ವಿರಾಟ್ ಕೊಹ್ಲಿ-ಕೆಎಲ್ ರಾಹುಲ್ ವಾಗ್ವಾದ 
ಕ್ರಿಕೆಟ್

IPL 2025: ಪಂದ್ಯದ ನಡುವೆಯೇ Virat Kohli, KL Rahul ವಾಗ್ವಾದ; ಆಗಿದ್ದೇನು? Video

ಆರ್ ಸಿಬಿ ಇನ್ನಿಂಗ್ಸ್ ವೇಳೆ ಕುಲದೀಪ್ ಯಾದವ್ ಎಸೆದ 8ನೇ ಓವರ್ ವೇಳೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಪರಸ್ಪರ ವಾಗ್ವಾದ ನಡೆಸಿದ್ದಾರೆ.

ನವದೆಹಲಿ: ಇಂದಿನ ಐಪಿಎಲ್ ಟೂರ್ನಿಯ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ದಾಖಲಿಸಿದ್ದು, ಪಂದ್ಯದ ನಡುವೆಯೇ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಪರಸ್ಪರ ವಾಕ್ಸಮರ ನಡೆಸಿದ ಘಟನೆ ಕೂಡ ನಡೆದಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.

ಈ ಪಂದ್ಯದಲ್ಲಿ ಆರ್ ಸಿಬಿ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಮಹತ್ತರ ಪಾತ್ರವಹಿಸಿದರು. ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ ಸಹಿತ 51 ರನ್ ಗಳಿಸಿದರು. ಆದರೆ ಗೆಲುವಿನ ಅಂತಿಮ ಹಂತದಲ್ಲಿ ಎಡವಿದ ಕೊಹ್ಲಿ ಚಮೀರಾ ಬೌಲಿಂಗ್ ನಲ್ಲಿ ಭರ್ಜರಿ ಹೊಡೆತಕ್ಕೆ ಕೈಹಾಕಿ ಸ್ಚಾರ್ಕ್ ಗೆ ಕ್ಯಾಚ್ ನೀಡಿ ಹೊರನಡೆದರು. ಕೃನಾಲ್ ಪಾಂಡ್ಯಾ ಮತ್ತು ಟಿಮ್ ಡೇವಿಡ್ ಇನ್ನೂ 9 ಎಸೆತ ಬಾಕಿ ಇರುವಂತೆಯೇ ಗೆಲುವಿನ ಔಪಚಾರಿಕತೆ ಪೂರ್ಣಗೊಳಿಸಿದರು.

ಆರ್ ಸಿಬಿ ಬ್ಯಾಟಿಂಗ್ ವೇಳೆ ವಾಕ್ಸಮರ

ಇನ್ನು ಆರ್ ಸಿಬಿ ಇನ್ನಿಂಗ್ಸ್ ವೇಳೆ ಕುಲದೀಪ್ ಯಾದವ್ ಎಸೆದ 8ನೇ ಓವರ್ ವೇಳೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಪರಸ್ಪರ ವಾಗ್ವಾದ ನಡೆಸಿದ್ದಾರೆ. ಕೆಎಲ್ ರಾಹುಲ್ ವಿರಾಟ್ ಕೊಹ್ಲಿಗಾಗಿ ಫೀಲ್ಡಿಂಗ್ ಸೆಟ್ ಮಾಡುತ್ತಿದ್ದ ವೇಳೆ ಅದೇಕೋ ಗರಂ ಆದ ಕೊಹ್ಲಿ ವಿಕೆಟ್ ಹಿಂದೆ ಇದ್ದ ಕೆಎಲ್ ರಾಹುಲ್ ಬಳಿ ನೇರವಾಗಿ ಏನೋ ಕೇಳಿದ್ದಾರೆ. ಇದಕ್ಕೆ ಕೆಎಲ್ ರಾಹುಲ್ ಕೂಡ ಕೊಂಚ ಕೋಪದಿಂದಲೇ ಉತ್ತರ ನೀಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಪಂದ್ಯ ಮುಕ್ತಾಯದ ಬಳಿಕ ಅಪ್ಪಿಕೊಂಡ ಗೆಳೆಯರು

ಇನ್ನು ಈ ಪಂದ್ಯ ಮುಕ್ತಾಯವಾಗುತ್ತಲೇ ಕೊಹ್ಲಿ ಮತ್ತು ಕೆಎಲ್ ರಾಹುಲ್ ಏನೂ ಆಗಿಯೇ ಇಲ್ಲವೇನೋ ಎಂಬಂತೆ ಮೈದಾನದಲ್ಲಿ ಪರಸ್ಪರ ಅಪ್ಪಿಕೊಂಡಿದ್ದಾರೆ. ಮಾತ್ರವಲ್ಲದೇ ಕೊಹ್ಲಿ ಇದೇ ಕೆಎಲ್ ರಾಹುಲ್ ಈ ಹಿಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಡಿದ್ದ ನನ್ನ ಗ್ರೌಂಡ್ ಸೆಲೆಬ್ರೇಷನ್ ಅನ್ನೂ ಕೂಡ ಮಿಮಿಕ್ರಿ ಮಾಡಿ ನಕ್ಕಿದ್ದು, ಈ ವೇಳೆ ಅಕ್ಕಪಕ್ಕದಲ್ಲಿದ್ದ ಇತರೆ ಆಟಗಾರರೂ ಕೂಡ ಬಿದ್ದು ಬಿದ್ದು ನಕ್ಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT