PBKS ವಿರುದ್ಧ CSK ಗೆ ಸೋಲು 
ಕ್ರಿಕೆಟ್

IPL 2025: PBKS ವಿರುದ್ಧ CSK ಸೋಲು; ತವರಿನಲ್ಲಿ ಸತತ 5ನೇ ಪರಾಜಯ; ಐಪಿಎಲ್ ಟೂರ್ನಿಯಿಂದಲೇ MS Dhoni ಪಡೆ ಹೊರಕ್ಕೆ!

ಪಂಜಾಬ್ ಪರ ಪ್ರಭ್ ಸಿಮ್ರನ್ ಸಿಂಗ್ (54 ರನ್) ಮತ್ತು ನಾಯಕ ಶ್ರೇಯಸ್ ಅಯ್ಯರ್ (72 ರನ್) ಭರ್ಜರಿ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

ಚೆನ್ನೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸೋಲಿನ ಸರಪಳಿ ಮುಂದುವರೆದಿದ್ದು, ಇಂದು ಪಂಜಾಬ್ ಕಿಂಗ್ಸ್ ವಿರುದ್ಧವೂ 4 ವಿಕೆಟ್ ಅಂತರದಲ್ಲಿ ಸೋಲು ಕಂಡು ಟೂರ್ನಿಯಿಂದಲೇ ಹೊರಬಿದ್ದಿದೆ.

ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆ ಮೂಲಕ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಆಲೌಟ್ ಆಯಿತು.

ಆ ಮೂಲಕ ಪಂಜಾಬ್ ಕಿಂಗ್ಸ್ ಗೆ ಗೆಲ್ಲಲು 191 ರನ್ ಗಳ ಬೃಹತ್ ಗುರಿ ನೀಡಿತು. ಈ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 194 ರನ್ ಪೇರಿಸಿ 4 ವಿಕೆಟ್ ಅಂತರದಲ್ಲಿ ಜಯಭೇರಿ ಭಾರಿಸಿತು.

ಪಂಜಾಬ್ ಪರ ಪ್ರಭ್ ಸಿಮ್ರನ್ ಸಿಂಗ್ (54 ರನ್) ಮತ್ತು ನಾಯಕ ಶ್ರೇಯಸ್ ಅಯ್ಯರ್ (72 ರನ್) ಭರ್ಜರಿ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು. ಅಂತೆಯೇ ಬೌಲಿಂಗ್ ನಲ್ಲಿ ಒಂದೇ ಓವರ್ ನಲ್ಲಿ ಹ್ಯಾಟ್ರಿಕ್ ಸಹಿತ 4 ವಿಕೆಟ್ ಪಡೆದ ಯುಜುವೇಂದ್ರ ಚಹಲ್ ಪಂಜಾಬ್ ಗೆಲುವಿನ ರೂವಾರಿಯಾದರು.

ತವರಿನಲ್ಲಿ ಸತತ 5ನೇ ಪರಾಜಯ

ಇನ್ನು ಈ ಪಂದ್ಯದ ಸೋಲಿನೊಂದಿಗೆ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತವರಿನಲ್ಲಿ ಸತತ 5ನೇ ಸೋಲು ಕಂಡಂತಾಗಿದೆ. ಹಾಲಿ ಟೂರ್ನಿಯ ತನ್ನ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಗಳಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಳಿಕ ಚೆಪಾಕ್ ನಲ್ಲಿ ನಡೆದ ಎಲ್ಲ ಐದೂ ಪಂದ್ಯಗಳಲ್ಲಿ ಸೋತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ದ ಆರಂಭವಾದ ಸೋಲಿನ ಸರಪಳಿ, ಬಳಿಕ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಈಗ ಪಂಜಾಬ್ ಕಿಂಗ್ಸ್ ವಿರುದ್ಧವೂ ಸೋತಿದೆ.

ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದ MS Dhoni ಪಡೆ!

ಇನ್ನು ಇಂದಿನ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಹಾಲಿ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದೆ. ಸಿಎಸ್ ಕೆ ಈ ವರೆಗೂ 10 ಪಂದ್ಯಗಳನ್ನಾಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಜಯಗಳಿಸಿದೆ. 8 ಪಂದ್ಯಗಳಲ್ಲಿ ಸೋತು ಕೇವಲ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಚೆನ್ನೈ ಹಾಲಿ ಟೂರ್ನಿಯಲ್ಲಿ ಇನ್ನೂ ನಾಲ್ಕು ಪಂದ್ಯಗಳನ್ನಾಡಲಿದ್ದು ಈ ನಾಲ್ಕೂ ಪಂದ್ಯಗಳನ್ನೂ ಗೆದ್ದರೂ ಅದರ ಅಂಕಗಳಿಕೆ 12 ಆಗುತ್ತದೆ. ಹೀಗಾಗಿ ಹಾಲಿ ಟೂರ್ನಿಯಲ್ಲಿ ಚೆನ್ನೈ ಪ್ಲೇಆಫ್ ಗೇರುವುದು ಅಸಾಧ್ಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT