ರಿಕಿ ಪಾಂಟಿಂಗ್ 
ಕ್ರಿಕೆಟ್

IPL 2025: 'ಅರ್ಹತೆ ಇದ್ರೂ ಪಂಜಾಬ್ ಕಿಂಗ್ಸ್ ಐಪಿಎಲ್ 2025 ಗೆಲ್ಲಲ್ಲ'; ಕೋಚ್ ರಿಕಿ ಪಾಂಟಿಂಗ್ ವಿರುದ್ಧ ಮನೋಜ್ ತಿವಾರಿ ಕಿಡಿ

ಕೋಲ್ಕತ್ತಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡರು.

ಐಪಿಎಲ್ 2025ನೇ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ ಅವರು ಭಾರತೀಯರಿಗಿಂತ ವಿದೇಶಿ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎಂದು ಭಾರತೀಯ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಆರೋಪಿಸಿದ್ದಾರೆ. ಕೋಲ್ಕತ್ತಾದಲ್ಲಿ ಮಳೆಯಿಂದ ರದ್ದಾದ ಕೆಕೆಆರ್ ಮತ್ತು ಪಿಬಿಕೆಎಸ್ ನಡುವಿನ ಪಂದ್ಯದ ನಂತರ ಅವರ ಹೇಳಿಕೆಗಳು ಬಂದಿವೆ. ಪಂಜಾಬ್ ನೀಡಿದ್ದ ಗುರಿಯನ್ನು ಕೆಕೆಆರ್ ಬೆನ್ನತ್ತಿದ ವೇಳೆ ಒಂದು ಓವರ್ ನಂತರ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡು ಎರಡೂ ತಂಡಗಳು ತಲಾ ಒಂದು ಪಾಯಿಂಟ್ ಹಂಚಿಕೊಂಡಿವೆ.

ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ತಿವಾರಿ, ರಿಕಿ ಪಾಂಟಿಂಗ್ ಅವರು ಭಾರತೀಯ ಬ್ಯಾಟ್ಸ್‌ಮನ್‌ಗಳಾದ ನೆಹಾಲ್ ವಧೇರಾ ಮತ್ತು ಶಶಾಂಕ್ ಸಿಂಗ್‌ ಅವರಂತಹ ಆಟಗಾರರನ್ನು ಬದಿಗೆ ತಳ್ಳಿ ಜೋಶ್ ಇಂಗ್ಲಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್‌ ಅವರನ್ನು ಮೊದಲಿಗೆ ಕಳುಹಿಸಿದರು. ಈ ರೀತಿಯ ವರ್ತನೆ ಮುಂದುವರಿದರೆ, ಪಿಬಿಕೆಎಸ್ ಐಪಿಎಲ್ 2025 ಟ್ರೋಫಿಯನ್ನು ಎತ್ತಿ ಹಿಡಿಯುವುದು ಸಾಧ್ಯವಿಲ್ಲ' ಎಂದು ಅವರು ಹೇಳಿದ್ದಾರೆ.

'ಈ ಆವೃತ್ತಿಯಲ್ಲಿ ಪಂಜಾಬ್ ತಂಡ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ನನ್ನ ಒಳ ಮನಸ್ಸು ಹೇಳುತ್ತಿದೆ. ಏಕೆಂದರೆ, ಇಂದು ಅವರು ಬ್ಯಾಟಿಂಗ್ ಮಾಡುವಾಗ ನಾನು ನೋಡಿದ್ದು ಏನೆಂದರೆ, ಕೋಚ್ ರಿಕಿ ಪಾಂಟಿಂಗ್ ಅವರು ಭಾರತೀಯ ಬ್ಯಾಟ್ಸ್‌ಮನ್‌ಗಳಾದ ನೆಹಾಲ್ ವಧೇರಾ ಮತ್ತು ಶಶಾಂಕ್ ಸಿಂಗ್ ಅವರನ್ನು ಕಳುಹಿಸಲಿಲ್ಲ. ಬದಲಿಗೆ ಅವರು ವಿದೇಶಿ ಆಟಗಾರರನ್ನು ನಂಬಿದ್ದರು. ಈ ಮೂಲಕ ಭಾರತೀಯ ಆಟಗಾರರ ಮೇಲೆ ವಿಶ್ವಾಸದ ಕೊರತೆಯನ್ನು ಸ್ಪಷ್ಟವಾಗಿ ತೋರಿಸಿದರು. ಅವರು ಈ ರೀತಿ ಮುಂದುವರಿದರೆ, ಟಾಪ್ 2ನಲ್ಲಿ ಸ್ಥಾನ ಪಡೆಯುವ ಅರ್ಹತೆ ಇದ್ದರೂ, ಪ್ರಶಸ್ತಿ ಪಡೆಯುವಲ್ಲಿ ದೂರ ಉಳಿಯಲಿದೆ' ಎಂದು ತಿವಾರಿ ಬರೆದಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡರು. ಈ ಆವೃತ್ತಿಯಲ್ಲಿ ಕಳಪೆ ಫಾರ್ಮ್ ಹೊಂದಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಅವರಿಗೆ ಮತ್ತೆ ಅವಕಾಶ ನೀಡಿದರು. ತಂಡವು ನಿಗದಿತ 20 ಓವರ್‌ಗಳಲ್ಲಿ 201 ರನ್ ಗಳಿಸಿತು. ಚೇಸಿಂಗ್‌ನ ಮೊದಲ ಓವರ್‌ನ ನಂತರ, ಮಳೆ ಆಟಕ್ಕೆ ಅಡ್ಡಿಯಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT