ಯಶಸ್ವಿ ಜೈಸ್ವಾಲ್ 
ಕ್ರಿಕೆಟ್

Ind vs Eng: ಭಾರತಕ್ಕೆ ಜೈಸ್ವಾಲ್ ಆಪದ್ಬಾಂಧವ; 6ನೇ 'ಯಶಸ್ವಿ' ಟೆಸ್ಟ್ ಶತಕ, ವಿಶ್ವದಾಖಲೆ ಮುರಿದ ಟೀಂ ಇಂಡಿಯಾ!

ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಿರ್ಣಾಯಕ ಘಟದತ್ತ ಸಾಗಿದ್ದು, 3ನೇ ದಿನದಾಟದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ.

ಲಂಡನ್: ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಿರ್ಣಾಯಕ ಘಟದತ್ತ ಸಾಗಿದ್ದು, 3ನೇ ದಿನದಾಟದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ನಾಲ್ಕು ವಿಕೆಟ್ ಕಳೆದುಕೊಂಡಿರುವ ತಂಡಕ್ಕೆ ಆಸರೆಯಾಗಿದ್ದಾರೆ.

ಯುವ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಟೆಸ್ಟ್ ಪಂದ್ಯದಲ್ಲಿ ತಮ್ಮ ನಾಲ್ಕನೇ ಶತಕ ಬಾರಿಸುವ ಮೂಲಕ ಇಂಗ್ಲೆಂಡ್ ಮೇಲಿನ ತಮ್ಮ ಆಧಿಪತ್ಯವನ್ನು ಮುಂದುವರೆಸಿದ್ದಾರೆ. 24 ವರ್ಷದ ಜೈಸ್ವಾಲ್ ಇನ್ನಿಂಗ್ಸ್‌ನ 51ನೇ ಓವರ್‌ನಲ್ಲಿ ಶತಕ ಗಳಿಸಿದರು. ಇದು ಆಟದ ಅತ್ಯಂತ ದೀರ್ಘ ಸ್ವರೂಪದಲ್ಲಿ ಜೈಸ್ವಾಲ್ ಅವರ ಆರನೇ ಶತಕವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಜೈಸ್ವಾಲ್ ತಮ್ಮ ವಿಕೆಟ್ ಅನ್ನು ಅಗ್ಗವಾಗಿ ಕಳೆದುಕೊಂಡರು. ಆದಾಗ್ಯೂ, ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿ, ಓವಲ್‌ನಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಭಾರತದ ಸ್ಥಾನವನ್ನು ಗಟ್ಟಿಗೊಳಿಸಿದರು.

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು 12 ಶತಕಗಳನ್ನು ಗಳಿಸಿದ್ದಾರೆ. ಇದು ಒಂದೇ ಟೆಸ್ಟ್ ಸರಣಿಯಲ್ಲಿ ಭಾರತ ದಾಖಲಿಸಿದ ಅತಿ ಹೆಚ್ಚು ಶತಕವಾಗಿದ್ದು, 1978 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಯಲ್ಲಿ 11 ಶತಕಗಳ ಹಿಂದಿನ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT