ಸಿಎಂ ಸಿದ್ದರಾಮಯ್ಯ 
ಕ್ರಿಕೆಟ್

ಬೆಂಗಳೂರಿನಲ್ಲಿ ಮತ್ತೊಂದು ಸ್ಟೇಡಿಯಂ: 80,000 ಆಸನ ಸಾಮರ್ಥ್ಯದ ಕ್ರೀಡಾಂಗಣಕ್ಕೆ ಸಿಎಂ ಅನುಮೋದನೆ

ಬೊಮ್ಮಸಂದ್ರದಲ್ಲಿ ತಲೆ ಎತ್ತಲಿರುವ ಈ ಸ್ಟೇಡಿಯಂ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ.

ಬೆಂಗಳೂರಿನ ಬೊಮ್ಮಸಂದ್ರದ ಸೂರ್ಯ ನಗರದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಹೊಂದಿರುವ ವಿಶ್ವ ದರ್ಜೆಯ ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕರ್ನಾಟಕ ವಸತಿ ಮಂಡಳಿ(ಕೆಎಚ್‌ಬಿ)ಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಅನುಮೋದನೆ ನೀಡಿದ್ದಾರೆ.

ಬೊಮ್ಮಸಂದ್ರದಲ್ಲಿ ತಲೆ ಎತ್ತಲಿರುವ ಈ ಸ್ಟೇಡಿಯಂ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ನರೇಂದ್ರ ಮೋದಿ ಸ್ಟೇಡಿಯಂ 1,32,000 ಪ್ರೇಕ್ಷಕರಿಗೆ ಸ್ಥಳಾವಕಾಶ ಕಲ್ಪಿಸುತ್ತದೆ.

ಒಟ್ಟು 1,650 ಕೋಟಿ ರೂಪಾಯಿ ಯೋಜನೆಗೆ ರಾಜ್ಯ ಸರ್ಕಾರದ ಆರ್ಥಿಕ ಬೆಂಬಲವಿಲ್ಲದೆ ಕೆಎಚ್‌ಬಿ ಸಂಪೂರ್ಣವಾಗಿ ಹಣವನ್ನು ನೀಡುತ್ತದೆ. ಪ್ರಸ್ತಾವಿತ ಕ್ರೀಡಾ ಸಂಕೀರ್ಣ 100 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದ್ದು, ಇದು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಿಗೆ ಅವಕಾಶ ಕಲ್ಪಿಸುತ್ತದೆ.

ಕ್ರಿಕೆಟ್ ಕ್ರೀಡಾಂಗಣದ ಜೊತೆಗೆ, ಇದು ಎಂಟು ಒಳಾಂಗಣ ಮತ್ತು ಎಂಟು ಹೊರಾಂಗಣ ಕ್ರೀಡೆಗಳು, ಅತ್ಯಾಧುನಿಕ ಜಿಮ್‌, ತರಬೇತಿ ಕೇಂದ್ರ, ಈಜುಕೊಳ, ಅತಿಥಿ ಗೃಹಗಳು, ಹಾಸ್ಟೆಲ್‌ಗಳು, ತ್ರೀ-ಸ್ಟಾರ್ ಮತ್ತು ಫೈವ್-ಸ್ಟಾರ್ ಹೋಟೆಲ್‌ಗಳು ಹಾಗೂ ಅಂತರರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವಿರುವ ಸಮಾವೇಶ ಸಭಾಂಗಣವನ್ನು ಒಳಗೊಂಡಿರುತ್ತದೆ.

ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಪ್ರತಿಸ್ಪರ್ಧಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣವು ಪ್ರಸ್ತುತ 1,32,000 ಆಸನಗಳ ಸಾಮರ್ಥ್ಯವನ್ನು ಹೊಂದಿದ್ದು, ಮುಂಬರುವ ಬೆಂಗಳೂರು ಕ್ರೀಡಾಂಗಣವು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಲಿದೆ. ಈಡನ್ ಗಾರ್ಡನ್ಸ್ (68,000) ನಂತಹ ಸಾಂಪ್ರದಾಯಿಕ ಮೈದಾನಗಳನ್ನು ಇದು ಮೀರಿಸುತ್ತದೆ. ಈ ಸ್ಟೇಡಿಯಂ ಅಭಿಮಾನಿಗಳಿಗೆ ಸಾಟಿಯಿಲ್ಲದ ಅನುಭವ ನೀಡುವುದಲ್ಲದೆ, ಭವಿಷ್ಯದಲ್ಲಿ ಐಸಿಸಿ ಫೈನಲ್‌ಗಳನ್ನು ಆಯೋಜಿಸಲು ಪ್ರಮುಖ ಸ್ಟೇಡಿಯಂ ಆಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT