ವೈಭವ್ ಸೂರ್ಯವಂಶಿ-ರಾಹುಲ್ ದ್ರಾವಿಡ್ 
ಕ್ರಿಕೆಟ್

IPL 2025: ಶತಕ ಸಿಡಿಸಿ ಗುರುವಿಗೆ Vaibhav Suryavanshi ಸೆಲ್ಯೂಟ್; ಮುರಿದ ಕಾಲೂ ಲೆಕ್ಕಿಸದೇ ಎದ್ದು ನಿಂತು ಚಪ್ಪಾಳೆ ತಟ್ಟಿದ Rahul Dravid

ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

ಜೈಪುರ: ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಗುಜರಾತ್ ಟೈಟನ್ಸ್ ಮತ್ತು ರಾಜಸ್ತಾನ ರಾಯಲ್ಸ್ ನಡುವಿನ ಪಂದ್ಯ ಭಾವುಕ ಕ್ಷಣಕ್ಕೆ ವೇದಿಕೆಯಾಯಿತ್ತು.

ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

ರಾಜಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಗುಜರಾತ್ ವಿರುದ್ಧದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ಜೈಸ್ವಾಲ್ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 70 ರನ್ ಸಿಡಿಸಿದರು.

ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ ಬರೊಬ್ಬರಿ 11 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 101 ರನ್ ಗಳಿಸಿದರು.

ಶತಕ ಸಿಡಿಸುತ್ತಲೇ ಗುರುವಿಗೆ ಸೆಲ್ಯೂಟ್ ಮಾಡಿದ ವೈಭವ್ ಸೂರ್ಯವಂಶಿ

ಇನ್ನು ಈ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲೇ ದಾಖಲೆಯ ಶತಕ ಸಿಡಿಸಿದರು.

ಸಿಕ್ಸರ್ ಮೂಲಕ ಶತಕ ಸಿಡಿಸಿದ ವೈಭವ್ ರಾಜಸ್ತಾನ ಡಗೌಟ್ ನತ್ತ ತಿರುಗಿ ತನ್ನ ಗುರು ಹಾಗೂ ತಂಡದ ಕೋಚ್ ರಾಹುಲ್ ದ್ವಾವಿಡ್ (Rahul Dravid)ಗೆ ಬ್ಯಾಟ್ ಮೂಲಕ ಸೆಲ್ಯೂಟ್ ಮಾಡಿದರು.

ಈ ವೇಳೆ ಇಡೀ ಕ್ರೀಡಾಂಗಣ ಹರ್ಷೋದ್ಗಾರದಲ್ಲಿ ಮುಳುಗಿತ್ತು. ಕೇವಲ ರಾಜಸ್ತಾನ ಅಭಿಮಾನಿಗಳು ಅಷ್ಟೇ ಅಲ್ಲ ಮೈದಾನದಲ್ಲಿದ್ದ ಗುಜರಾತ್ ತಂಡದ ಅಭಿಮಾನಿಗಳೂ ಕೂಡ ಎದ್ದು ನಿಂತು ವೈಭವ್ ಸೂರ್ಯವಂಶಿಗೆ ಚಪ್ಪಾಳೆ ತಟ್ಟಿದರು.

ಮುರಿದ ಕಾಲೂ ಲೆಕ್ಕಿಸದೇ ಎದ್ದು ನಿಂತು ಚಪ್ಪಾಳೆ ತಟ್ಟಿದ Rahul Dravid

ಇದೇ ಸಂದರ್ಭದಲ್ಲಿ ರಾಜಸ್ತಾನ ತಂಡದ ಕೋಚ್ ರಾಹುಲ್ ದ್ರಾವಿಡ್ ಕೂಡ ತಮ್ಮ ಶಿಷ್ಯನ ಸಾಧನೆಯನ್ನು ಭಾವುಕರಾಗಿ ಸಂಭ್ರಮಿಸಿದರು. ಅತ್ತ ವೈಭವ್ ಸಿಕ್ಸರ್ ಮೂಲಕ ಶತಕ ಸಿಡಿಸುತ್ತಲೇ ತಮ್ಮ ಮುರಿದ ಕಾಲನ್ನೂ ಲೆಕ್ಕಿಸದ ರಾಹುಲ್ ದ್ರಾವಿಡ್ ಎದ್ದು ನಿಂತು ಹರ್ಷೋಧ್ಗಾರದಲ್ಲಿ ಚಪ್ಪಾಳೆ ತಟ್ಟಿ ಶಿಷ್ಯನನ್ನು ಹುರಿದುಂಬಿಸಿದರು. ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!