ್ ಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಮುಂಬೈ ಇಂಡಿಯನ್ಸ್ ನ ಸೂರ್ಯ ಕುಮಾರ್ ಯಾದವ್ 373 ರನ್ ಗಳೊಂದಿಗೆ ಮೂರನೇ ಸ್ಥಾನಕ್ಕೇರಿದ್ದಾರೆ.

ಇನ್ನು ಗುಜರಾತ್ ಟೈಟನ್ಸ್ ತಂಡದ ಜೋಸ್ ಬಟ್ಲರ್ 356 ರನ್ ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು, ಲಖನೌ ತಂಡದ ಮಾರ್ಷ್ 344 ರನ್ ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಲಖನೌ ತಂಡದ ಮತ್ತೋರ್ವ ಆಟಗಾರ ಎ. ಮಾರ್ಕ್ರಾಮ್ 326 ರನ್ ಗಳೊಂದಿಗೆ ಆರನೇ ಸ್ಥಾನದಲ್ಲಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ ನ ಕೆಎಲ್ ರಾಹುಲ್ 323 ರನ್ ಗಳೊಂದಿಗೆ 7ನೇ ಸ್ಥಾನದಲ್ಲಿದ್ದಾರೆ.

ಆರೆಂಜ್ ಕ್ಯಾಪ್ ಪಟ್ಟಿ

ಇನ್ನೂ ಆರ್ ಬಿಸಿಯ ವಿರಾಟ್ ಕೊಹ್ಲಿ 322 ರನ್ ಗಳೊಂದಿಗೆ 8 ನೇ ಸ್ಥಾನದಲ್ಲಿದ್ದು, ರಾಜಸ್ಥಾನ ರಾಯಲ್ಸ್ ತಂಡದ ಯಶಸ್ವಿ ಜೈಸ್ವಾಲ್ 307 ರನ್ ಗಳೊಂದಿಗೆ 9ನೇ ಸ್ಥಾನದಲ್ಲಿದ್ದು, ಗುಜರಾತ್ ಟೈಟನ್ ತಂಡದ ನಾಯಕ ಶುಭ್ ಮನ್ ಗಿಲ್ 305 ರನ್ ಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT