ಭಾರತಕ್ಕೆ ಜಯ 
ಕ್ರಿಕೆಟ್

Tri-Nation Series: ಶ್ರೀಲಂಕಾ ವಿರುದ್ಧ ಭಾರತ ಮಹಿಳಾ ತಂಡಕ್ಕೆ ಭರ್ಜರಿ ಜಯ, ಸರಣಿ ಶುಭಾರಂಭ

ಮಳೆಯಿಂದಾಗಿ ತಲಾ 39 ಓವರ್ ಗಳಿಗೇ ಸೀಮಿತವಾಗಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ವನಿತೆಯರ ತಂಡ 147 ರನ್ ಗಳಿಗೆ ಆಲೌಟ್ ಆಯಿತು.

ಕೊಲಂಬೋ: ಶ್ರೀಲಂಕಾದಲ್ಲಿ ನಡೆಯುತ್ತಿರುವ ಮಹಿಳೆಯರ ತ್ರಿಕೋನ ಏಕದಿನ ಸರಣಿಯಲ್ಲಿ ಭಾರತ ತಂಡ ಶುಭಾರಂಭ ಮಾಡಿದ್ದು ಶ್ರೀಲಂಕಾ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಶ್ರೀಲಂಕಾ ರಾಜಧಾನಿ ಕೊಲಂಬೋದಾ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ನೀಡಿದ್ದ 148ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತ ಕೇವಲ 29.4 ಓವರ್ ನಲ್ಲೇ ಕೇವಲ 1 ವಿಕೆಟ್ ಕಳೆದುಕೊಂಡು 149 ರನ್ ಗಳಿಸಿ ಜಯಭೇರಿ ಭಾರಿಸಿತು.

ಮಳೆಯಿಂದಾಗಿ ತಲಾ 39 ಓವರ್ ಗಳಿಗೇ ಸೀಮಿತವಾಗಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ವನಿತೆಯರ ತಂಡ 147 ರನ್ ಗಳಿಗೆ ಆಲೌಟ್ ಆಯಿತು. ಶ್ರೀಲಂಕಾ ಪರ ಹಸಿನಿ ಪೆರೇರಾ ಅತ್ಯಧಿಕ 30 ರನ್ ಬಾರಿಸಿದರೆ, ಕವಿಶಾ ದಿಲ್ಹಾರಿ 25 ರನ್ ಹಾಗೂ ವಿಕೆಟ್ ಕೀಪರ್ ಅನುಷ್ಕಾ ಸಂಜೀವಿನಿ 22 ರನ್​ಗಳ ಕಾಣಿಕೆ ನೀಡಿದರು.

ಇನ್ನು ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ಸ್ನೇಹ ರಾಣಾ ಅತ್ಯಧಿಕ 3 ವಿಕೆಟ್ ಪಡೆದರೆ, ನಲ್ಲಪುರರೆಡ್ಡಿ ಚರಣಿ ಹಾಗೂ ದೀಪ್ತಿ ಶರ್ಮಾ ತಲಾ 2 ವಿಕೆಟ್ ಪಡೆದರು. ಅರುಂಧತಿ ರೆಡ್ಡಿ ಕೂಡ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತ ಭರ್ಜರಿ ಬ್ಯಾಟಿಂಗ್

ಇನ್ನು ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ ಕೇವಲ 1 ವಿಕೆಟ್ ಕಳೆದುಕೊಂಡು 29.4 ಓವರ್​ಗಳಲ್ಲಿ ಗೆಲುವಿನ ನಗೆಬೀರಿತು. ಆರಂಭಿಕ ಆಟಗಾರ್ತಿಯರಾದ ಪ್ರತೀಕಾ ರಾವಲ್ ಹಾಗೂ ಸ್ಮೃತಿ ಮಂಧಾನ ಮೊದಲ ವಿಕೆಟ್​ಗೆ 54 ರನ್​​ಗಳ ಜೊತೆಯಾಟ ನೀಡಿದರು. ಈ ವೇಳೆ ಉಪನಾಯಕಿ ಮಂಧಾನ 46 ಎಸೆತಗಳಲ್ಲಿ 6 ಬೌಂಡರಿ ಸಹಿತ 43 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಜೊತೆಯಾದ ಪ್ರತೀಕಾ ಹಾಗೂ ಹರ್ಲೀನ್ ಡಿಯೋಲ್ ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಭಾರತದ ಪರ ಅರ್ಧಶತಕ ಸಿಡಿಸಿ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಪ್ರತೀಕ ರಾವಲ್ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವೀಕರಿಸಿದರು.

ಅಂದಹಾಗೆ ಈ ತ್ರಿಕೋನ ಏಕದಿನ ಸರಣಿಯಲ್ಲಿ ಭಾರತ ಮತ್ತು ಶ್ರೀಲಂಕಾ ಅಲ್ಲದೇ ದಕ್ಷಿಣ ಆಫ್ರಿಕಾ ತಂಡ ಕೂಡ ಸೇರಿದೆ. ಏಪ್ರಿಲ್ 27 ಅಂದರೆ ಇಂದಿನಿಂದ ಪ್ರಾರಂಭವಾಗಿರುವ ಈ ತ್ರಿಕೋನ ಸರಣಿ 15 ದಿನಗಳ ಕಾಲ ನಡೆಯಲಿದ್ದು, ಒಟ್ಟು 7 ಪಂದ್ಯಗಳು ನಡೆಯಲಿವೆ. ಇಂದಿನ ಪಂದ್ಯ ಗೆದ್ದಿರುವ ಭಾರತ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 29 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT