ನಿದಾ ದಾರ್ 
ಕ್ರಿಕೆಟ್

''ಏನೇನೋ ಆಗ್ತಿದೆ.. ನನಗೆ ಬ್ರೇಕ್ ಬೇಕು..''; ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಸರಿದ ಸ್ಟಾರ್ ಆಟಗಾರ್ತಿ!

ಪಾಕಿಸ್ತಾನ ಮಹಿಳಾ ಕ್ರಿಕೆಟ್‌ ಸ್ಟಾರ್ ಆಟಗಾರ್ತಿ ನಿದಾ ದಾರ್ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಸರಿಯುತ್ತಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ಮಾಹಿತಿ ನೀಡಿರುವುದಾಗಿ ಹೇಳಿದ್ದಾರೆ.

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರ ದಾಳಿಯಿಂದಾಗಿ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಉದ್ವಿಗ್ನತೆ ಭುಗಿಲೆದ್ದ ಬೆನ್ನಲ್ಲೇ ಅತ್ತ ಪಾಕಿಸ್ತಾನ ಕ್ರಿಕೆಟ್ ನಲ್ಲೂ ಕೆಲ ಅಚ್ಚರಿ ಬೆಳವಣಿಗೆಗಳು ನಡೆಯುತ್ತಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಪಾಕಿಸ್ತಾನದ ಸ್ಟಾರ್ ಆಟಗಾರ್ತಿ ದೂರ ಸರಿದಿದ್ದಾರೆ.

ಹೌದು.. ಪಾಕಿಸ್ತಾನ ಮಹಿಳಾ ಕ್ರಿಕೆಟ್‌ನಲ್ಲಿ ಅತ್ಯಂತ ಗುರುತಿಸಬಹುದಾದ ಮುಖಗಳಲ್ಲಿ ಒಬ್ಬರಾಗಿರುವ ಆಲ್‌ರೌಂಡರ್, ಹಾಗೂ ಸ್ಟಾರ್ ಆಟಗಾರ್ತಿ ನಿದಾ ದಾರ್ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಸರಿಯುತ್ತಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ಮಾಹಿತಿ ನೀಡಿರುವುದಾಗಿ ಹೇಳಿದ್ದಾರೆ.

ಪಾಕಿಸ್ತಾನ ಮಹಿಳಾ ತಂಡದ ಅನುಭವಿ ಆಟಗಾರ್ತಿ ನಿದಾ ದಾರ್ ಮಾನಸಿಕ ಆರೋಗ್ಯ ಸಮಸ್ಯೆಗಳಿಂದಾಗಿ ರಾಷ್ಟ್ರೀಯ ಆಯ್ಕೆಯಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ಆಟಗಾರರೊಬ್ಬರು ಹೀಗೆ ತಂಡದಿಂದ ಹಿಂದೆ ಸರಿಯುತ್ತಿರುವುದು ಇದೇ ಮೊದಲು.

ರಾಷ್ಟ್ರೀಯ ಮಹಿಳಾ ತಂಡದ ಮಾಜಿ ನಾಯಕಿ ನಿದಾ ದಾರ್ (39) ಶುಕ್ರವಾರ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದು, ತಾವು ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ.

"ಕಳೆದ ಕೆಲವು ತಿಂಗಳುಗಳಿಂದ ನನ್ನ ಜೀವನದಲ್ಲೇ ಏನೇನೋ ಆಗುತ್ತಿದೆ. ನನ್ನ ಸುತ್ತಲೂ ವೈಯಕ್ತಿಕವಾಗಿ ಮತ್ತು ವೃತ್ತಿಪರವಾಗಿ ಬಹಳಷ್ಟು ಘಟನೆಗಳು ನಡೆದಿವೆ. ಇದು ನನ್ನ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಆದ್ದರಿಂದ, ನಾನು ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದೇನೆ. ಈ ಸಮಯದಲ್ಲಿ ನನ್ನ ಗೌಪ್ಯತೆಯನ್ನು ಗೌರವಿಸುವಂತೆ ನಾನು ಎಲ್ಲರಿಗೂ ವಿನಂತಿಸುತ್ತೇನೆ" ಎಂದು ನಿದಾ ದಾರ್ ಮನವಿ ಮಾಡಿದ್ದಾರೆ.

ಅಂದಹಾಗೆ ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಮಾದರಿಗಳಲ್ಲಿ 270 ಪಂದ್ಯಗಳನ್ನು ಆಡಿರುವ ನಿದಾ, ಇತ್ತೀಚೆಗೆ ಲಾಹೋರ್‌ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ತಂಡದ ಆಯ್ಕೆಗೆ ತಮ್ಮನ್ನು ತಾವು ಲಭ್ಯವಾಗುವಂತೆ ಕೇಳಿಕೊಂಡಿದ್ದರು. ಆದರೆ ನಿದಾ ಫಿಟ್ನೆಸ್ ಪರೀಕ್ಷೆಗೆ ಹಾಜರಾದಾಗ ನಂತರ ತರಬೇತಿ ಶಿಬಿರಕ್ಕೆ ವರದಿ ಮಾಡಲು ಕೇಳಿದಾಗ ಅವರು ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿನ ಇತ್ತೀಚಿನ ಘಟನೆಗಳು ಅವರ ಮಾನಸಿಕ ಆರೋಗ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿವೆ ಎಂದು ಆವರ ಆಪ್ತವಲಯಗಳಿಂದ ಮಾಹಿತಿ ಇದೆ ಎಂದು ವರದಿ ತಿಳಿಸಿದೆ. ಇತ್ತೀಚೆಗೆ ಮಹಿಳಾ ರಾಷ್ಟ್ರೀಯ ಟಿ 20 ಕಪ್‌ನಲ್ಲಿಯೂ ಆಡಿರಲಿಲ್ಲ. ಕಳೆದ ಅಕ್ಟೋಬರ್‌ನಲ್ಲಿ ದುಬೈನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ನಿದಾ ದಾರ್ ಕೊನೆಯ ಬಾರಿಗೆ ಪಾಕಿಸ್ತಾನವನ್ನು ಪ್ರತಿನಿಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT