ಕ್ರಿಕೆಟ್

'ಕೊನೆಯ ಬಾರಿ ಚೆನ್ನಾಗಿ ಆಡಿದ್ದೇ ನೆನಪಿಲ್ಲ': KKR ವಿರುದ್ಧದ ಪಂದ್ಯದಲ್ಲಿ ಮತ್ತೆ ಫ್ಲಾಪ್; ಪಂಜಾಬ್ ಆಲ್‌ರೌಂಡರ್ ವಿರುದ್ಧ ಕಿಡಿ

ಕೆಕೆಆರ್ ಇನಿಂಗ್ಸ್‌ನಲ್ಲಿ ಮೊದಲ ಓವರ್ ನಂತರ ಮಳೆಯಿಂದಾಗಿ ಪಂದ್ಯ ರದ್ದಾಯಿತು. ಎರಡೂ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡವು.

ಐಪಿಎಲ್ 2025 ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಕಳಪೆ ಫಾರ್ಮ್ ಮುಂದುವರಿದಿದೆ. ಶನಿವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 7 ರನ್‌ಗಳಿಗೆ ಔಟಾಗಿದ್ದಾರೆ. ಮೆಗಾ ಹರಾಜಿನಲ್ಲಿ 4.2 ಕೋಟಿ ರೂ.ಗೆ ಖರೀದಿಸಲ್ಪಟ್ಟ ಮ್ಯಾಕ್ಸ್‌ವೆಲ್, ಎರಡು ಪಂದ್ಯಗಳ ನಂತರ ಪ್ಲೇಯಿಂಗ್ ಇಲೆವೆನ್ ಭಾಗವಾಗಿದ್ದರು. ಆದರೆ, ಕೆಕೆಆರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರ ಎಸೆತದಲ್ಲಿ ಔಟ್ ಆಗಿದ್ದಾರೆ. ಈ ಪಂದ್ಯಕ್ಕೂ ಮೊದಲು, ಮ್ಯಾಕ್ಸ್‌ವೆಲ್ ಈ ಆವೃತ್ತಿಯಲ್ಲಿ ಕೇವಲ 41 ರನ್‌ಗಳನ್ನು ಗಳಿಸಿದ್ದು, ಇದು ಅಭಿಮಾನಿಗಳು ಮತ್ತು ತಜ್ಞರಿಂದ ಸಾಕಷ್ಟು ಟೀಕೆಗೆ ಕಾರಣವಾಯಿತು.

ಶನಿವಾರ, ಮ್ಯಾಕ್ಸ್‌ವೆಲ್ ಬೌಂಡರಿ ಬಾರಿಸುವ ಮೂಲಕ ಉತ್ತಮವಾಗಿ ತಮ್ಮ ಇನಿಂಗ್ಸ್ ಆರಂಭಿಸಿದರೂ, ಅದರ ಮುಂದಿನ ಎಸೆತದಲ್ಲೇ ಆಸ್ಟ್ರೇಲಿಯಾದ ಅಂತರರಾಷ್ಟ್ರೀಯ ಆಟಗಾರ ಕ್ಲೀನ್‌ಬೌಲ್ಡ್ ಆದರು. ಮ್ಯಾಕ್ಸ್‌ವೆಲ್ ಅವರ ಕಳಪೆ ಫಾರ್ಮ್ ಬಗ್ಗೆ ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ಸುರೇಶ್ ರೈನಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಗ್ಲೆನ್ ಮ್ಯಾಕ್ಸ್‌ವೆಲ್ ತಂಡಕ್ಕಾಗಿ ಕೊನೆಯ ಬಾರಿಗೆ ರನ್ ಗಳಿಸಿದ್ದು ನನಗೆ ನೆನಪಿಲ್ಲ, ಅವರಿಗೆ ಹಲವಾರು ಅವಕಾಶಗಳು ಸಿಕ್ಕಿವೆ' ಎಂದಿದ್ದಾರೆ.

ಶನಿವಾರ ಕೋಲ್ಕತ್ತಾದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 4 ವಿಕೆಟ್‌ಗೆ 201 ರನ್ ಗಳಿಸಿತು. ಪ್ರಿಯಾಂಶ್ ಆರ್ಯ ಮತ್ತು ಪ್ರಭ್‌ಸಿಮ್ರನ್ ಸಿಂಗ್ ಅರ್ಧಶತಕಗಳನ್ನು ಬಾರಿಸಿ 120 ರನ್‌ಗಳ ಆರಂಭಿಕ ಜೊತೆಯಾಟವಾಡಿದರು. ಕೆಕೆಆರ್ ಇನಿಂಗ್ಸ್‌ನಲ್ಲಿ ಮೊದಲ ಓವರ್ ನಂತರ ಮಳೆಯಿಂದಾಗಿ ಪಂದ್ಯ ರದ್ದಾಯಿತು. ಎರಡೂ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡವು.

ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಿಬಿಕೆಎಸ್, ಈ ಆವೃತ್ತಿಯಲ್ಲಿ ಆರಂಭಿಕರಾಗಿ ಬಂದು ನಾಲ್ಕನೇ ಜಂಟಿ ವೇಗದ ಐಪಿಎಲ್ ಶತಕ ಬಾರಿಸಿದ್ದ ಪ್ರಿಯಾಂಶ್ 35 ಎಸೆತಗಳಲ್ಲಿ 69 ರನ್ ಗಳಿಸಿದರೆ, ಪ್ರಭ್ಸಿಮ್ರಾನ್ 49 ಎಸೆತಗಳಲ್ಲಿ 83 ರನ್ ಗಳಿಸಿ ಕೆಕೆಆರ್ ಬೌಲರ್‌ಗಳು 12 ನೇ ಓವರ್ ವರೆಗೆ ಯಾವುದೇ ಪ್ರಯೋಜನವಾಗಲಿಲ್ಲ.

ಕೆಕೆಆರ್ ಪರ ವೈಭವ್ ಅರೋರಾ (2/34), ವರುಣ್ ಚಕ್ರವರ್ತಿ (1/39) ಮತ್ತು ಆಂಡ್ರೆ ರಸೆಲ್ (1/27) ವಿಕೆಟ್ ಪಡೆದರು.

ಇದಕ್ಕೂ ಮೊದಲು, ಪಿಬಿಕೆಎಸ್ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿತ್ತು. ಮಾರ್ಕಸ್ ಸ್ಟೊಯಿನಿಸ್ ಮತ್ತು ಕ್ಸೇವಿಯರ್ ಬಾರ್ಟ್ಲೆಟ್ ಬದಲಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಅಜ್ಮತುಲ್ಲಾ ಒಮರ್‌ಜೈ ಅವರನ್ನು ಸೇರಿಸಿಕೊಂಡಿತು.

ಕೆಕೆಆರ್ ತಂಡದಲ್ಲಿ ಎರಡು ಬದಲಾವಣೆ ತರಲಾಗಿದ್ದು, ಮೊಯಿನ್ ಅಲಿ ಮತ್ತು ರಮಣದೀಪ್ ಸಿಂಗ್ ಬದಲಿಗೆ ರೋವ್ಮನ್ ಪೊವೆಲ್ ಮತ್ತು ಚೇತನ್ ಸಕಾರಿಯಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT