ವೈಭವ್ ಸೂರ್ಯವಂಶಿ 
ಕ್ರಿಕೆಟ್

ಪದಗಳಲ್ಲಿ ವರ್ಣಿಸಲು ಅಸಾಧ್ಯ: 14 ವರ್ಷದ ವೈಭವ್ ಸೂರ್ಯವಂಶಿ ಆಟದ ಬಗ್ಗೆ RR ನಾಯಕ ರಿಯಾನ್ ಪರಾಗ್

ವೈಭವ್ ಸೂರ್ಯವಂಶಿಯವರ ಬ್ಯಾಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ರಿಯಾನ್ ಪರಾಗ್, ಇದೊಂದು ಅದ್ಭುತ ಅದ್ವಿತೀಯ. ನಾವು ಎರಡು ತಿಂಗಳು ಆತನ ಜೊತೆಗೆ ಕಳೆದಿದ್ದೆವು.

ಜೈಪುರ: ಐಪಿಎಲ್ ಟೂರ್ನಿಯಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಪ್ರಬಲ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ತಾನ ರಾಯಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ರಾಜಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಗುಜರಾತ್ ವಿರುದ್ಧದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ಜೈಸ್ವಾಲ್ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 70 ರನ್ ಸಿಡಿಸಿದರು.

ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ 14 ವರ್ಷದ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲೇ ದಾಖಲೆಯ ಶತಕ ಸಿಡಿಸಿದರು.

ವೈಭವ್ ಸೂರ್ಯವಂಶಿಯವರ ಬ್ಯಾಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ರಿಯಾನ್ ಪರಾಗ್, ಇದೊಂದು ಅದ್ಭುತ ಅದ್ವಿತೀಯ. ನಾವು ಎರಡು ತಿಂಗಳು ಆತನ ಜೊತೆಗೆ ಕಳೆದಿದ್ದೆವು. ಆತನ ಬಗ್ಗೆ ವಿಶ್ವಾಸವಿತ್ತು. ಆದರೆ ಇಂದು ವಿಶ್ವದರ್ಜೆಯ ಬೌಲರ್ ಗಳ ವಿರುದ್ಧ ತೋರಿಸಿದ ಅದ್ಭುತ ಪ್ರದರ್ಶನವನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದರು.

ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಓಪನರ್​ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅತ್ಯಮೂಲ್ಯವಾದ ಸೆಂಚುರಿ ಬಾರಿಸುವ ಮೂಲಕ ಆರ್​ಆರ್​ ಸುಲಭ ಜಯಗಳಿಸಿದೆ. ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತಿ ಕಿರಿಯ ವಯಸ್ಸಿನ ಪ್ಲೇಯರ್​ ಒಬ್ಬರು ಶತಕ ಬಾರಿಸಿರುವುದು ದಾಖಲೆ ಪಟ್ಟಿಗೆ ಸೇರಿದೆ.

15.5 ಓವರ್ ಗಳಲ್ಲಿ 210 ರನ್ ಗಳನ್ನು ತಂಡ ಬೆನ್ನಟ್ಟಿದರೂ ಕೂಡ ಬಹಳ ಬೇಗನೆ ಆಟ ಮುಗಿಸುವ ಪ್ರಯತ್ನದಲ್ಲಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT