ವೈಭವ್ ಸೂರ್ಯ ವಂಶಿ ಮತ್ತು ನಿಕಿತಾ ಪೋಸ್ಟ್ 
ಕ್ರಿಕೆಟ್

ಕ್ರಿಕೆಟಿಗ Vaibhav Suryavanshi ಕುರಿತು ಅಶ್ಲೀಲ ಹೇಳಿಕೆ; ಮಹಿಳಾ Influencer ಮೇಲೆ POCSO ತೂಗುಗತ್ತಿ!

14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಮಹಿಳಾ Influencer ವೈಭವ್ ಸೂರ್ಯವಂಶಿ ವಿರುದ್ಧ ಅಶ್ಲೀಲ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸ್ಫೋಟಕ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ರಾಜಸ್ತಾನ ರಾಯಲ್ಸ್ ತಂಡದ ಬ್ಯಾಟರ್ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಹೇಳಿಕೆ ನೀಡಿದ ಆರೋಪದ ಮೇರೆಗೆ ಮಹಿಳಾ Influencer ಮೇಲೆ POCSO ತೂಗುಗತ್ತಿ ತೂಗುತ್ತಿದೆ.

ಹೌದು.. ನಿನ್ನೆ ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

ರಾಜಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಗುಜರಾತ್ ವಿರುದ್ಧದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ಜೈಸ್ವಾಲ್ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 70 ರನ್ ಸಿಡಿಸಿದರು. ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ ಬರೊಬ್ಬರಿ 11 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 101 ರನ್ ಗಳಿಸಿದರು.

ಅಶ್ಲೀಲ ಪೋಸ್ಟ್

ಈ ಶತಕದ ಬೆನ್ನಲ್ಲೇ ಇದೀಗ ಬಿಹಾರ ಮೂಲದ ಕೇವಲ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಇದರ ನಡುವೆಯೇ ಮಹಿಳಾ Influencer ವೈಭವ್ ಸೂರ್ಯವಂಶಿ ವಿರುದ್ಧ ಅಶ್ಲೀಲ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. Niuu_d ಎಂಬ ಎಕ್ಸ್ ಖಾತೆಯಲ್ಲಿ ನಿಕಿತಾ ಎಂಬ ಖಾತೆದಾರೆ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ್ದು, ಈ ಪೋಸ್ಟ್ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಪೋಸ್ಟ್ ನಲ್ಲಿ 'ವೈಭವ್ ಸೂರ್ಯವಂಶಿಯ ...... ಮೇಲೆ ನಾನೇ ಕುಳಿತುಕೊಳ್ಳುತ್ತೇನೆ' ಎಂದು ಬರೆದಿದ್ದು, ಈ ಪೋಸ್ಟ್ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಆಕ್ರೋಶ

ನಿಕಿತಾರ ಈ ಪೋಸ್ಟ್ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು ಇದೇ ರೀತಿಯ ಪೋಸ್ಟ್ ಅನ್ನು ಉಲ್ಟಾ ಮಾಡಿ ನೋಡಿ.. 14ರ ಬಾಲಕಿಯ ಕುರಿತು ಓರ್ವ ವ್ಯಕ್ತಿ ಹೀಗೆ ಹೇಳಿದ್ದರೆ ಅತನ ಪರಿಸ್ಥಿತಿ ಏನು... ಆತನ ವಿರುದ್ಧ POCSO ದಾಖಲಾಗುತ್ತಿತ್ತು. ಈ ಪೋಸ್ಟ್ ಮಾಡಿದ್ದು ಮಹಿಳೆ ಆದ್ದರಿಂದ ಅವರ ವಿರುದ್ಧ ಕ್ರಮವಿಲ್ಲ ಎಂದು ಹಲವರು ಕಿಡಿಕಾರಿದ್ದಾರೆ.https://x.com/Niuu_d/status/1917102995755463013

ಪೋಸ್ಟ್ ವೈರಲ್ ಬೆನ್ನಲ್ಲೇ ಪೋಸ್ಟ್ ಡಿಲೀಟ್, ಕ್ಷಮೆಯಾಚಿಸಿ ಖಾತೆ ಕೂಡ Deactivate

ಇನ್ನು ಈ ಪೋಸ್ಟ್ ವ್ಯಾಪಕ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಲೇ ನಿಕಿತಾ ವಿವಾದಿತ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದು ಅಲ್ಲದೇ ಎಕ್ಸ್ ಖಾತೆಯನ್ನೇ ಡಿಆ್ಯಕ್ಟಿವೇಟ್ ಮಾಡಿದ್ದಾರೆ. ಇದಕ್ಕೂ ಮೊದಲು ನಿಕಿತಾ ತನ್ನ ಕೃತ್ಯಕ್ಕೆ ಕ್ಷಮೆ ಯಾಚಿಸಿದ್ದು, 'ನಿನ್ನೆ ರಾತ್ರಿ ವೈಭವ್ ಸೂರ್ಯವಂಶಿ ಅದ್ಭುತ ಬ್ಯಾಟಿಂಗ್ ನೋಡಿ Excitement ನಲ್ಲಿ ಅಶ್ಲೀಲ ಪೋಸ್ಟ್ ಮಾಡಿದೆ. ಬಳಿಕ ಅದು ತಪ್ಪು.. ನನ್ನ ಕೃತ್ಯದಿಂದ ತುಂಬಾ ನಾಚಿಕೆಯಾಗಿದೆ.. ಕ್ಷಮೆಯಾಚಿಸುತ್ತಿದ್ದೇನೆ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ